ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Medical Camp: ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ; ಅಗತ್ಯವಿರುವವರಿಗೆ ಉಚಿತ ಕನ್ನಡಕ, ವಾಕಿಂಗ್ ಸ್ಟಿಕ್ ವಿತರಣೆ

ಗ್ರಾಮೀಣ ಜನರ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ದಿಬ್ಬೂರಿನ ಚನ್ನಕೇಶವ ಸಮುದಾಯ ಭವನದಲ್ಲಿ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಹಾಗೂ ಈಸ್ಟ್ ಪಾಯಿಂಟ್ ಆಸ್ಪತ್ರೆ, ಬೆಂಗಳೂರು ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಐದನೇ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತು.

ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಉತ್ತಮ ಸ್ಪಂದನೆ

-

Profile
Ashok Nayak Aug 23, 2026 10:09 AM

ದಿಬ್ಬೂರು: ಗ್ರಾಮೀಣ ಜನರ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ದಿಬ್ಬೂರಿನ ಚನ್ನಕೇಶವ ಸಮುದಾಯ ಭವನದಲ್ಲಿ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಹಾಗೂ ಈಸ್ಟ್ ಪಾಯಿಂಟ್ ಆಸ್ಪತ್ರೆ, ಬೆಂಗಳೂರು ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಐದನೇ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತು.

ಶಿಬಿರದಲ್ಲಿ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆ ನಡೆಸಿ, ತಜ್ಞ ವೈದ್ಯರಿಂದ ಅಗತ್ಯ ವೈದ್ಯಕೀಯ ಸಲಹೆ ಹಾಗೂ ಆರೋಗ್ಯ ಮಾರ್ಗದರ್ಶನ ನೀಡಲಾಯಿತು. ಆರೋಗ್ಯ ಸಮಸ್ಯೆ ಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವಂತೆ ವೈದ್ಯರು ಸಲಹೆ ನೀಡಿದರು.

ಇದನ್ನೂ ಓದಿ: Chikkaballapur News: ಆಯುಷ್ ಆಸ್ಪತ್ರೆ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ

ಶಿಬಿರಕ್ಕೆ ಭೇಟಿ ನೀಡಿದ ಬಿಜೆಪಿ ಯುವ ನಾಯಕ ಸಂದೀಪ ಬಿ.ರೆಡ್ಡಿ ಅವರು ಕಾರ್ಯಚಟುವಟಿಕೆ ಗಳನ್ನು ವೀಕ್ಷಿಸಿ, ವೈದ್ಯರು ಹಾಗೂ ಸಿಬ್ಬಂದಿಯಿಂದ ಶಿಬಿರದ ಕುರಿತು ಮಾಹಿತಿ ಪಡೆದರು. ಅಗತ್ಯವಿರುವ ಫಲಾನುಭವಿಗಳಿಗೆ ಉಚಿತ ಕನ್ನಡಕ ಹಾಗೂ ವಾಕಿಂಗ್ ಸ್ಟಿಕ್‌ಗಳನ್ನು ವಿತರಿಸ ಲಾಯಿತು.

M camp2

“ಆರೋಗ್ಯವೇ ಪ್ರತಿಯೊಬ್ಬರ ಬದುಕಿನ ಪ್ರಮುಖ ಸಂಪತ್ತು. ಗ್ರಾಮೀಣ ಪ್ರದೇಶದ ಜನರಿಗೆ ಉಚಿತವಾಗಿ ಆರೋಗ್ಯ ಸೇವೆ ಮತ್ತು ವೈದ್ಯಕೀಯ ಸಲಹೆ ದೊರೆಯುವಂತಹ ಶಿಬಿರಗಳು ಸಾಮಾಜಿಕವಾಗಿ ಮಹತ್ವದ ಸೇವೆಯಾಗಿವೆ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವಂತಾಗಬೇಕು” ಎಂದು ಸಂದೀಪ ಬಿ.ರೆಡ್ಡಿ ಹೇಳಿದರು.

ಜನರ ಆರೋಗ್ಯ ಮತ್ತು ಕಲ್ಯಾಣಕ್ಕೆ ಪೂರಕವಾಗಿರುವ ಇಂತಹ ಸೇವಾ ಕಾರ್ಯಕ್ರಮಗಳಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಿಬಿರವನ್ನು ಯಶಸ್ವಿಗೊಳಿಸಿದ ವೈದ್ಯರು, ಆರೋಗ್ಯ ಸಿಬ್ಬಂದಿ, ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಆಯೋಜಕರಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮಸ್ಥರು ಸೇರಿದಂತೆ ಹಲವು ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.