Dr.M.C.Sudhakar: ಅಕ್ಷಯಪಾತ್ರೆಯ 81ನೇ ಅಡುಗೆ ಮನೆಗೆ ಚಾಲನೆ ನೀಡಿದ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್
ಇಸ್ಕಾನ್ ಆಡಳಿತ ಮಂಡಳಿಯ ಉಸ್ತುವಾರಿಯಲ್ಲಿ ನಡೆಯುತ್ತಿರುವ ಅಕ್ಷಯಪಾತ್ರೆ ಯೋಜನೆ ಅತ್ಯಾ ಧುನಿಕ ತಂತ್ರಜ್ಞಾನ ಹಾಗೂ ಸ್ವಯಂಚಾಲಿತ ವ್ಯವಸ್ಥೆಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ಆಹಾರ ತಯಾರಿಸುವ ಸಾಮರ್ಥ್ಯ ಹೊಂದಿದೆ. ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡುವ ಈ ವ್ಯವಸ್ಥೆ ಮಕ್ಕಳಿಗೆ ಆರೋಗ್ಯಕರ ಆಹಾರ ತಲುಪಿಸುವಲ್ಲಿ ಮಾದರಿಯಾಗಿದೆ ಎಂದು ಬಣ್ಣಿಸಿದರು
ಶಾಲಾ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಇಸ್ಕಾನ್‌ನ ಅಕ್ಷಯಪಾತ್ರೆ ಫೌಂಡೇಷನ್ ತನ್ನ ೮೧ನೇ ಅಡುಗೆ ಮನೆಯನ್ನು ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂಟಿ ಕ್ರಾಸ್ ಬಳಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್ ಚಾಲನೆ ನೀಡಿದರು. -
ಶಿಡ್ಲಘಟ್ಟ: ಶಾಲಾ ಮಕ್ಕಳಿಗೆ ಗುಣಮಟ್ಟದ ಪೌಷ್ಠಿಕ ಆಹಾರ ಒದಗಿಸುವ ಉದ್ದೇಶದಿಂದ ಇಸ್ಕಾನ್ ನ ಅಕ್ಷಯಪಾತ್ರೆ ಫೌಂಡೇಷನ್ ತನ್ನ 81ನೇ ಅಡುಗೆ ಮನೆಯನ್ನು ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂಟಿ ಕ್ರಾಸ್ ಬಳಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್ (Dr.M.C.Sudhakar)ಚಾಲನೆ ನೀಡಿದರು.
ಈ ಘಟಕದ ಮೂಲಕ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಸುಮಾರು 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿದಿನ ಬಿಸಿಯೂಟ ಪೂರೈಕೆಯಾಗಲಿದೆ. ದಿ.ಎನ್.ವಿ.ಕೃಷ್ಣಮೂರ್ತಿ ರಾವ್ ಹಾಗೂ ದಿ.ಎನ್.ಆರ್.ಪದ್ಮಾವತಮ್ಮ ಅವರ ಸ್ಮರಣಾರ್ಥ ನಿರ್ಮಿಸಲಾದ ಈ ಅಡುಗೆ ಮನೆ ಯನ್ನು ಮಾಜಿ ಸಚಿವ ಹಾಗೂ ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್(Former Minister and Chintamani MLA Dr.M.C.Sudhakar) ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: Shidlaghatta News: ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ನಡೆದ ಶ್ರೀರಾಮ ಶೋಭಾಯಾತ್ರೆ
ಇಸ್ಕಾನ್ ಆಡಳಿತ ಮಂಡಳಿಯ ಉಸ್ತುವಾರಿಯಲ್ಲಿ ನಡೆಯುತ್ತಿರುವ ಅಕ್ಷಯಪಾತ್ರೆ ಯೋಜನೆ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಸ್ವಯಂಚಾಲಿತ ವ್ಯವಸ್ಥೆಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ಆಹಾರ ತಯಾರಿಸುವ ಸಾಮರ್ಥ್ಯ ಹೊಂದಿದೆ. ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡುವ ಈ ವ್ಯವಸ್ಥೆ ಮಕ್ಕಳಿಗೆ ಆರೋಗ್ಯಕರ ಆಹಾರ ತಲುಪಿಸುವಲ್ಲಿ ಮಾದರಿಯಾಗಿದೆ ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ಜಿ. ಪ್ರಭು ಮಾತನಾಡಿ, ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟುವ ಜೊತೆಗೆ ಶಾಲಾ ಹಾಜರಾತಿ ಹೆಚ್ಚಿಸಲು ಅಕ್ಷಯಪಾತ್ರೆಯ ಸೇವೆ ಮಹತ್ವದ್ದಾಗಿದೆ ಎಂದು ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಸಂಸ್ಥೆ ಯಶಸ್ವಿಯಾಗಿ ಕಾರ್ಯ ನಿರ್ವ ಹಿಸುತ್ತಿದ್ದು ಇದರಿಂದಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸಿ, ಮಧ್ಯಾಹ್ನದ ಬಿಸಿಯೂಟವನ್ನು ಗಣ್ಯರು ವಿತರಿಸಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾಂತಿಯ ಅಧ್ಯಕ್ಷ ಗುಣಕರ ರಾಮದಾಸ, ಅಕ್ಷಯ ಪಾತ್ರೆಯ ಸಹ ಸಂಸ್ಥಾಪಕರು ಹಾಗೂ ಉಪಾಧ್ಯಕ್ಷ ಚಂಚಲಪತಿ ದಾಸ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್.ವೈ, ತಹಶೀಲ್ದಾರ್ ಗಗನ ಸಿಂಧು,ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ. ಆರ್, ಪೌರಾಯುಕ್ತೆ ಅಮೃತಗೌಡ, ಡಿಡಿಪಿಐ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನ ಕುಮಾರ್, ಆಂಜನೇಯಲು, ಸುಬ್ಬಾರೆಡ್ಡಿ, ಆನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಕ್ಷಯ ಪಾತ್ರೆ ಫೌಂಡೇ ಷನ್ ಸಂಸ್ಥೆಯ ಸದಸ್ಯರು, ಸಿಬ್ಬಂದಿ, ಸರ್ಕಾರಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಹಾಜರಿದ್ದರು.