MLA SN Subbareddy: ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲು ಎಲ್ಲರ ಸಹಕಾರ ಅಗತ್ಯ : ಸುಬ್ಬಾರೆಡ್ಡಿ
ಅನಂತಹ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು, ಅವರ ಜಯಂತಿಯನ್ನು ಅದ್ದೂರಿ ಯಾಗಿ ಆಚರಣೆ ಮಾಡಲು ಎಲ್ಲರೂ ಸಹಕಾರ ನೀಡಬೇಕು. ಈ ಬಾರಿ ಏಪ್ರಿಲ್ 18 ರಂದು ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ರವರ ಜಯಂತಿ ಆಚರಣೆ ಮಾಡಲು ದಲಿತ ಮುಖಂಡರೊಂದಿಗೆ ನಡೆದ ಈ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಪಟ್ಟಣದ ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಜಯಂತಿ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿದರು. -
ಗುಡಿಬಂಡೆ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ರವರ ಜಯಂತಿ(Birth anniversary of Dr. Ambedkar, the architect of the Constitution)ಯನ್ನು ಅದ್ದೂರಿಯಾಗಿ ಆಚರಣೆ ಎಲ್ಲರೂ ಸಂಪೂರ್ಣ ಸಹಕಾರ ನೀಡಬೇಕು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ(MLA SN Subbareddy) ಮನವಿ ಮಾಡಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಜಯಂತಿ ಸಂಬಂಧ ಹಮ್ಮಿ ಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಕಾರಣದಿಂದಲೇ ಇಂದು ನಾವೆಲ್ಲರೂ ಸ್ವತಂತ್ರವಾಗಿ ಜೀವನ ನಡೆಸುತ್ತಿದ್ದೇವೆ. ಅನಂತಹ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು, ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಎಲ್ಲರೂ ಸಹಕಾರ ನೀಡಬೇಕು. ಈ ಬಾರಿ ಏಪ್ರಿಲ್ 18 ರಂದು ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ರವರ ಜಯಂತಿ ಆಚರಣೆ ಮಾಡಲು ದಲಿತ ಮುಖಂಡರೊಂದಿಗೆ ನಡೆದ ಈ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ದಲಿತ ಮುಖಂಡರುಗಳು ಹಾಗೂ ಸ್ಥಳೀಯರ ಸಲಹೆ ಸೂಚನೆಗಳಂತೆ ಈ ಬಾರಿ ಅದ್ದೂರಿಯಾಗಿ ಅಂಬೇಡ್ಕರ್ ರವರ ಜಯಂತಿಯನ್ನು ಆಚರಣೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನೂ ಪಟ್ಟಣದ ಹೊರವಲಯದ ಅಂಬೇಡ್ಕರ್ ವೃತ್ತದ ಬಳಿಯಿರುವ ಅಂಬೇಡ್ಕರ್ ಪುತ್ಥಳಿಯ ಉಳಿಕೆ ಕಾಮಗಾರಿಯನ್ನು ಜಯಂತಿಯೊಳಗೆ ಪೂರ್ಣಗೊಳಿಸಲಾಗುವುದು ಎಂದರು.
ಇದನ್ನೂ ಓದಿ: Chikkaballapur News: ಮಾ.26ಕ್ಕೆ ಅಂಬೇಡ್ಕರ್ ಕೊಲಾಜ್ ನಾಟಕ ನೋಡಿ ಅಂಬೇಡ್ಕರ್ ಬಗ್ಗೆ ಅರಿಯಿರಿ: ಕೋಟಿಗಾನಹಳ್ಳಿ ರಾಮಯ್ಯ
ಇನ್ನೂ ಗುಡಿಬಂಡೆ ಪಟ್ಟಣದ ಹೊರವಲಯದ ಅಮಾನಿ ಬೈರಸಾಗರ ಕೆರೆಯ ಬಳಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನಕ್ಕೆ ಸದ್ಯ 2 ಕೋಟಿ ಅನುದಾನ ಬಂದಿದೆ. ಮತ್ತಷ್ಟು ಉತ್ತಮವಾಗಿ ಭವನ ನಿರ್ಮಾಣ ಮಾಡಲು 2 ಕೋಟಿ ಕಟ್ಟಡ ಕಾಮಗಾರಿಗೆ ಹಾಗೂ 1 ಕೋಟಿ ಪೀಠೋಪಕರಣಗಳಿಗೆ ಬಿಡುಗಡೆ ಮಾಡಿಸುತ್ತೇನೆ. ಮುಂದಿನ ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅದೇ ಭವನದಲ್ಲಿ ನಾವೆಲ್ಲರೂ ಸೇರಿ ಮಾಡೋಣ. ಅಂಬೇಡ್ಕರ್ ರವರ ಆಶಯಗಳನ್ನು ಪಾಲಿಸೋಣ ಎಂದರು.
ಸಭೆಯಲ್ಲಿದ್ದ ಮುಖಂಡರು ಮಾತನಾಡಿ, ಈ ಹಿಂದೆ ನಡೆದಂತಹ ಯಾವುದೇ ಅನುಚಿತ ಘಟನೆಗಳು ನಡೆಯದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಎಲ್ಲಾ ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಜೊತೆಗೆ ಏ.18 ರಂದು ನಡೆಯಲಿರುವ ತಾಲೂಕು ಮಟ್ಟದ ಅಂಬೇಡ್ಕರ್ ಜಯಂತಿಗೆ ಎಲ್ಲಾ ಪಂಚಾಯತಿ ಗಳಿಂದ ಪಲ್ಲಕಿಗಳು ಬರಬೇಕು.
ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮ ಮುಗಿಯುವ ತನಕ ಹಾಜರಿರಬೇಕು. ಅಂಬೇಡ್ಕರ್ ಜಯಂತಿಯಂದು ಹಕ್ಕು ಪತ್ರಗಳ ವಿತರಣೆ, ಸಾಗುವಳಿ ಚೀಟಿ ಹೀಗೆ ಸರ್ಕಾರದ ಸೌಲಭ್ಯಗಳನ್ನು ವಿತರಣೆ ಮಾಡಲು ಕ್ರಮ ವಹಿಸಬೇಕು ಎಂದು ದಲಿತ ಮುಖಂಡರುಗಳು ಮನವಿ ಮಾಡಿದರು.
ಈ ವೇಳೆ ತಹಸೀಲ್ದಾರ್ ಸಿಗ್ಬತ್ತುಲ್ಲಾ, ತಾಪಂ ಇಒ ನಾಗಮಣಿ, ಆರಕ್ಷಕ ವೃತ್ತ ನಿರೀಕ್ಷಕ ಮುನಿಕೃಷ್ಣ, ಬಿಇಒ ಕೃಷ್ಣಕುಮಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಲಕ್ಷ್ಮೀಪತಿ ರೆಡ್ಡಿ, ಪಪಂ ಮುಖ್ಯಾಧಿಕಾರಿ ಆರತಿ, ಟಿ.ಹೆಚ್.ಒ ಡಾ.ಅಕ್ಷಯ್, ಕೋಚಿಮುಲ್ ಆದಿನಾರಾಯಣರೆಡ್ಡಿ, ದಲಿತ ಮುಖಂಡರಾದ ಗಂಗಪ್ಪ, ರಮಣ, ಆದಿನಾರಾಯಣಪ್ಪ, ಜೀವಿಕ ನಾರಾಯಣಸ್ವಾಮಿ, ಚೆನ್ನರಾಯಪ್ಪ, ಎಂ.ಸಿ.ಚಿಕ್ಕನರಸಿಂಹಪ್ಪ, ಗಂಗರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.