ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

K.H. Puttaswamy Gowda: ಮತದಾರರ ನಂಬಿಕೆಗೆ ಅಭಿವೃದ್ಧಿ ಕಾರ್ಯಗಳ ಮೂಲಕ ಋಣ ತೀರಿಸುವೆ; ಗೌರಿಬಿದನೂರಿನಲ್ಲಿ 25 ಗ್ರಾಮಗಳಿಗೆ 6 ಕೋಟಿ ಕಾಮಗಾರಿಗಳಿಗೆ ಚಾಲನೆ

ಯಾವುದೇ ಗ್ರಾಮದಲ್ಲಿ ಬಲವಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದಿಲ್ಲ. ಜನರ ಅಗತ್ಯ ಮತ್ತು ಒತ್ತಾಯದ ಮೇರೆಗೆ ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ರಾಯರೇಕಲಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಒತ್ತಾಯದ ಮೇರೆಗೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗುವುದು

ಗೌರಿಬಿದನೂರು: ಮಾಜಿ ಶಾಸಕರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಲಸಗಳನ್ನು ಮಾಡಿ ಅಭ್ಯಾಸವಿರುವ ಅವರು, ಅದನ್ನು ಬೇರೆಯವರ ಮೇಲೂ ಆರೋಪಿಸುವುದು ಅವರ ಜಾಯಮಾನ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ(MLA K.H. Puttaswamy Gowda) ತೀಕ್ಷ್ಣವಾಗಿ ಟೀಕಿಸಿದರು.

ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ವೀರಮ್ಮನಹಳ್ಳಿ ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ತಮ್ಮ ಅವಧಿಯಲ್ಲಿ ಯಾವುದೇ ಊಹಾಪೋಹಗಳಿಗೆ ತಲೆಕೆಡಿಸಿಕೊಳ್ಳದೆ ಕ್ಷೇತ್ರದ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುವುದಾಗಿ ಹೇಳಿದರು.

ತಾಲ್ಲೂಕಿನ ಸರ್ವ ಜನಾಂಗದ ಜನರನ್ನು ಒಂದೇ ಕುಟುಂಬದಂತೆ ಕಾಣುತ್ತೇನೆ. ಮತದಾರರನ್ನು ಒಬ್ಬರ ಮೇಲೆ ಮತ್ತೊಬ್ಬರನ್ನು ಎತ್ತಿಕಟ್ಟುವ ಜಾಯಮಾನ ನನ್ನದಲ್ಲ. ಕ್ಷೇತ್ರದ ಜನರು ತಮ್ಮ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಮತದಾರರ ಋಣವನ್ನು ಅಭಿವೃದ್ಧಿ ಕಾರ್ಯಗಳ ಮೂಲಕ ತೀರಿಸುವುದು ತಮ್ಮ ಗುರಿಯಾಗಿದೆ ಎಂದರು.

ಇದನ್ನೂ ಓದಿ: KH Puttaswamy Gowda: ತವರು ಮನೆಯ ಅಣ್ಣನಂತೆ ಮಹಿಳೆಯರಿಗೆ ಬಾಗಿನ: ಶಾಸಕ ಪುಟ್ಟಸ್ವಾಮಿಗೌಡ

ಯಾವುದೇ ಗ್ರಾಮದಲ್ಲಿ ಬಲವಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದಿಲ್ಲ. ಜನರ ಅಗತ್ಯ ಮತ್ತು ಒತ್ತಾಯದ ಮೇರೆಗೆ ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿ ಗಳನ್ನು ಕೈಗೊಳ್ಳಲಾಗುವುದು. ರಾಯರೇಕಲಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಒತ್ತಾಯದ ಮೇರೆಗೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.

ತಾಲ್ಲೂಕಿನ ಸುಮಾರು 25 ಗ್ರಾಮಗಳಲ್ಲಿ ಒಟ್ಟು 6 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಎತ್ತಿನಹೊಳೆ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇನ್ನೂ ಸುಮಾರು 100 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳ ಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಎಂ.ಡಿ.ನರಸಿಂಹಮೂರ್ತಿ, ಚಿಕ್ಕಣ್ಣ, ಲಕ್ಷ್ಮಣರಾವ್, ಅನಿಲ್ ಕುಮಾರ್, ಸಂದೀಪ್, ಮಹೇಂದ್ರ, ರವಿ, ಮಲ್ಲೇಶ್, ಉಮಾಶಂಕರ್, ನಿರಂಜನ್, ಕೆ.ಎಚ್.ಪಿ. ಫೌಂಡೇಶನ್ ನಿರ್ದೇಶಕ ಶ್ರೀನಿವಾಸಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.