ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ಸೂಚಿಸಿ ರಸ್ತೆ ತಡೆ ನಡೆಸಿದ ರೈತ, ಕಾರ್ಮಿಕ ಸಂಘಟನೆಗಳು

ರಾಜ್ಯದಲ್ಲಿ ಎರಡು ವರ್ಷದ ಹಿಂದೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದಾದ ಮೇಲೊಂದ ರಂತೆ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿದೆ. ಎಂಟು ಗಂಟೆಗಳ ದುಡಿತದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸಲು ತಯಾರಿ ನಡೆಸಿದೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿ ರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ದುಡಿಯುವ ಜನರ ಹಕ್ಕುಗಳನ್ನು ಕಸಿಯುತ್ತಿದೆ

ಮುಷ್ಕರಕ್ಕೆ ಬೆಂಬಲ ಸೂಚಿಸಿ ರಸ್ತೆ ತಡೆ ನಡೆಸಿದ ರೈತ, ಕಾರ್ಮಿಕ ಸಂಘಟನೆಗಳು

ನಗರದ ಅಂಬೇಡ್ಕರ್ ವೃತ್ತದಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ಸೂಚಿಸಿ ರೈತ,ಕಾರ್ಮಿಕ ಸಂಘಟನೆಗಳು ರಸ್ತೆ ತಡೆ ನಡೆಸಿದವು

Profile Ashok Nayak Jul 10, 2025 12:01 AM

ಚಿಕ್ಕಬಳ್ಳಾಪುರ: ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ ಗಳ ಜಾರಿ ವಿರೋಧಿಸಿ, ರೈತ ವಿರೋಧಿ ನೀತಿಗಳನ್ನು ರದ್ದು ಮಾಡಲು ಆಗ್ರಹಿಸಿ ಹಾಗೂ ದುಡಿಯುವ ವರ್ಗದ ಹಾಕುತ್ತಾಯಗಳು ಈಡೇರಿಗಾಗಿ ಒತ್ತಾಯಿಸಿ ರೈತ,ಕಾರ್ಮಿಕ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ, ಗ್ರಾಮ ಪಂಚಾಯಿತಿ, ಹಾಸ್ಟಲ್, ಕಾರ್ಯಕರ್ತೆಯರು ಬುಧವಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ರಸ್ತೆಯಲ್ಲಿಯೇ ಕುಳಿತು ಕೊಳ್ಳುವ ಮಲಗುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ದುಡಿಯುವ ಜನರ ಬದುಕನ್ನು ಛಿದ್ರಗೊಳಿಸುವ, ಕಾರ್ಪೊರೇಟ್ ಕಂಪನಿಗಳ ಲೂಟಿಗೆ ರತ್ನಗಂಬಳಿ ಹಾಸುವ ಸಾಲು ಸಾಲು ಕಾಯ್ದೆಗಳನ್ನು ತರಲು ಹೊರಟಿವೆ. ದುಡಿಯುವ ಜನರ ಬದುಕಿನ ಮೇಲೆ ನಡೆಯಲಿರುವ ಈ ಪ್ರಹಾರವನ್ನು ವಿರೋಧಿಸಿ ದೇಶ ವ್ಯಾಪ್ತಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದ್ದು ಅದರ ಬೆನ್ನಲೇ ಇಲ್ಲಿಯೂ ಸಹ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದರು.

ಇದನ್ನೂ ಓದಿ: Chikkaballapur(Chinthamani) News: ಮರುಗಮಲ್ಲ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಗುರುವಂದನಾ ಕಾರ್ಯಕ್ರಮ

ರಾಜ್ಯದಲ್ಲಿ ಎರಡು ವರ್ಷದ ಹಿಂದೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದಾದ ಮೇಲೊಂದರಂತೆ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿದೆ. ಎಂಟು ಗಂಟೆಗಳ ದುಡಿತದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸಲು ತಯಾರಿ ನಡೆಸಿದೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ದುಡಿಯುವ ಜನರ ಹಕ್ಕುಗಳನ್ನು ಕಸಿಯುತ್ತಿದೆ. ಈ ಪರಿಸ್ಥಿತಿಗಳನ್ನು ಸುಧಾರಿಸಬೇಕಾದಂತಹ ಸರ್ಕಾರ ತದ್ವಿರುದ್ಧವಾಗಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಇವುಗಳನ್ನು ದುಡಿಯುವ ಜನರ ಮೇಲೆ ಒತ್ತಾಯ ಪೂರ್ವಕವಾಗಿ ಹೇರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯ ನಂತರ ತಮ್ಮನ್ನು ಬಂಧನಕೊಳಪಡಿಸುವಂತೆ ಪೊಲೀಸರನ್ನು ಕಾಡಿ ಬೇಡಿದರು. ಆದರೆ ಪೊಲೀಸರು ಬಂಧಿಸಲು ನಿರಾಕರಿಸಿದಾಗ ಪ್ರತಿಭಟನಾಕಾರರು ದೊಡ್ಡ ಹೈ ಡ್ರಾಮವನ್ನೇ ಮಾಡಿದರು, ಪೊಲೀಸರು ಪ್ರತಿಭಟನಾ ನಿರತರ ಮನವೊಲಿಸಿದ ನಂತರ ಪ್ರತಿಭಟನೆಯನ್ನು ಹಿಂಪಡಿದರು.

ಪ್ರತಿಭಟನೆಯಲ್ಲಿ ಕೆ ಪಿ ಆರ್ ಎಸ್ ನ ಬಿ.ಎನ್.ಮುನಿಕೃಷ್ಣಪ್ಪ, ಹಳ್ಳಿ ಮಕ್ಕಳ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟರೋಣಪ್ಪ, ಅಕ್ಷರ ದಾಸೋಹದ ಎನ್.ಭಾರತಿ, ಸಿಐಟಿಯುನ ಜಯಮಂಗಳ, ಬಿ,ಭಾಗ್ಯಮ್ಮ, ಮುನಿರತ್ನಮ್ಮ ಮತ್ತಿತರರು ಇದ್ದರು.