ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಉಪ ನಿರ್ದೇಶಕರ ಕಚೇರಿಗೆ ಇದ್ದಕ್ಕಿದ್ದಂತೆ ಬೆಂಕಿ
ಕಚೇರಿಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹತ್ತಿಕೊಂಡ ಪರಿಣಾಮ ಬೆಂಕಿ ಇಡೀ ಕಚೇರಿಗೆ ವ್ಯಾಪಿಸಿ ಕಚೇರಿಯ ಎಲ್ಲಾ ಕಡತಗಳು, ಪೀಠೋಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಮಹತ್ತರ ವಾದ ದಾಖಲೆಗಳು ಸುಟ್ಟುಕರಕಲಾಗಿಸಿದೆ. ಬೆಳಿಗ್ಗೆ ಕಚೇರಿಯ ಒಳಗೆ ಹೊಗೆ ಬರುತ್ತಿದ್ದುದನ್ನು ಕಂಡ ಸ್ಥಳೀಯರು ನೋಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಕ್ಕಬಳ್ಳಾಪುರನಗರದ ಹೃದಯ ಭಾಗದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿದ್ದ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಉಪ ನಿರ್ದೇಶಕರ ಕಚೇರಿಗೆ ರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದೆ.

ಚಿಕ್ಕಬಳ್ಳಾಪುರ: ಯುಗಾದಿ ಹಬ್ಬದಂದೇ ಸರ್ಕಾರಿ ಕಚೇರಿ ಸುಟ್ಟುಕರಕಲಾದ ಘಟನೆ ಚಿಕ್ಕಬಳ್ಳಾ ಪುರ ನಗರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಹೃದಯ ಭಾಗದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿದ್ದ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಉಪ ನಿರ್ದೇಶಕರ ಕಚೇರಿಗೆ ರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದೆ.
ಕಚೇರಿಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹತ್ತಿಕೊಂಡ ಪರಿಣಾಮ ಬೆಂಕಿ ಇಡೀ ಕಚೇರಿಗೆ ವ್ಯಾಪಿಸಿ ಕಚೇರಿಯ ಎಲ್ಲಾ ಕಡತಗಳು, ಪೀಠೋಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಮಹತ್ತರ ವಾದ ದಾಖಲೆಗಳು ಸುಟ್ಟುಕರಕಲಾಗಿಸಿದೆ. ಬೆಳಿಗ್ಗೆ ಕಚೇರಿಯ ಒಳಗೆ ಹೊಗೆ ಬರುತ್ತಿದ್ದುದನ್ನು ಕಂಡ ಸ್ಥಳೀಯರು ನೋಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ, ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ: Chikkaballapur News: ಗ್ರಾಮದೇವತೆಗೆ ಅರ್ಧ ಕೆಜಿ ಬೆಳ್ಳಿ ಗಿಫ್ಟ್ ಕೊಟ್ಟ ಮಂಗಳಮುಖಿಯರು
ಘಟನೆಯಲ್ಲಿ ಮಹತ್ತರವಾದ ದಾಖಲೆಗಳು ನಾಶವಾಗಿದ್ದು, ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿತಾ ಅಥವಾ ಯಾರಾದ್ರೂ ಉದ್ದೇಶಪೂರ್ವಕವಾಗಿ ಬೆಂಕಿ ಇಟ್ಟಿದ್ದಾರಾ ಅನ್ನೋ ಅನುಮಾನ ಕಾಡುತ್ತಿದೆ. ಈ ಸಂಬಂಧ ನಗರಠಾಣೆಯಲ್ಲಿ ದೂರು ದಾಖಲಾಗಿದ್ದು ಅಸಲಿ ಸತ್ಯ ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.