ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಒಂದೇ ಕಂತಿನಲ್ಲಿ ಭೂ ಪರಿಹಾರ ಬಿಡುಗಡೆ ಬಳಿಕ 135 ದಿನಗಳ ಧರಣಿ ಹಿಂಪಡೆದ ರೈತಸಂಘ

ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ಸುಮಾರು 2850 ಎಕರೆ ಭೂಮಿಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಪ್ರಾಥಮಿಕ ಅಧಿಸೂಚನೆ ಹೊರಬಿದ್ದ ದಿನದಿಂದಲೇ ಪರ-ವಿರೋಧ ಚಳವಳಿಗಳು ತೀವ್ರ ಗೊಂಡಿದ್ದವು. ಒಂದೆಡೆ ಕೋಡಿಹಳ್ಳಿ ಚಂದ್ರಶೇಖರ್ ಬಣದ ಕರ್ನಾಟಕ ರಾಜ್ಯ ರೈತಸಂಘ ಫಲವತ್ತಾದ ಕೃಷಿಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕೆಗೆ ನೀಡಬಾರದು ಎಂದು ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಕೈಗಾರಿಕೆ ಬೇಕು

ಚಿಕ್ಕಬಳ್ಳಾಪುರ: ಜಂಗಮಕೋಟೆ ಹೋಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ವಿರೋಧ ಹಾಗೂ ರೈತರಿಗೆ ಸಮರ್ಪಕ ಪರಿಹಾರಕ್ಕಾಗಿ ಕಳೆದ 135 ದಿನಗಳಿಂದ ಜಿಲ್ಲಾಡಳಿತ ಭವನದ ಎದುರು ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಜಂಗಮಕೋಟೆ ಹೋಬಳಿ ಕೆಐಎಡಿಬಿ(KIADB) ಜಮೀನುಗಳ ರೈತರಪರ ಹೋರಾಟ ಸಮಿತಿ ಸೋಮವಾರ ತಾತ್ಕಾಲಿಕವಾಗಿ ಹಿಂಪಡೆದಿದೆ. ಸರ್ಕಾರ ರೈತರಿಗೆ ಭೂಪರಿಹಾರವನ್ನು ಆರ್‌ಟಿಜಿಎಸ್ ಮೂಲಕ ಒಂದೇ ಕಂತಿನಲ್ಲಿ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿರುವುದು** ಈ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿದೆ.

ಕೆಐಎಡಿಬಿ ಆಯುಕ್ತರಿಗೆ ಕೆಲವು ಷರತ್ತುಗಳನ್ನು ವಿಧಿಸುವಂತೆ ಒತ್ತಾಯಿಸಿ ಜಿಲ್ಲಾ ಉಪವಿಭಾಗಾಧಿ ಕಾರಿ ಆರ್.ಅಶ್ವಿನ್ ಅವರಿಗೆ ಮನವಿ ಸಲ್ಲಿಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಇದನ್ನೂ ಓದಿ: Chikkaballapur News: 50 ದಿನ ಪೂರೈಸಿದ ಸಿಂಗಾಡಿ ಕದಿರೇನಹಳ್ಳಿ ಭೂ ಹೋರಾಟ: ಅರಣ್ಯ ಇಲಾಖೆಗೆ ಮುಂಭಾಗ ಸಂತ್ರಸ್ಥರ ಆಕ್ರೋಶ

ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ಸುಮಾರು 2850 ಎಕರೆ ಭೂಮಿಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಪ್ರಾಥಮಿಕ ಅಧಿಸೂಚನೆ ಹೊರಬಿದ್ದ ದಿನದಿಂದಲೇ ಪರ-ವಿರೋಧ ಚಳವಳಿ ಗಳು ತೀವ್ರಗೊಂಡಿದ್ದವು. ಒಂದೆಡೆ ಕೋಡಿಹಳ್ಳಿ ಚಂದ್ರಶೇಖರ್ ಬಣದ ಕರ್ನಾಟಕ ರಾಜ್ಯ ರೈತಸಂಘ ಫಲವತ್ತಾದ ಕೃಷಿಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕೆಗೆ ನೀಡಬಾರದು ಎಂದು ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಕೈಗಾರಿಕೆ ಬೇಕು, ಆದರೆ ರೈತರಿಗೆ ನ್ಯಾಯಯುತ ಪರಿಹಾರ, ಉದ್ಯೋಗ ಹಾಗೂ ಒಂದೇ ಕಂತಿನಲ್ಲಿ ಹಣ ಪಾವತಿಸಬೇಕು ಎಂದು ರೈತರಪರ ಹೋರಾಟ ಸಮಿತಿ ಒತ್ತಾಯಿಸುತ್ತಿತ್ತು.

3cbpm7y (1) ok

ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ **ಭಕ್ತರಹಳ್ಳಿ ಪ್ರತೀಶ್ ಮಾತನಾಡಿ, ಫಲವತ್ತಾದ ಕೃಷಿಭೂಮಿಯನ್ನು ಅಧಿಸೂಚನೆ ಯಿಂದ ಹೊರಗಿಡುವಂತೆ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಿ ಭೂಮಿ ಹಾಗೂ ಪಿಎಸ್‌ಎಲ್ ಕಂಪನಿಗೆ ಸೇರಿದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಭೂಮಿ ನೀಡಿದ ರೈತರಿಗೆ ಆರ್‌ಟಿಜಿಎಸ್ ಮೂಲಕ ನೇರವಾಗಿ ಪರಿಹಾರ ಹಣ ಜಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಧರಣಿಯನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ಆದಾಗ್ಯೂ, ಹೋರಾಟ ಸಮಿತಿ ತನ್ನ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಪ್ರಸ್ತುತ ನಿಗದಿಪಡಿಸಿರುವ ಪರಿಹಾರದ ಮೊತ್ತವನ್ನು ಪರಿಷ್ಕರಿಸಿ **ಪ್ರತಿ ಎಕರೆಗೆ ರೂ.3 ಕೋಟಿ** ನೀಡ ಬೇಕು, ಪರಿಹಾರ ಪಡೆಯದ ರೈತರಿಗೆ ಬದಲಿ ಭೂಮಿ ಒದಗಿಸಬೇಕು, ನಮೂನೆ 50 ಮತ್ತು 53ರಡಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ಭೂಮಾಫಿಯಾದ ಒತ್ತಡಕ್ಕೆ ಮಣಿದು ಕೈಗಾರಿಕಾ ಯೋಜನೆ ಸ್ಥಗಿತಗೊಳಿಸಿದರೆ ಮತ್ತೆ ಉಗ್ರ ಹೋರಾಟ ಆರಂಭಿಸುವುದಾಗಿ ಎಚ್ಚರಿಕೆ ನೀಡಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಮುನಿಕೆಂಪಣ್ಣ, ಯುವ ಘಟಕದ ಅಧ್ಯಕ್ಷ ಮಲ್ಲೇನಹಳ್ಳಿ ಸುಬ್ರಹ್ಮಣಿ, ಜಿಲ್ಲಾ ಕಾರ್ಯಾಧ್ಯಕ್ಷ ಎನ್.ಎಚ್. ಕದಿರೇಗೌಡ, ತಾಲೂಕು ಅಧ್ಯಕ್ಷ ಮುನೇಗೌಡ, ಕಾರ್ಯದರ್ಶಿ ನವೀನ್ ಕುಮಾರ್, ಬಿ.ಎನ್. ನಾಗೇಶ್ ಹಾಗೂ ಬಸವಾಪಟ್ಟಣ ಆಂಜಿನಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.