ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gauribidanur News: ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಜವಾಬ್ದಾರಿ ವಹಿಸಿ: ಎನ್. ಎಚ್.ಶಿವಶಂಕರರೆಡ್ಡಿ ಕರೆ

ತಾಲ್ಲೂಕಿನ ಹೊಸೂರಿನ ಬಲಿಜಗರ ಕಲ್ಯಾಣ ಮಂಟಪದಲ್ಲಿ ಗೌರಿಬಿದನೂರು ವಿಧಾನಸಭಾ ಮತ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ನಡೆ ಮತ ರಕ್ಷಣೆಯ ಕಡೆ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಿಎಲ್‌ಎ ಗಳ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ಕರ್ನಾಟಕದಲ್ಲೂ ಈ ಪ್ರಕ್ರಿಯೆ ಪ್ರಾರಂಭವಾಗಿದೆ.

ಗೌರಿಬಿದನೂರು: ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕೆಂದು ಮಾಜಿ ಸಚಿವರು ಹಾಗೂ ಡಾ.ಎಚ್ಚೆನ್ ಪ್ರಾಧಿಕಾರದ ಅಧ್ಯಕ್ಷ ಎನ್. ಎಚ್.ಶಿವಶಂಕರರೆಡ್ಡಿ ಕರೆ ನೀಡಿದರು.

ತಾಲ್ಲೂಕಿನ ಹೊಸೂರಿನ ಬಲಿಜಗರ ಕಲ್ಯಾಣ ಮಂಟಪದಲ್ಲಿ ಗೌರಿಬಿದನೂರು ವಿಧಾನಸಭಾ ಮತಕ್ಷೇತ್ರದಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ನಡೆ ಮತ ರಕ್ಷಣೆಯ ಕಡೆ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಿಎಲ್‌ಎ ಗಳ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ದ ಅವರು, ಕೆಲವು ರಾಜ್ಯಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ಕರ್ನಾಟಕದಲ್ಲೂ ಈ ಪ್ರಕ್ರಿಯೆ ಪ್ರಾರಂಭವಾಗಿದೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ಹೊತ್ತಿದೆ, ಯಾರೊಬ್ಬರ ಹೆಸರೂ ಮತದಾರರ ಪಟ್ಟಿಯಿಂದ ಅನಗತ್ಯವಾಗಿ ಕೈಬಿಟ್ಟು ಹೋಗದಂತೆ ಎಂದರು. ನೋಡಿಕೊಳ್ಳುವುದು ಪಕ್ಷದ ಪ್ರತಿಯೊಬ್ಬರ ಹೊಣೆ. ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯ ಮಂತ್ರಿಗಳು ಈ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಿದಾರೆ. ನಮ್ಮ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆಯ ಮಹತ್ವದ ಕೆಲಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಹಾಗೂ ಯಾವುದೇ ಮತಗಳು ಕೈ ತಪ್ಪದಂತೆ ಎಚ್ಚರಿಕೆ ವಹಿಸಲು 'ಜಾಗೃತಿ ಕರ್ನಾಟಕ' ತಂಡದ ಸಹಯೋಗದೊಂದಿಗೆ 'ಕಾಂಗ್ರೆಸ್ ನಡೆ - ಮತ ರಕ್ಷಣೆ ಕಡೆ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: Gauribidanur News: ಶಾಲಾ ಸಂಸತ್ ಚುನಾವಣೆ

ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಈ ಕಾರ್ಯಕ್ರಮ ಇದೀಗ ನಡೆಸಲು ಯಶಸ್ವಿಯಾಗಿ ನಡೆಯುತ್ತಿದ್ದು, ಗೌರಿಬಿದನೂರಿನಲ್ಲೂ ಅಚ್ಚುಕಟ್ಟಾಗಿ ನಿರ್ಧರಿಸಲಾಗಿದೆ. ಈ ಪರಿಷ್ಕರಣಾ ಕಾರ್ಯಕ್ರಮದಲ್ಲಿ ಶ್ರದ್ದೆಯಿಂದ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಪಕ್ಷದ ಎಲ್ಲಾ ಮುಖಂಡರು ಹಾಗೂ ಬಿಎಲ್‌ಎ ಗಳಿಗೆ ಸೂಚಿಸಲಾಗಿದೆ. ಯಾರೊಬ್ಬರ ಮತವೂ ಹೋಗದಂತೆ ಎಚ್ಚರ ವಹಿಸು ವುದು ಮತ್ತು ಮತದಾರರ ಪಟ್ಟಿಯಲ್ಲಿ ಕಂಡುಬರುವ ವ್ಯತ್ಯಾಸಗಳನ್ನು ಸರಿಪಡಿಸಲು ಅಗತ್ಯ ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮಗಳಾಗದಂತೆ ತಡೆಯಲು ಹಾಗೂ ಮತದಾರರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಮತದಾರರ ಹಿತ ಕಾಯಲು ಕಾಂಗ್ರೆಸ್ ಪಕ್ಷ ಪಣತೊಟ್ಟಿದೆ. ಯಾವುದೇ ಮತದಾರನೂ ಮತದಾನದಿಂದ ವಂಚಿತ ನಾಗಬಾರದು ಎಂಬುದು ನಮ್ಮ ಆಶಯ. ಪ್ರತಿಯೊಂದು ಬೂತ್ ಮಟ್ಟದಲ್ಲಿ ಬಿಎಲ್ ಎ-2 ಕಾರ್ಯಕರ್ತರನ್ನು ನೇಮಿಸಲಾಗಿದೆ. ಇವರು ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ನಡೆಸುವರು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಲಾಗುವುದು.

ಬಿಎಲ್‌ಒ ಅಧಿಕಾರಿಗಳಿಗೆ ತಾರತಮ್ಯ ಎಸಗದಂತೆ ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಬಿಎಲ್ ಎ-2 ಕಾರ್ಯಕರ್ತರು ಅಧಿಕಾರಿಗಳೊಂದಿಗೆ ಸಹಕರಿಸಿ, ಮತದಾರರಿಗೆ ಅನ್ಯಾಯವಾಗ ದಂತೆ ನೋಡಿಕೊಳ್ಳುವರು ದಾಖಲೆಗಳನ್ನು ಒದಗಿಸುವುದು ನಮ್ಮ ಪ್ರಮುಖ ಗುರಿಯಾಗಿದೆ. ಪ್ರತಿ ಬೂತ್ ಮಟ್ಟದಲ್ಲಿಯೂ ಸ್ಥಳೀಯ ಮುಖಂಡರು ಬಿಎಲ್‌ಗಳ ಜೊತೆಗೆ, ಬ್ಲಾಕ್ ಮಟ್ಟದ ಅಧಿಕಾರಿ ಗಳ (BLO) ಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲಿದ್ದಾರೆ.

ಈ ಪ್ರಕ್ರಿಯೆಯು ಮೂರು ತಿಂಗಳುಗಳ ಕಾಲ ಅಂದರೆ ಸೆಪ್ಟೆಂಬರ್ ವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಹೆಚ್ಚಿನ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಎಲ್ಲಾ ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಮಾತನಾಡಿ, ಮತದಾರರ ಹಕ್ಕುಗಳ ರಕ್ಷಣೆಗೆ ಕಾಂಗ್ರೆಸ್ ಸಜ್ಜಾಗಿದೆ. ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ಎಚ್ಚರವಹಿಸಲು ಮತ್ತು ಅವರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಹಮ್ಮಿಕೊಂಡಿರುವ 'ಕಾಂಗ್ರೆಸ್ ನಡೆ ಮತ ರಕ್ಷಣೆ ಕಡೆ' ಕಾರ್ಯಕ್ರಮವನ್ನು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸ ಲಾಗುತ್ತಿದೆ, ಇದೇ ವೇಳೆ ಕಾರ್ಯಕ್ರಮದಲ್ಲಿ ಜಿ. ಪಂ. ಮಾಜಿ ಅಧ್ಯಕ್ಷ ಎಚ್.ವಿ.ಮಂಜುನಾಥ್, ಅಶ್ವತ್ಥನಾರಾಯಣಗೌಡ, ಪ್ರಕಾಶ್ ರೆಡ್ಡಿ, ಜೀಲಾಕುಂಟೆ ಗಂಗಾಧರಪ್ಪ, ಗಿರೀಶ್ ರೆಡ್ಡಿ, ನಾಗೇಶ್, ತಾರಾನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದರು.