ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಶತಾಯುಷಿಗಳಾಗಲಿ, ಅವರ ಸೇವೆ ದೇಶಕ್ಕೆ ಇನ್ನಷ್ಟು ಕಾಲ ದೊರೆಯಲಿ ಎಂದು ಶುಭಕೋರಿದ ಜೆಡಿಎಸ್ ಶಾಸಕರು ಮುಖಂಡರು ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪೂಜೆ,ವೃದ್ಧ, ಅನಾಥಾಶ್ರಮಗಳಲ್ಲಿ ಅನ್ನದಾನ ಸೇವೆ, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ,ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹೀಗೆ ನಾನಾ ಕಾರ್ಯಕ್ರಮಗಳ ಮೂಲಕ ವಿಭಿನ್ನವಾಗಿ ಆಚರಿಸಿ ಗಮನ ಸೆಳೆದರು.
ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಬಲಮುರಿ ಗಣಪತಿ ದೇವಾಲಯದ ಶ್ರೀಗಣಪತಿಗೆ ವಕೀಲ ಆರ್.ಮಟಮಪ್ಪ ಅವರು ವಿಶೇಷ ಅಭಿಷೇಕ ಪೂಜೆ ಸಲ್ಲಿಸಿ ನಂತರ ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಮುಖಂಡರಿಗೆ ಸಿಹಿ ಹಂಚಿದರು.ದೇವೇಗೌಡ ಅವರು ರಾಜ್ಯ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದವರು. ಅವರ ಗರಡಿಯಲ್ಲಿ ಪಳಗಿದ ಅನೇಕರು ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನದವರೆಗೆ ಏರಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮ ಯ್ಯ ಸಹ ಈ ಸಾಲಿಗೆ ಸೇರುತ್ತಾರೆ. ರಾಷ್ಟ್ರ ಮತ್ತು ರಾಜ್ಯದಲ್ಲಿ ನೀರಾವರಿ ವಿಚಾರದಲ್ಲಿ ಎಂದು ರಾಜಿ ಪಡೆದೆ ಅಧಿಕಾರಕ್ಕೆ ಆಸೆ ಪಡೆದೆ ನೀರಿಗಾಗಿ ಹೋರಾಟ ಮಾಡಿದ ರಾಜಕಾರಣಿ ದೇವೇಗೌಡ ಎಂದು ಗುಣಗಾನ ಮಾಡಿದರು.
ಇದನ್ನೂ ಓದಿ: Chinthamani News: ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಈಜು ತರಬೇತಿ: ಡ್ಯಾನ್ಸ್ ಮಾಸ್ಟರ್ ಕೇಶವ ಅವರ ಸಾಮಾಜಿಕ ಕಳಕಳಿ
ಜಿಲ್ಲಾ ಜೆಡಿಎಸ್ ವತಿಯಿಂದ ಮಾಜಿ ಪ್ರಧಾನಿ ಹೆಚ್ ದೇವೇಗೌಡ ಅವರ ಹುಟ್ಟುಹಬ್ಬದ ಅಂಗ ವಾಗಿ ನಗರದ ಹೊರವಲಯದಲ್ಲಿರುವ ವೀರಾಂಜನೇಯ ಸ್ವಾಮಿಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹಿತ ನೂರೊಂದು ತೆಂಗಿನಕಾಯಿ ಈಡುಗಾಯಿ ಒಡೆದು,ಬಳಿಕ ಕೇಕ್ ಕತ್ತರಿಸಿ ಅನ್ನಸಂತರ್ಪಣೆ ಮಾಡುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತಮುನಿಯಪ್ಪ ಅವರು, ಮಣ್ಣಿನ ಮಗ ದೇವೇಗೌಡರು ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ.ಅವರ ವ್ಯಕ್ತಿತ್ವ ಮತ್ತು ರಾಜಕೀಯ ಜೀವನ ಅನೇಕ ಮಂದಿಗೆ ಪ್ರೇರಣೆಯಾಗಿದೆ.ಅವರ ಮಾರ್ಗದರ್ಶನದಲ್ಲಿ ಬೆಳೆದ ಹಲವರು ಇಂದು ಉತ್ತಮ ರಾಜಕೀಯ ಸ್ಥಾನಮಾನವನ್ನು ಪಡೆದಿದ್ದಾರೆ ಎಂದು ಹೇಳಿದರು.
ಇನ್ನೂ ಅವರು ದೇವೇಗೌಡರ ಸುದೀರ್ಘ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದರು ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಾಗುವುದು ಜೊತೆಗೆ,ದೇವೇಗೌಡರ ರಾಜ್ಯಸಭಾ ಸದಸ್ಯತ್ವ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ಮತ್ತೊಮ್ಮೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಮಾಡಬೇಕೆಂದು ಒತ್ತಾಯಿಸಿದರು.
ಈ ವೇಳೆ ಜೆಡಿಎಸ್ ಗೌರವಾಧ್ಯಕ್ಷ ಕೆ.ಆರ್.ರೆಡ್ಡಿ ಮಾತನಾಡಿ, ದೇವೇಗೌಡರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿ, ಅವರು ನಮ್ಮಂತಹ ಹಲವರಿಗೆ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗೌರಿಬಿದನೂರು ನರಸಿಂಹಮೂರ್ತಿ, ಶಾಂತಮೂರ್ತಿ, ಬಂಡ್ಲು ಶ್ರೀನಿವಾಸ್, ಅಖಿಲ್ ರೆಡ್ಡಿ, ಸ್ಟುಡಿಯೋ ಮಂಜು, ಅಮರ್, ಜಫರುಲ್ಲಾ, ಸಾಧಿಕ್, ಕುಮಾರ್, ನಾಗರಾಜ್, ಜಾತವಾರ ಜಗದೀಶ್, ಲಕ್ಷ್ಮಿ ನರಸಪ್ಪ,ಮಾರೆ ಗೌಡ, ಪ್ರಭಾ ನಾರಾಯಣ ಗೌಡ, ಅರುಣ, ಸುನಿತ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.