ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

KIADB: ಜಿಲ್ಲೆಯಲ್ಲಿ ಬಂಧನ ಖಂಡಿಸಿ ಬೀದಿಗಿಳಿದ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತರು

ನಮ್ಮ ರಾಜ್ಯ ನಾಯಕರಾದ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಭಕ್ತರಹಳ್ಳಿ ಬೈರೇಗೌಡರನ್ನು ಕೂಡಲೇ ಬಿಡುಗಡೆ ಮಾಡಬೇಕು. ನಮ್ಮ ನಾಯಕರನ್ನು ಬಿಡುಗಡೆ ಮಾಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ರೈತರ ಹಕ್ಕುಗಳಿ ಗಾಗಿ ನಡೆಸುತ್ತಿರುವ ಹೋರಾಟವನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ

ಚಿಕ್ಕಬಳ್ಳಾಪುರ : ಕೆಐಎಡಿಬಿ(KIADB) ಭೂ-ಸ್ವಾಧೀನ ವಿಚಾರವಾಗಿ ಚರ್ಚೆಗೆ ಆಹ್ವಾನ ನೀಡಿದ್ದ ಸಂದರ್ಭ ದಲ್ಲಿ ರೈತ ಸಂಘದ ರಾಜ್ಯ ಮುಖಂಡರಾದ ಹಾಗೂ ಅವರನ್ನು ಬೆಂಗಳೂರಿನಲ್ಲಿ ಬಂಧಿಸಿರುವು ದನ್ನು ಖಂಡಿಸಿ ಜಿಲ್ಲೆಯಲ್ಲು ಉದ್ವಿಘ್ನ ವಾತಾವರಣ ನಿರ್ಮಾಣವಾಗಿದ್ದು ರಸ್ತೆ ತಡೆ, ಇತ್ಯಾದಿಗಳಿಗೆ ಕಾರಣವಾಯಿತು.

ಚಿಕ್ಕಬಳ್ಳಾಪುರ ನಗರದಲ್ಲಿ ಕೂಡ ನೂರಾರು ಸಂಖ್ಯೆಯ ರೈತರು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದರಲ್ಲದೆ ಸರಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿ ಧಿಕ್ಕಾರ ಕೂಗಿದರು. ಇದೇ ರೀತಿ, ಬಾಗೇಪಲ್ಲಿ ಶಿಡ್ಲಘಟ್ಟ ನಗರದ ಬಸ್ ನಿಲ್ದಾಣದಲ್ಲಿ ರೈತ ಸಂಘದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

cbpm7ryta

ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಪೊಲೀಸರ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರೈತರ ಪರವಾಗಿ ಹೋರಾಟ ನಡೆಸುತ್ತಿರುವ ನಾಯಕರ ಬಂಧನ ಅಸಮರ್ಥನೀಯ ಎಂದು ಆರೋಪಿಸಿದರು.

ಇದನ್ನೂ ಓದಿ: Chinthamani News: ಕೈವಾರದಲ್ಲಿ ಆರಾಧನೆ ಪ್ರಯುಕ್ತ ಹೋಮ

ಕೆಐಎಡಿಬಿ ಭೂ-ಸ್ವಾಧೀನದ ಕುರಿತು ಚರ್ಚೆ ನಡೆಸಲು ಕರೆದಿದ್ದ ವೇಳೆ ನಾಯಕರನ್ನು ಬಂಧಿಸಿರು ವುದು ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ದೂರಿದರು.

ಈ ವೇಳೆ, ಮಾತನಾಡಿದ ರೈತ ಸಂಘದ ಮುಖಂಡರು, "ನಮ್ಮ ರಾಜ್ಯ ನಾಯಕರಾದ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಭಕ್ತರಹಳ್ಳಿ ಬೈರೇಗೌಡರನ್ನು ಕೂಡಲೇ ಬಿಡುಗಡೆ ಮಾಡಬೇಕು. ನಮ್ಮ ನಾಯಕರನ್ನು ಬಿಡುಗಡೆ ಮಾಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ರೈತರ ಹಕ್ಕುಗಳಿ ಗಾಗಿ ನಡೆಸುತ್ತಿರುವ ಹೋರಾಟವನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ" ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂಧನವನ್ನು ಖಂಡಿಸಿದರು. ಪರಿಸ್ಥಿತಿ ಉದ್ವಿಗ್ನವಾಗದಂತೆ ಬಸ್ ನಿಲ್ದಾಣದ ಸುತ್ತಮುತ್ತ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು.