ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Rathotsava: ಕೈವಾರದಲ್ಲಿ ಹುಣ್ಣಿಮೆ ಪೂಜೆ, ರಥೋತ್ಸವ

ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರಾಯಣಸ್ವಾಮಿ ಹಾಗೂ ಸದ್ಗುರು ಶ್ರೀಯೋಗಿನಾರಾಯಣ ತಾತಯ್ಯನವರ ಉತ್ಸವ ಮೂರ್ತಿಗಳಿಗೆ ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ ಹಾಗೂ ಮಹಾಮಂಗಳಾರತಿಯನ್ನು ನೆರವೇರಿಸಲಾಯಿತು. ಬಳಿಕ ನಡೆದ ರಥೋತ್ಸವದ ಪೂಜಾ ಕೈಂಕರ್ಯಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

ಕೈವಾರದಲ್ಲಿ ಹುಣ್ಣಿಮೆ ಪೂಜೆ, ರಥೋತ್ಸವ

-

Profile
Ashok Nayak Sep 26, 2026 10:10 PM

ಚಿಂತಾಮಣಿ: ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀಯೋಗಿ ನಾರಾಯಣ ಮಠದಲ್ಲಿ ಭಾದ್ರಪದ ಮಾಸದ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರಾಯಣಸ್ವಾಮಿ ಹಾಗೂ ಸದ್ಗುರು ಶ್ರೀಯೋಗಿನಾರಾಯಣ ತಾತಯ್ಯನವರ ಉತ್ಸವ ಮೂರ್ತಿಗಳಿಗೆ ವಿಶೇಷ ಅಭಿಷೇಕ, ಅಷ್ಟಾವಧಾನ ಸೇವೆ ಹಾಗೂ ಮಹಾಮಂಗಳಾರತಿಯನ್ನು ನೆರವೇರಿಸಲಾಯಿತು. ಬಳಿಕ ನಡೆದ ರಥೋತ್ಸವದ ಪೂಜಾ ಕೈಂಕರ್ಯಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: Nanjangud Rathotsava: ನಂಜನಗೂಡು ರಥೋತ್ಸವದ ವೇಳೆ ನೂಕುನುಗ್ಗಲು; ಅಸ್ವಸ್ಥಗೊಂಡು ಓರ್ವ ಭಕ್ತ ಸಾವು, ಇಬ್ಬರಿಗೆ ಗಾಯ

ಹುಣ್ಣಿಮೆ ಅಂಗವಾಗಿ ನಡೆದ ಧಾರ್ಮಿಕ ಆಚರಣೆಗಳಲ್ಲಿ ಭಕ್ತರು ಭಾಗವಹಿಸಿ ಸಾಮೂಹಿಕ ನಾಮ ಸಂಕೀರ್ತನೆ ನಡೆಸಿದರು. ಶ್ರೀಯೋಗಿನಾರಾಯಣ ಮಹಿಳಾ ಭಜನಾ ಮಂಡಳಿಯಿಂದ ಸಾಮೂಹಿಕ ಭಜನೆ ನಡೆಯಿತು. ನಾದಸುಧಾರಸ ಸಾಂಸ್ಕೃತಿಕ ವೇದಿಕೆಯಲ್ಲಿ ಸಂಕೀರ್ತನಾ ಕಾರ್ಯಕ್ರಮವೂ ಆಯೋಜಿಸಲಾಗಿತ್ತು. ಗರ್ಭಗುಡಿಯಲ್ಲಿ ಸದ್ಗುರು ಶ್ರೀಯೋಗಿನಾರಾಯಣ ತಾತಯ್ಯನವರ ಮೂಲ ವಿಗ್ರಹಕ್ಕೆ ವಿವಿಧ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು.

ಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ

ಹುಣ್ಣಿಮೆ ಅಂಗವಾಗಿ ಆಲಂಬಗಿರಿ ದೇವಾಲಯದಿಂದ ಸುಮಾರು ಒಂದು ಕಿ.ಮೀ. ದೂರದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿ ತಪೋವನದಲ್ಲಿ ಸಂಕೀರ್ತನಾ ಗಿರಿಪ್ರದಕ್ಷಿಣೆ ನಡೆಯಿತು. ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಡಾ. ಎಂ.ಆರ್. ಜಯರಾಮ್ ಸೇರಿದಂತೆ ಹಲವಾರು ಭಕ್ತರು ಗಿರಿಪ್ರದಕ್ಷಿಣೆ ಯಲ್ಲಿ ಪಾಲ್ಗೊಂಡರು.