ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

South Africa Delegation Visit: ಗಡಿ ಭಾಗದ ಸಾರ್ವಜನಿಕ ಆಸ್ಪತ್ರೆಯ ಚಿಕಿತ್ಸೆ ಗುಣಮಟ್ಟದ ಬಗ್ಗೆ ಮೆಚ್ಚುಗೆ: ಬಾಗೇಪಲ್ಲಿ ಆಸ್ಪತ್ರೆಗೆ ವಿದೇಶಿಗರ ನಿಯೋಗ ಭೇಟಿ

ನಾವು ಇತರ ದೇಶಗಳಿಗೂ ಭೇಟಿ ನೀಡಿದ್ದೇವೆ. ಸರ್ಕಾರಿ ಆಸ್ಪತ್ರೆಗಳಿಗೆ ಬಡವರೇ ಬರುತ್ತಾರೆ. ಎಲ್ಲರಿಗೂ ಉತ್ತಮ ಆರೋಗ್ಯ ಚಿಕಿತ್ಸೆ ಲಭಿಸಬೇಕು. ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯು ಮಾದರಿ ಯಾಗಿದೆ. ಐಸಿಯು ಘಟಕವು ಉತ್ತಮ ಸ್ಥಿತಿಯಲ್ಲಿದೆ ಎಂದು ವಿದೇಶಿಗರ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.

ಬಾಗೇಪಲ್ಲಿ ಆಸ್ಪತ್ರೆಗೆ ವಿದೇಶಿಗರ ನಿಯೋಗ ಭೇಟಿ

-

Ashok Nayak Ashok Nayak Sep 19, 2025 11:42 PM

ಬಾಗೇಪಲ್ಲಿ: ಗ್ರಾಮೀಣ ಗಡಿ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರಿಗೆ ಆರೋಗ್ಯ ಚಿಕಿತ್ಸಾ ಸೌಲಭ್ಯಗಳ ಕುರಿತು ಅಧ್ಯಯನ ನಡೆಸುವ ಭಾಗವಾಗಿ ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ದೇಶಗಳ 15 ಸದಸ್ಯರ ನಿಯೋಗವು ಪಟ್ಟಣದ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯಿತು.

ಸುಸಜ್ಜಿತ ಪ್ರಯೋಗಾಲಯ, ಉತ್ತಮ ಔಷಧಾಲಯ, ಸಕಲ ಪರಿಕರಗಳುಳ್ಳ ಚಿಕಿತ್ಸಾ ಕೊಠಡಿ, ಸೌಲಭ್ಯವುಳ್ಳ ಹೊರರೋಗಿ ವಿಭಾಗ, ಒಳರೋಗಿ ವಿಭಾಗ,ಗಂಡಸರು ವಿಭಾಗ, ಮಹಿಳಾ ವಿಭಾಗ, ಆರೋಗ್ಯ ಸಿಬ್ಬಂದಿ ಕೊಠಡಿ, ಲಸಿಕಾ ಕೊಠಡಿ, ಸಭಾಂಗಣ, ಹೆರಿಗೆ ಕೊಠಡಿ, ಶಸ್ತ್ರಚಿಕಿತ್ಸೆ ಕೊಠಡಿ, ಡ್ರೆಸ್ಸಿಂಗ್ ರೂಂ, ರೋಗಿಗಳ ವಿಶ್ರಾಂತಿ ಕೊಠಡಿ ಮುಂತಾದ ಸೌಲಭ್ಯಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ವತಃ ತಾವೇ ಭೇಟಿ ನೀಡುವ ಮೂಲಕ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ಘಟಕ (ಐಸಿಯು)ವನ್ನು ನಿಯೋಗವು ಪರಿಶೀಲನೆ ನಡೆಸಿತು. ಅಲ್ಲದೆ, ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಲಾಗುವ ಚಿಕಿತ್ಸೆ ಬಗ್ಗೆ ಆರೋಗ್ಯ ಅಧಿಕಾರಿಗಳು ಮತ್ತು ರೋಗಿಗಳಿಂದ ಮಾಹಿತಿ ಪಡೆಯಿತು. ಅಲ್ಲದೆ, ಆಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ಘಟಕ ಸೇರಿದಂತೆ ಇನ್ನಿತರ ಸೌಲಭ್ಯಗಳ ಬಗ್ಗೆ ವಿದೇಶಿಗರ ನಿಯೋಗವು ಮೆಚ್ಚುಗೆ ವ್ಯಕ್ತಪಡಿಸಿತು.

ಇದನ್ನೂ ಓದಿ: Chikkaballapur News: ನಗರದಲ್ಲಿಯೂ ಉಲ್ಬಣಿಸಿದ ಸಮಸ್ಯೆ: ದ್ವೀಪದಂತಾದ ಸರಕಾರಿ ಮಹಿಳಾ ಕಾಲೇಜು

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಮತ್ತು ರೋಗಿಗಳಿಗೆ ಏನೆಲ್ಲಾ ಸೌಲಭ್ಯಗಳು ಸಿಗುತ್ತಿವೆ ಎಂಬುದನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಗಡಿ ಭಾಗ ಬಾಗೇಪಲ್ಲಿ ತಾಲ್ಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಂಡೆವು. ಬೆಂಗಳೂರಿನಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಿಂದ ಈ ಸರ್ಕಾರಿ ಆಸ್ಪತ್ರೆ ಕುರಿತು ಮಾಹಿತಿ ಪಡೆದು, ಇಲ್ಲಿಗೆ ಬಂದಿದ್ದೇವೆ ಎಂದು ನಿಯೋಗ ತಿಳಿಸಿತು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ, ಆಸ್ಪತ್ರೆ ಆಡಳಿತಾಧಿಕಾರಿ ಡಾ. ವಿನಯ್ ಅವರು ಆಸ್ಪತ್ರೆಯಲ್ಲಿನ ಸೌಲಭ್ಯಗಳು, ಚಿಕಿತ್ಸೆ ಮತ್ತು ಯಂತ್ರೋಪಕರಣಗಳು ಮತ್ತು ಶುಚಿತ್ವದ ಬಗ್ಗೆ ವಿದೇಶಿಗರ ನಿಯೋಗಕ್ಕೆ ಮಾಹಿತಿ ನೀಡಿದರು.

ನಾವು ಇತರ ದೇಶಗಳಿಗೂ ಭೇಟಿ ನೀಡಿದ್ದೇವೆ. ಸರ್ಕಾರಿ ಆಸ್ಪತ್ರೆಗಳಿಗೆ ಬಡವರೇ ಬರುತ್ತಾರೆ. ಎಲ್ಲರಿಗೂ ಉತ್ತಮ ಆರೋಗ್ಯ ಚಿಕಿತ್ಸೆ ಲಭಿಸಬೇಕು. ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯು ಮಾದರಿ ಯಾಗಿದೆ. ಐಸಿಯು ಘಟಕವು ಉತ್ತಮ ಸ್ಥಿತಿಯಲ್ಲಿದೆ ಎಂದು ವಿದೇಶಿಗರ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.

ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ತಾಲ್ಲೂಕು ಆರೋಗ್ಯಾಧಿಕಾರಿವಿದೇಶಿಗರ ನಿಯೋಗವು ತುರ್ತು ಚಿಕಿತ್ಸಾ ಘಟಕಕ್ಕೆ ಭೇಟಿ ನೀಡಿತು. ಆರೋಗ್ಯ ಚಿಕಿತ್ಸೆ ಬಗ್ಗೆ ಮಾಹಿತಿ ಕೇಳಿದರು. ಅವರಿಗೆ ಆಂಗ್ಲ ಭಾಷೆಯಲ್ಲಿ ಮಾಹಿತಿ ನೀಡಿದ್ದೇವೆ. ಆಸ್ಪತ್ರೆ ಕಾರ್ಯವೈಖರಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿ ದ್ದಾರೆ