ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gudibande News: ವ್ಯಸನಮುಕ್ತಿಯಿಂದ ನೆಮ್ಮದಿಯ ಬದುಕಿನೆಡೆಗೆ: ಧರ್ಮಸ್ಥಳ ಯೋಜನೆಯಿಂದ ವಿಶೇಷ ಅಭಿಯಾನಕ್ಕೆ ಚಾಲನೆ

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಪ್ರತೀ ವರ್ಷ ಮದ್ಯಪಾನ ಹಾಗೂ ಮಾದಕ ವಸ್ತುಗಳ ಕುರಿತು ಜಾಗೃತಿ ಮೂಡಿಸುತ್ತಾ ಬರುತ್ತಿದೆ. ಈ ಹಾದಿಯಲ್ಲಿ ಕಡಿಮೆ ಖರ್ಚು ಹಾಗೂ ಸಮಯದಲ್ಲಿ ವ್ಯಕ್ತಿಯ ಅಂತರಂಗವನ್ನು ಭೇದಿಸಿ ಮನಃಪರಿವರ್ತನೆ ಮಾಡುವ ವಿಶೇಷ ಪ್ರಕ್ರಿಯೆ ಈ ಮದ್ಯವರ್ಜನ ಶಿಬಿರದ ಉದ್ದೇಶ ವಾಗಿದೆ.

ತಾಲೂಕಿನ ಬೀಚಗಾನಹಳ್ಳಿ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಹಮ್ಮಿಕೊಂಡಿದ್ದ ೨೦೪೪ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಗುಡಿಬಂಡೆ: ತಾಲೂಕಿನ ಬೀಚಗಾನಹಳ್ಳಿ ಸಮುದಾಯ ಭವನದಲ್ಲಿ ಚಿಕ್ಕಬಳ್ಳಾಪುರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ.ಸಿ.ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಂಗಳೂರಿನ ಮದ್ಯಪಾನ ಸಂಯಮ ಮಂಡಳಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ 2044ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ತಿಮ್ಮಯ್ಯ ನಾಯಕ್ ಮಾತನಾಡಿ, ಧರ್ಮಸ್ಥಳ ಕ್ಷೇತ್ರದ ವತಿಯಿಂದ ಪ್ರತೀ ವರ್ಷ ಮದ್ಯಪಾನ ಹಾಗೂ ಮಾದಕ ವಸ್ತುಗಳ ಕುರಿತು ಜಾಗೃತಿ ಮೂಡಿಸುತ್ತಾ ಬರುತ್ತಿದೆ. ಈ ಹಾದಿಯಲ್ಲಿ ಕಡಿಮೆ ಖರ್ಚು ಹಾಗೂ ಸಮಯದಲ್ಲಿ ವ್ಯಕ್ತಿಯ ಅಂತರಂಗವನ್ನು ಭೇದಿಸಿ ಮನಃಪರಿವರ್ತನೆ ಮಾಡುವ ವಿಶೇಷ ಪ್ರಕ್ರಿಯೆ ಈ ಮದ್ಯವರ್ಜನ ಶಿಬಿರದ ಉದ್ದೇಶ ವಾಗಿದೆ. ಜನಜಾಗೃತಿ ವೇದಿಕೆಯ ಮೂಲಕ ನಡೆಯುತ್ತಿರುವ ಸಾಮಾಜಿಕ ಆಂದೋಲನ ಹಾಗೂ ಶಿಬಿರದ ದೈನಂದಿನ ಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಇದನ್ನೂ ಓದಿ: Gudibande News: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಲಿಕಾ ಹಬ್ಬ ಸಹಕಾರಿ: ಬಿಇಒ ಕೃಷ್ಣಕುಮಾರಿ

ಬಳಿಕ ತಾಪಂ ಇಒ ನಾಗಮಣಿ ಮಾತನಾಡಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ವ್ಯಸನ ಮುಕ್ತ ಸಮಾಜದ ಅವಶ್ಯಕತೆಯಿದೆ. ಈಗಾಗಲೇ ಸಾಕಷ್ಟು ಮಂದಿ ಆರೋಗ್ಯದ ಸ್ವಾಸ್ಥ್ಯ ಹಾಳುಮಾಡುವ ದುಶ್ಚಟಗಳಿಗೆ ಬಲಿಯಾಗಿದ್ದಾರೆ. ಮಾದಕ ವಸ್ತುಗಳ ಸೇವನೆಯಿಂದ ಇಡೀ ಕುಟುಂಬಗಳೇ ನಾಶವಾಗುತ್ತವೆ. ಇದರ ಜೊತೆಗೆ ದೇಶದಲ್ಲಿ ಅಭದ್ರತೆ ಸೃಷ್ಟಿಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿರಾಗಬೇಕಿದೆ. ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡುವ ಸಲುವಾಗಿ ಇಂತಹ ಶಿಬಿರಗಳನ್ನು ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಮತ್ತಷ್ಟು ಕಾರ್ಯ ಕ್ರಮಗಳು ಆಯೋಜನೆಯಾಗಲಿ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದ ಮಾಜಿ ಕೆ.ಡಿ.ಪಿ ಸದಸ್ಯ ಬಿ. ವಿ ಕೃಷ್ಣೇಗೌಡ ರು, ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ವೀರೇಂದ್ರ ಹೆಗ್ಗಡೆಯವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತರತ್ನ ದೊರೆಯಬೇಕು ಎಂದು ಒತ್ತಾಯಿಸಿದರು. ಸರ್ಕಾರವು ಆದಾಯಕ್ಕಾಗಿ ಮದ್ಯದಂಗಡಿಗಳ ಪರವಾನಗಿ ನೀಡುತ್ತಿದ್ದರೆ, ಹೆಗ್ಗಡೆಯವರು ಕುಡಿತದಿಂದ ಹೈರಾಣಾದ ಕುಟುಂಬಗಳ ಕಣ್ಣೀರು ವರೆಸಿ, ಒಡೆಯುವ ಹಂತದಲ್ಲಿರುವ ಕುಟುಂಬಗಳನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಬಳಿಕ ಜಿಲ್ಲಾ ನಿರ್ದೇಶಕ ಪ್ರಶಾಂತ್ ಸಿ. ಎಸ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಿಬಿರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ.ಎಸ್.ಕಿರಣ್ ಕುಮಾರ್ ವಹಿಸಿದ್ದರು.

ಈ ಸಮಯದಲ್ಲಿ ಗಣ್ಯರಾದ ಕೆ.ನರೇಂದ್ರ, ಡಿ.ಎಲ್.ಪರಿಮಳ, ಪಿ.ಎನ್.ಮಂಜುನಾಥ್, ಸುಷ್ಮಾ ಶ್ರೀನಿವಾಸ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ನಾರಾಯಣಸ್ವಾಮಿ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.