ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shidlaghatta News: ಉಚಿತ ಆರೋಗ್ಯ ತಪಾಸಣಾ ಶಿಬಿರ:ದೈಹಿಕ ಚಟುವಟಿಕೆ ರೂಢಿಸಿಕೊಳ್ಳಲು ಸಲಹೆ

ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ದಿವಸ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದೇಹಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿದಿನ ಹೆಚ್ಚು ನಡೆದಾ ಡುವ ಅಭ್ಯಾಸ ರೂಢಿಸಿಕೊಳ್ಳುವುದರಿಂದ ಆರೋಗ್ಯ ಉತ್ತಮಪಡಿಸಿಕೊಳ್ಳಬಹುದು

ಶಿಡ್ಲಘಟ್ಟ: ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು  ವೈ.ಹುಣಸೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ತೇಜಶ್ರೀ ಅಭಿಪ್ರಾಯಪಟ್ಟರು.

ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ದಿವಸ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದೇಹಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿದಿನ ಹೆಚ್ಚು ನಡೆದಾಡುವ ಅಭ್ಯಾಸ ರೂಢಿಸಿಕೊಳ್ಳುವುದರಿಂದ ಆರೋಗ್ಯ ಉತ್ತಮಪಡಿಸಿಕೊಳ್ಳಬಹುದು ಎಂದರು.

ಇದನ್ನೂ ಓದಿ: Chikkaballapur (Chinthamani) News: ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ

ಈಗಾಗಲೇ ಇರಗಂಪಲ್ಲಿ, ಚೇಳೂರು, ಅಕ್ಕಿಮಂಗಳ, ಕುರುಬೂರು ಕೆಂಚಾರ್ಲಹಳ್ಳಿ, ಕುಂದಲಗುರ್ಕಿ ಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸ ಲಾಗಿದೆ. ಅಕ್ಟೋಬರ್ 30 ರಂದು ಮೇಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೂಡ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಗ್ರಾಮಸ್ಥರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಶಿಬಿರದಲ್ಲಿ ಹೃದಯ, ನರ, ಕಿಡ್ನಿಯಲ್ಲಿ ಕಲ್ಲು, ಮೂತ್ರಕೋಶ ಹಾಗೂ ಮೂತ್ರಪಿಂಡಕ್ಕೆ ಸಂಬಂಧಿ ಸಿದ ಸಮಸ್ಯೆಗಳು, ಕ್ಯಾನ್ಸರ್, ಮೂಳೆ, ಸ್ತ್ರೀಯರ ಸಮಸ್ಯೆಗಳು, ಕಿವಿ, ಮೂಗು, ಗಂಟಲು ಚಿಕಿತ್ಸೆ ಮಾಡಿದರು. ಉಚಿತವಾಗಿ ಎಕೊ ಮತ್ತು ಇ.ಸಿ.ಜಿ ಮಾಡಿದರು.

ಈ ಸಂದರ್ಭದಲ್ಲಿ ತಜ್ಞ ವೈದ್ಯರಾದ ಡಾ.ಗೋವಿಂದ್, ಡಾ.ಸುಷ್ಮಾ, ಡಾ.ಪೃಥ್ವಿ, ಡಾ.ನಮ್ರತಾ, ಡಾ.ಸಂಜನಾ ಹಾಜರಿದ್ದರು.