ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ರಸಗೊಬ್ಬರ ಕೊರತೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ರೈತರ ಆಕ್ರೋಶ

ತಾಲೂಕು ಕಚೇರಿಯಲ್ಲಿ ರೈತರ ಹಾಗೂ ಸಾರ್ವಜನಿಕರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ, ಅಧಿಕಾರಿಗಳು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೆ.ಎಸ್.ಪುಟ್ಟಣ್ಣಯ್ಯ ಬಣ)ವತಿಯಿಂದ ಮಂಗಳವಾರ ನಗರದಲ್ಲಿ ಮೆರವಣಿಗೆ ಹಾಗೂ ಧರಣಿ ನಡೆಸಲಾಯಿತು.

ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ರೈತರ ಆಕ್ರೋಶ

ರಸಗೊಬ್ಬರ ಕೊರತೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. -

Profile
Ashok Nayak Jun 16, 2026 9:11 PM

ಚಿಕ್ಕಬಳ್ಳಾಪುರ: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಿರುವ ಯೂರಿ ಯಾ, ಡಿಎಪಿ ಸೇರಿದಂತೆ ರಸಗೊಬ್ಬರಗಳ ಕೊರತೆಯನ್ನು ತಕ್ಷಣ ನೀಗಿಸಬೇಕು, ಜಿಲ್ಲೆಯಲ್ಲಿ ಭ್ರಷ್ಟಾ ಚಾರಕ್ಕೆ ಕಡಿವಾಣ ಹಾಕಬೇಕು ಹಾಗೂ ಡೀಮ್ಡ್ ಫಾರೆಸ್ಟ್ ಹೆಸರಿನಲ್ಲಿ ರೈತರ ಮೇಲೆ ನಡೆಯು ತ್ತಿರುವ ಅರಣ್ಯ ಇಲಾಖೆಯ ದೌರ್ಜನ್ಯವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಳಗದ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದರು.

ತಾಲೂಕು ಕಚೇರಿಯಲ್ಲಿ ರೈತರ ಹಾಗೂ ಸಾರ್ವಜನಿಕರ ಕೆಲಸಗಳು ಸಮರ್ಪಕವಾಗಿ ನಡೆಯು ತ್ತಿಲ್ಲ, ಅಧಿಕಾರಿಗಳು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೆ.ಎಸ್.ಪುಟ್ಟಣ್ಣಯ್ಯ ಬಣ)ವತಿಯಿಂದ ಮಂಗಳವಾರ ನಗರದಲ್ಲಿ ಮೆರವಣಿಗೆ ಹಾಗೂ ಧರಣಿ ನಡೆಸಲಾಯಿತು.

ನಗರದ ಶಿಡ್ಲಘಟ್ಟ ವೃತ್ತದಲ್ಲಿ ಜಮಾಯಿಸಿದ ರೈತರು ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.ಇದೇ ಸಂದರ್ಭದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು ಹಾಗೂ ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ: Chikkaballapur News: ಸಮಗ್ರ ಆರೋಗ್ಯ ಅಭಿಯಾನಕ್ಕೆ ಶೀಘ್ರ ಚಾಲನೆ: ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಕರೆ

ಬಳಿಕ ತಾಲೂಕು ಕಚೇರಿ ಎದುರು ಧರಣಿ ನಡೆಸಿ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಗ್ರೇಡ್-2 ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ರೈತರ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಲಕ್ಷ್ಮಿನಾರಾಯಣ ರೆಡ್ಡಿ, ತಾಲೂಕು ಕಚೇರಿಯಲ್ಲಿ ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸಮರ್ಪಕ ವಾಗಿ ಸ್ಪಂದಿಸುತ್ತಿಲ್ಲ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಲ್ಲಿ ವಿಳಂಬವಾಗುತ್ತಿದ್ದು, ಸಾರ್ವಜನಿಕರು ತಿಂಗಳಗಟ್ಟಲೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

cbpm2a

ಕೆಲವೆಡೆ ಲಂಚ ನೀಡಿದರೆ ಮಾತ್ರ ಕೆಲಸಗಳು ಶೀಘ್ರವಾಗಿ ನಡೆಯುತ್ತವೆ ಎಂಬ ಆರೋಪಗಳೂ ಇವೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸಾಮಾಜಿಕ ಕಳಕಳಿಯಿಂದ ಕಾರ್ಯ ನಿರ್ವಹಿಸಿ,ಜನರ ಕೆಲಸಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡಿಸುವ ವ್ಯವಸ್ಥೆ ತಪ್ಪಬೇಕು. ಅದೇ ರೀತಿ, ಅರಣ್ಯ ಇಲಾಖೆ ಹಲವು ವರ್ಷಗಳಿಂದ ಕೃಷಿ ಮಾಡುತ್ತಿರುವ ರೈತರನ್ನು ಪರಿಭಾವಿತ ಅರಣ್ಯದ ಹೆಸರಿನಲ್ಲಿ ತೆರವುಗೊಳಿಸುವ ಕ್ರಮಗಳನ್ನು ನಿಲ್ಲಿಸಬೇಕು.ಕಂದಾಯ ಇಲಾಖೆ ದಾಖಲಾತಿಗಳನ್ನು ಇಟ್ಟುಕೊಂಡು ಸಾಗುವಳಿ ಮಾಡುತ್ತಿರುವ ರೈತರ ಭೂಮಿಯನ್ನು ಅರಣ್ಯ ಇಲಾಖೆ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಐಆರ್ ಪ್ರಕ್ರಿಯೆ ಕುರಿತೂ ಮಾತನಾಡಿದ ಅವರು ಕೇಂದ್ರ ಸರ್ಕಾರ ಚುನಾವಣಾ ಆಯೋಗ ಬಳಸಿಕೊಂಡು ಉದ್ದೇಶ ಪೂರ್ವಕವಾಗಿ ಕೆಲ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆಯಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಆತಂಕ ಜನಸಾಮಾನ್ಯರಲ್ಲಿದೆ. ಜಿಲ್ಲಾಡಳಿತ ಇದನ್ನು ಪರಿಹರಿಸಬೇಕು. ಯಾವುದೇ ಅರ್ಹ ಮತದಾರ ಪಟ್ಟಿಯಿಂದ, ಸಮೀಕ್ಷೆಯಿಂದ ಹೊರಗುಳಿಯ ವಾರದು ಎಂದು ಆಗ್ರಹಿಸಿದರು.

ದೇಶದಲ್ಲೇ ವಾಸವಾಗಿದ್ದರೂ ತಮ್ಮ ಭಾರತೀಯತ್ವವನ್ನು ದಾಖಲೆಗಳ ಮೂಲಕ ಸಾಬೀತು ಪಡಿಸುವ ದುಷ್ಟ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಸಂವಿಧಾನ ಬದ್ದ ಹಕ್ಕು ಮತ್ತು ಪ್ರಜಾ ತಂತ್ರದ ಅಣಕದಂತಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ದಾಖಲೆ ಸಲ್ಲಿಕೆ ಸಂಬಂಧ ಸಾರ್ವಜನಿಕರಲ್ಲಿ ಗೊಂದಲ ಉಂಟಾಗದAತೆ ಸಂಬAಧಪಟ್ಟವರು ಸ್ಪಷ್ಟತೆ ನೀಡಬೇಕು. ಜನರೂ ಕೂಡ ಈ ವಿಚಾರ ದಲ್ಲಿ ಜಾಗೃತರಾಗಿರಬೇಕು ಎಂದು ಕರೆ ನೀಡಿದರು.

ಈ ವೇಳೆ ರೈತಸಂಘದ ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಎಸ್.ಎಂ ರವಿ ಪಕಾಶ್, ಮಾತನಾಡಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಮಾಡಬಾರದು ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ರೈತರು ಮತ್ತು ಬಡವರ ಬದುಕು ದುಸ್ತರª. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿಗಳು ಸೂಕ್ತ ನಿರ್ದೇಶನ ನೀಡಬೇಕು. ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ವಿಷಯವನ್ನು ಕಂದಾಯ ಸಚಿವರು, ಇಂಧನ ಸಚಿವರು, ಅರಣ್ಯ ಸಚಿವರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವರ ಗಮನಕ್ಕೆ ತಂದು ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪ್ರಮುಖ ಬೇಡಿಕೆಗಳು:-
ಯೂರಿಯಾ, ಡಿಎಪಿ ಸೇರಿದಂತೆ ರಸಗೊಬ್ಬರಗಳ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ವಹಿಸ ಬೇಕು. ತಾಲೂಕು ಮಟ್ಟದ ಅಧಿಕಾರಿಗಳಲ್ಲಿನ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಡೀಮ್ಡ್ ಫಾರೆಸ್ಟ್ ಹೆಸರಿನಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳ ನಿಲ್ಲಿಸಬೇಕು. ಸ್ವಾಧೀನ ಅನುಭವ ದಲ್ಲಿರುವ ರೈತರ ಭೂಮಿಯನ್ನು ರಕ್ಷಿಸಬೇಕು. ಸಾಗುವಳಿ ಮಾಡುತ್ತಿರುವ ರೈತರ ವಿರುದ್ದ ನಡೆಯುತ್ತಿರುವ ಅರಣ್ಯ ಇಲಾಖೆಯ ದೌರ್ಜನ್ಯ ನಿಲ್ಲಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರನ್ನು ಕೈಬಿಡಬಾರದು. ಈ ಬೇಡಿಕೆಗಳು ಈಡೇರದಿದ್ದಲ್ಲಿ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಎಂ.ಎಲ್.ರಾಮಾಂಜಿನಪ್ಪ ಸೇರಿದಂತೆ ಪದಾಧಿಕಾರಿಗಳಾದ ರ‍್ರಪ್ಪ, ಶ್ರೀನಿವಾಸ, ಪ್ರಕಾಶ್, ವೆಂಕಟೇಶ್, ಅಶ್ವತ್ಥಪ್ಪ, ರಮಾಮಣಿ, ಈಶ್ವರರೆಡ್ಡಿ, ರಾಮಕೃಷ್ಣಪ್ಪ ಹಾಗೂ ಇತರರು ಭಾಗವಹಿಸಿದ್ದರು.