Chikkaballapur News: ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ
ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಶ್ರಾವಣಮಾಸದ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ, ಮಹಾಮಂಗಳಾರತಿಯನ್ನು ಬೆಳಗಲಾ ಯಿತು.

ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಶ್ರಾವಣಮಾಸದ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಚಿಂತಾಮಣಿ : ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಶ್ರಾವಣಮಾಸದ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ, ಮಹಾಮಂಗಳಾರತಿಯನ್ನು ಬೆಳಗಲಾಯಿತು.
ಇದನ್ನೂ ಓದಿ: Chikkaballapur (Chinthamani) News: ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ
ರಥೋತ್ಸವವನ್ನು ನಡೆಸಲಾಯಿತು. ಭಕ್ತಾಧಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಹುಣ್ಣಿಮೆ ಪ್ರಯುಕ್ತ ನಾದಸುಧಾರಸ ಕಲಾವಿದರಿಂದ ಸಂಕೀರ್ತನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ: ಆಲಂಬಗಿರಿ ದೇವಾಲಯದಿಂದ ಸುಮಾರು ೧ ಕಿ.ಮೀ ದೂರ ದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತೊಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು. ಹುಣ್ಣಿಮೆ ಗಿರಿಪ್ರದಕ್ಷಿಣೆಯಲ್ಲಿ ಕೈವಾರ ಕ್ಷೇತ್ರದ ಧರ್ಮಾ ಧಿಕಾರಿಗಳಾದ ಡಾ|| ಎಂ.ಆರ್.ಜಯರಾಮ್ ರವರು ಭಾಗವಹಿಸಿದ್ದರು. ಅವರೊಂದಿಗೆ ಹಲವಾರು ಭಕ್ತರು ಗಿರಿಪ್ರದಕ್ಷಿಣೆ ಮಾಡಿದರು.