Gudibande News: ಆಧುನಿಕತೆ, ನಗರೀಕರಣ ಹೆಸರಿನಲ್ಲಿ ಪರಿಸರ ನಾಶ ಸರಿಯಲ್ಲ: ನ್ಯಾ.ಪ್ರೇಮ್ ಕುಮಾರ್
ಪ್ರಪಂಚ ದಿನೇ ದಿನೇ ವೇಗವಾಗಿ ಬೆಳೆಯುತ್ತಿದೆ. ಈ ಹಿಂದೆ ಸಾಕಷ್ಟು ಅರಣ್ಯ ಪ್ರದೇಶವನ್ನು ನಾವು ಕಾಣುತ್ತಿದ್ದೆವು. ಇದೀಗ ಎಲ್ಲಿ ನೋಡಿದರೂ ಕಟ್ಟಡಗಳು ಕಾಣಿಸುತ್ತವೆ. ಪರಿಸರ ನಾಶದಿಂದ ಈಗಾಗಲೇ ನಾವು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಈಗಲಾದರೂ ನಾವು ಎಚ್ಚೆತ್ತುಕೊಂಡು ಪರಿಸರ ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು.
ಪಟ್ಟಣದ ಹೊರವಲಯದ ಜೆ.ಎಂ.ಎಫ್.ಸಿ ನ್ಯಾಯಾಲಯದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. -
ಗುಡಿಬಂಡೆ: ದಿನೇ ದಿನೇ ನಗರೀಕರಣ, ಆಧುನಿಕತೆ ಹೆಸರಿನಲ್ಲಿ ಪರಿಸರ ಹಂತ ಹಂತವಾಗಿ ನಾಶ ವಾಗುತ್ತಿದೆ. ಇದರಿಂದಾಗಿ ಮುಂದಿನ ಪೀಳಿಗೆ ಸಾಕಷ್ಟು ಸಮಸ್ಯೆಗೆ ಸಿಲುಕಲಿದ್ದು, ಭೂಮಿಯ ಮೇಲಿನ ಬುದ್ದಿವಂತರಾದ ನಾವುಗಳು ಪರಿಸರವನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಹೆಜ್ಜೆಯಿಡ ಬೇಕೆಂದು ಜೆ.ಎಂ.ಎಫ್.ಸಿ ಹಿರಿಯ ಶ್ರೇಣಿ ನ್ಯಾಯಾಧೀಶ ಪ್ರೇಮ್ ಕುಮಾರ್ ತಿಳಿಸಿದರು.
ಪಟ್ಟಣದ ಹೊರವಲಯದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪ್ರಾದೇಶಿಕ ಅರಣ್ಯ ವಲಯ, ಸಾಮಾಜಿಕ ಅರಣ್ಯ ವಲಯ, ಹಾಗೂ ಇತರೆ ಸರ್ಕಾರಿ ಇಲಾಖೆಗಳು ಇವರು ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ(World Environment Day) ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: Gudibande News: ಗುಡಿಬಂಡೆ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ; ಜನರ ಸಮಸ್ಯೆ ಆಲಿಸಿದ ಜಿ.ಪ್ರಭು
ಪ್ರಪಂಚ ದಿನೇ ದಿನೇ ವೇಗವಾಗಿ ಬೆಳೆಯುತ್ತಿದೆ. ಈ ಹಿಂದೆ ಸಾಕಷ್ಟು ಅರಣ್ಯ ಪ್ರದೇಶವನ್ನು ನಾವು ಕಾಣುತ್ತಿದ್ದೆವು. ಇದೀಗ ಎಲ್ಲಿ ನೋಡಿದರೂ ಕಟ್ಟಡಗಳು ಕಾಣಿಸುತ್ತವೆ. ಪರಿಸರ ನಾಶದಿಂದ ಈಗಾಗಲೇ, ನಾವು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಈಗಲಾದರೂ ನಾವು ಎಚ್ಚೆತ್ತು ಕೊಂಡು ಪರಿಸರ ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಫುರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಐದು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮ ಯೋಜಿಸಿದ್ದು, ಆ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಎಲ್ಲರೂ ಈ ಒಳ್ಳೆಯ ಕಾರ್ಯಕ್ಕೆ ಕೈ ಜೋಡಿಸಬೇಕೆಂದರು.
ಕಾರ್ಯಕ್ರಮದ ಅಂಗವಾಗಿ ನ್ಯಾಯಾಲಯದ ಆವರಣ, ಬೀಚಗಾನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಕಾಳಜಿ ಹಾಗೂ ಪರಿಸರದ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.
ಈ ಸಮಯದಲ್ಲಿ ವಕೀಲರ ಸಂಘದ ಅಧ್ಯಕ್ಷ ಅಶ್ವತ್ಥ್ ರೆಡ್ಡಿ, ಗ್ರೇಡ್ ೨ ತಹಸೀಲ್ದಾರ್ ತುಳಸಿ, ಸರ್ಕಾರಿ ಅಭಿಯೋಜಕ ರಾಮಮೂರ್ತಿ, ವಕೀಲರ ಸಂಘದ ಕಾರ್ಯದರ್ಶಿ ಮಂಜುನಾಥ, ಖಜಾಂಚಿ ಬಾಬು, ಹಿರಿಯ ವಕೀಲರಾದ ರಾಮನಾಥರೆಡ್ಡಿ, ಪ್ರಕಾಶ್, ಶಿವಾನಂದರೆಡ್ಡಿ, ಜಿ.ವಿ.ವಿಶ್ವ ನಾಥ್, ನಂದೀಶ್ವರರೆಡ್ಡಿ, ನರಸಿಂಹಪ್ಪ, ನರೇಂದ್ರ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರಾಜಶೇಖರ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಪೀರ್ ಸಾಹೇಬ್, ನ್ಯಾಯಾಲಯದ ಸಿಬ್ಬಂದಿ ಯಾದ ಶ್ರೀನಿವಾಸ, ಸತೀಶ್ ಸೇರಿದಂತೆ ಹಲವರು ಇದ್ದರು.