ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

ಗಾಂಧೀಜಿಯವರ ಕನಸನ್ನು ನನಸು ಮಾಡಲು ಪ್ರತಿಯೊಬ್ಬರೂ ಸಹಕರಿಸಬೇಕು

ಗಾಂಧೀಜಿಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದ್ದರು. ಇಡೀ ದೇಶವೆಲ್ಲಾ ಸ್ವಚ್ಛವಾಗಿರಬೇಕು ಎಂಬ ಕನಸು ಕಂಡಿದ್ದರು. ಅವರ ಕನಸನ್ನು ನಾವೆಲ್ಲರೂ ನನಸು ಮಾಡಿ ಅವರಿಗೆ ನಿಜವಾದ ಅರ್ಥದಲ್ಲಿ ಗೌರವ ಸಲ್ಲಿಸಬೇಕಿದೆ. ನಾವು ವಾಸಿಸುವ ಸುತ್ತಮುತ್ತಲ ಪರಿಸರ ಶುಚಿತ್ವದಿಂದ ಕೂಡಿ ದ್ದಾಗ ಮಾತ್ರ ಲವಲವಿಕೆಯಿಂದ ಕ್ರಿಯಾಶೀಲರಾಗಿ ಕೆಲಸ ಮಾಡಿ ಆರೋಗ್ಯವಾಗಿರಲು ಸಾಧ್ಯ

ಹಸಿ ಕಸ ಮತ್ತು ಒಣ ಕಸ ಪ್ರತ್ಯೇಕಿಸಿ ವಿಲೇವಾರಿಗೆ ಸಹಕರಿಸಿ: ನ್ಯಾ.ನೇರಳೆ ವೀರಭದ್ರಯ್ಯ ಭವಾನಿ

ಹಸಿ ಕಸ ಮತ್ತು ಒಣ ಕಸ ಪ್ರತ್ಯೇಕಿಸಿ ವಿಲೇವಾರಿಗೆ ಸಹಕರಿಸಿ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ ತಿಳಿಸಿದರು.

Profile Ashok Nayak Jan 30, 2025 11:24 PM

ಚಿಕ್ಕಬಳ್ಳಾಪುರ : ದೇಶದೆಲ್ಲೆಡೆ ಸ್ವಚ್ಛತೆ ಇರಬೇಕು ಎಂಬುದು ಮಹಾತ್ಮ ಗಾಂಧೀಜಿಯವರ ಮಹ ತ್ವದ ಕನಸಾಗಿತ್ತು, ಈ ಹಿನ್ನೆಲೆಯಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ನಗರಸಭೆ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ತ್ಯಾಜ್ಯ ವಿಲೇವಾರಿ ವಾಹನಗಳಿಗೆ ನೀಡುವ ಮೂಲಕ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ ಗಾಂಧೀಜಿಯವರ ಕನಸನ್ನು ನನಸು ಮಾಡಲು ಪ್ರತಿಯೊಬ್ಬರೂ ಸಹಕರಿಸ ಬೇಕು ಎಂದು ಗೌರವಾನ್ವಿತ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ ಅವರು ಮನವಿ ಮಾಡಿದರು.

ಹುತಾತ್ಮರ ದಿನದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ನಗರಸಭೆ ಸಹಯೋಗದಲ್ಲಿ ಇಂದು ಚಿಕ್ಕಬಳ್ಳಾಪುರ ನಗರದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿಯ ಆವರಣದಲ್ಲಿ ಹಮ್ಮಿಕೊಂಡಿದ್ದ "ರಾಷ್ಟ್ರೀಯ ಸ್ವಚ್ಛತಾ ರ‍್ಯಕ್ರಮ"ಕ್ಕೆ ಮಾವಿನ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಗಾಂಧೀಜಿಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದ್ದರು. ಇಡೀ ದೇಶವೆಲ್ಲಾ ಸ್ವಚ್ಛವಾಗಿರಬೇಕು ಎಂಬ ಕನಸು ಕಂಡಿದ್ದರು. ಅವರ ಕನಸನ್ನು ನಾವೆಲ್ಲರೂ ನನಸು ಮಾಡಿ ಅವರಿಗೆ ನಿಜವಾದ ಅರ್ಥ ದಲ್ಲಿ ಗೌರವ ಸಲ್ಲಿಸಬೇಕಿದೆ. ನಾವು ವಾಸಿಸುವ ಸುತ್ತಮುತ್ತಲ ಪರಿಸರ ಶುಚಿತ್ವದಿಂದ ಕೂಡಿ ದ್ದಾಗ ಮಾತ್ರ ಲವಲವಿಕೆಯಿಂದ ಕ್ರಿಯಾಶೀಲರಾಗಿ ಕೆಲಸ ಮಾಡಿ ಆರೋಗ್ಯವಾಗಿರಲು ಸಾಧ್ಯ. ಆದ್ದರಿಂದ ಕಸವನ್ನು ಮನೆಯಿಂದಲೇ ಅಂದರೆ ಮೂಲದಲ್ಲೇ ಹಸಿ ಮತ್ತು ಒಣಕಸವನ್ನಾಗಿ ಬೇರ್ಪಡಿಸಿ ನಗರಸಭೆಯ ಕಸಸಂಗ್ರಹ ವಾಹನಕ್ಕೆ ನೀಡಬೇಕು. ರಸ್ತೆಗಳು, ಮಾರುಕಟ್ಟೆ, ಬಸ್ ನಿಲ್ದಾಣ, ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳನ್ನು ತಮ್ಮ ಮನೆಗಳ ರೀತಿಯೇ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮಾತನಾಡಿ, ಸ್ವಚ್ಛತೆ ಎಲ್ಲಿರುತ್ತದೆಯೋ ಅಲ್ಲಿ ಆರೋಗ್ಯ ವಿರುತ್ತದೆ. ಸ್ವಚ್ಛತೆ ಎನ್ನುವುದು ಒಂದು ದಿನಕ್ಕೆ ಸೀಮಿತವಾಗದೇ ನಿರಂತರವಾಗಿರಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಕಸಮುಕ್ತವಾಗಿಸಲು ಎಲ್ಲರೂ ಸ್ಥಳೀಯ ಸಂಸ್ಥೆಗಳ ಕೈ ಜೋಡಿಸ ಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ, ನಗರಸಭೆ ಪೌರಾಯುಕ್ತ ಮನ್ಸೂರ್ ಆಲಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಅಭಿಲಾಶ್, ಎಪಿಎಂಸಿ ಕಾರ್ಯದರ್ಶಿ ಉಮಾ, ವಕೀಲರ ಸಂಘದ ಸದಸ್ಯರು ಪದಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ವರ್ತಕರು, ರೈತರು ಹಾಜರಿದ್ದರು.