ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಕೆರೆಯಲ್ಲಿ ಮುಳುಗಿ ತಂದೆ-ಮಗಳು ದಾರುಣ ಸಾವು; ಪುತ್ರಿಯನ್ನು ರಕ್ಷಿಸಲು ಹೋಗಿ ದುರಂತ

Chikkaballapur News: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಕೆರೆಯಲ್ಲಿ ಕೈ ಕಾಲು ತೊಳೆಯಲು ಮಗಳು, ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ರಕ್ಷಿಸಲು ತಂದೆ ನೀರಿಗೆ ಇಳಿದಿದ್ದು, ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕೆರೆಗೆ ಬಿದ್ದ ಮಗಳನ್ನು ರಕ್ಷಿಸಲು ಹೋಗಿ ತಂದೆಯೂ ನೀರುಪಾಲು

Profile Prabhakara R Apr 26, 2025 9:07 PM

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ತಂದೆ-ಮಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ (Chikkaballapur News) ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಶೆಟ್ಟಿಹಳ್ಳಿ ಗ್ರಾಮದ ರೈತ ನಾಗೇಶ್(48) ಹಾಗೂ ಮಗಳು ಧನುಶ್ರೀ(13) ಮೃತಪಟ್ಟವರು. ಮಗಳನ್ನು ರಕ್ಷಿಸಲು ಹೋಗಿ ತಂದೆ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ ನಾಗೇಶ್, ಮಗಳನ್ನು ಕರೆದುಕೊಂಡು ತೋಟಕ್ಕೆ ಹೋಗಿದ್ದರು. ಸಂಜೆ ವಾಪಸ್ ಬರುವಾಗ ದಾರಿ ಸಮೀಪವಿದ್ದ ಕೆರೆಯಲ್ಲಿ ಕೈ ಕಾಲು ತೊಳೆಯಲು ಧನುಶ್ರೀ ನೀರಿಗೆ ಇಳಿದಿದ್ದು, ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ತಕ್ಷಣ ಮಗಳನ್ನು ರಕ್ಷಿಸಲು ನೀರಿಗೆ ಇಳಿದ ತಂದೆ ಕೂಡ ಆಯತಪ್ಪಿ ಮಗಳೊಂದಿಗೆ ನೀರು ಪಾಲಾಗಿದ್ದಾರೆ.

ಮೃತ ನಾಗೇಶ್‌ನ ಪುತ್ರ ನೀಡಿದ ದೂರಿನಂತೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕುಟುಂಬಸ್ಥರ ರೋದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದು ಶಾಸಕ ಬಿ.ಎನ್.ರವಿಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Wing commander Road rage: ಕೊಲೆ ಯತ್ನ ಕೇಸ್:‌ ಹೈಕೋರ್ಟ್‌ ಮೊರೆ ಹೋಗಿ ಬಚಾವಾದ ವಿಂಗ್‌ ಕಮಾಂಡರ್‌

ಗೆಳತಿ ಸೈಕಲ್‌ ಕೊಡಲಿಲ್ಲ ಎಂದು ಪುಟ್ಟ ಬಾಲಕಿ ಆತ್ಮಹತ್ಯೆ

ಚಿತ್ರದುರ್ಗ: ಸಾವು ಎಂದರೇನು, ಬದುಕು ಎಂದರೇನು ಎಂದು ತಿಳಿಯದ ವಯಸ್ಸಿನಲ್ಲಿ ಆತ್ಮಹತ್ಯೆ (Self Harming) ಮಾಡಿಕೊಳ್ಳುವ ಪುಟ್ಟ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಚಿತ್ರದುರ್ಗದಲ್ಲಿ (Chitradurga news) ಇಂಥದೊಂದು ಘೋರ ಘಟನೆ ನಡೆದಿದೆ. ಪಕ್ಕದ ಮನೆ ಸ್ನೇಹಿತೆ ಸೈಕಲ್ ಕೊಟ್ಟಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಿಲ್ಲೆಯ ಹಿರಿಯೂರು ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗೋಪಾಲ ಮತ್ತು ರುದ್ರಮ್ಮ ದಂಪತಿ ಪುತ್ರಿ ಸ್ಪಂದನಾ (11) ಮನೆಯಲ್ಲಿ ನೇಣು ಬಿಗಿದುಕೊಂಡು (Hanging) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಕ್ಕದ ಮನೆ ಗೆಳತಿ ಜೊತೆ ಬಾಲಕಿ ಪ್ರತಿನಿತ್ಯ ಸೈಕಲ್ ಆಡುತ್ತಿದ್ದಳು. ಅವಳು ಅಂದು ಆಡುವುದಕ್ಕೆ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು ಸ್ಪಂದನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಷ್ಟು ಸಣ್ಣ ಬಾಲಕಿಗೆ ಕರಾರುವಕ್ಕಾಗಿ ನೇಣು ಬಿಗಿದುಕೊಳ್ಳುವುದಕ್ಕೆ ತಿಳಿದದ್ದು ಕೂಡ ಆಶ್ಚ‌ರ್ಯಕರವಾಗಿದೆ.