ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಎಂ ಸಿ ಸುಧಾಕರ್

ಹೈಕಮಾಂಡ್ ಯಾವ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಂಡಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಮಾಹಿತಿಯಿಲ್ಲದೆ ಮಾತನಾಡುವುದು ಸರಿಯಲ್ಲ. ಆದರೂ ಪಕ್ಷದ ಶಿಸ್ತಿಗೆ ಗೌರವ ನೀಡುವ ಜೊತೆಗೆ, ಉಂಟಾಗಿರುವ ಗೊಂದಲಗಳನ್ನು ಸರಿಪಡಿಸಿಕೊಳ್ಳುವ ಬಗ್ಗೆ ಹಿರಿಯರೊಂದಿಗೆ ಚರ್ಚಿಸುತ್ತೇವೆ

ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಎಂ ಸಿ ಸುಧಾಕರ್

-

Profile
Ashok Nayak Apr 16, 2026 9:51 PM

ಚಿಂತಾಮಣಿ : ಪಕ್ಷದ ಶಿಸ್ತು ಮತ್ತು ಹೈಕಮಾಂಡ್‌ನ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ಇತ್ತೀಚಿನ ರಾಜಕೀಯ ನಿರ್ಧಾರಗಳ ಕುರಿತು ಪ್ರತಿಕ್ರಿಯಿಸಿದರು.

ನಸೀರ್ ಅಹಮದ್ ಅವರು ನಮಗೆ ಅತ್ಯಂತ ಆಪ್ತರು. ಮುರುಗಮಲ್ಲ ದರ್ಗಾ ವಿಚಾರ ಸೇರಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳಲ್ಲಿ ಅವರ ಕೊಡುಗೆ ಅಪಾರ.ಅವರ ಜೊತೆಗೆ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದೇವೆ ಎಂದು ನಜೀರ್ ಅಹಮದ್ ಅವರೊಂದಿಗಿನ ತಮ್ಮ ಸುದೀರ್ಘ ಸಂಬಂಧ ವನ್ನು ಸರಿಸಿದರು.

ಇದನ್ನೂ ಓದಿ: Dr. M.C. Sudhakar: ಸುಸಜ್ಜಿತ ನಗರ ನಿರ್ಮಾಣಕ್ಕೆ “ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರ” ಸಹಾಯಕಾರಿ: ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್

ಹೈಕಮಾಂಡ್ ಯಾವ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಂಡಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಮಾಹಿತಿಯಿಲ್ಲದೆ ಮಾತನಾಡುವುದು ಸರಿಯಲ್ಲ. ಆದರೂ ಪಕ್ಷದ ಶಿಸ್ತಿಗೆ ಗೌರವ ನೀಡುವ ಜೊತೆಗೆ, ಉಂಟಾಗಿರುವ ಗೊಂದಲಗಳನ್ನು ಸರಿಪಡಿಸಿಕೊಳ್ಳುವ ಬಗ್ಗೆ ಹಿರಿಯರೊಂದಿಗೆ ಚರ್ಚಿಸುತ್ತೇವೆ ಎಂದರು.

ನಜೀರ್ ಅಹ್ಮದ್ ಅವರ ಮನೆಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ ಸಚಿವರು,ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ಹೆಜ್ಜೆಗಳನ್ನು ಇಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.