ಚಿಂತಾಮಣಿ: ತಾಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಗರುಡ ಮಾರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಬುಧವಾರ ಬೆಳಿಗ್ಗೆ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧ ದಲ್ಲಿ ವ್ಯಾಪಿಸಿ ಒಳಗಿದ್ದ ವಸ್ತುಗಳು ಸುಟ್ಟುಹೋಗಿವೆ.
ಇದನ್ನೂ ಓದಿ: Chikkaballapur News: ಕೃಷಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಲಾಖೆಗಳ ಸಮನ್ವಯ ಅಗತ್ಯ
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಚಿಕ್ಕಬಳ್ಳಾಪುರ ಪ್ರಭಾರ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಆಲಸಿದ್ದ ಮೇತ್ರಿ, ಚಿಂತಾಮಣಿ ಅಗ್ನಿಶಾಮಕ ದಳದ ಅಧಿಕಾರಿಗಳಾದ ಜಯ ನಾಯಕ್, ಲೋಕೇಶ್ ಹಾಗೂ ಶಿಡ್ಲಘಟ್ಟದ ರಾಮಾಂಜಿ ನೇತೃತ್ವದ ಸಿಬ್ಬಂದಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.
ಈ ವೇಳೆ ಸ್ಥಳೀಯ ಗ್ರಾಮಸ್ಥರು ಹಾಗೂ ಯುವಕರು ಸಹಕರಿಸಿದ್ದು, ಕಾರ್ಖಾನೆ ಆವರಣ ದಲ್ಲಿದ್ದ ಕೆಲವು ವಾಹನಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಅಗ್ನಿ ಅವಘಡದಿಂದ ಕಾರ್ಖಾನೆಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.