Chinthamani News: ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ
ವಿದ್ವಾನ್ ವಾನರಾಶಿ ಬಾಲಕೃಷ್ಣ ಭಾಗವತರ್ ರವರು ವಿಶೇಷ ಪ್ರವಚನವನ್ನು ನೀಡಿದರು. ಹುಣ್ಣಿಮೆ ಪ್ರಯುಕ್ತ ನಾದಸುಧಾರಸ ಸಾಂಸ್ಕöÈತಿಕ ವೇದಿಕೆಯಲ್ಲಿ ಅಖಂಡ ಸಂಕೀರ್ತನೆಯನ್ನು ಏರ್ಪಡಿಸ ಲಾಗಿತ್ತು. ಗರ್ಭಗುಡಿಯಲ್ಲಿ ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರ ಮೂಲ ವಿಗ್ರಹಕ್ಕೆ ವಿವಿಧ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು.
ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. -
ಚಿಂತಾಮಣಿ: ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ ಹಾಗೂ ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ, ಮಹಾಮಂಗಳಾರತಿಯನ್ನು ಬೆಳಗಲಾಯಿತು. ರಥೋತ್ಸವವನ್ನು ನಡೆಸಲಾಯಿತು. ಭಕ್ತಾಧಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು.
ವಿದ್ವಾನ್ ವಾನರಾಶಿ ಬಾಲಕೃಷ್ಣ ಭಾಗವತರ್ ರವರು ವಿಶೇಷ ಪ್ರವಚನವನ್ನು ನೀಡಿದರು. ಹುಣ್ಣಿಮೆ ಪ್ರಯುಕ್ತ ನಾದಸುಧಾರಸ ಸಾಂಸ್ಕöÈತಿಕ ವೇದಿಕೆಯಲ್ಲಿ ಅಖಂಡ ಸಂಕೀರ್ತನೆಯನ್ನು ಏರ್ಪಡಿಸ ಲಾಗಿತ್ತು. ಗರ್ಭಗುಡಿಯಲ್ಲಿ ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರ ಮೂಲ ವಿಗ್ರಹಕ್ಕೆ ವಿವಿಧ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು.
ಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ: ಆಲಂಬಗಿರಿ ದೇವಾಲಯದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು. ಹುಣ್ಣಿಮೆ ಗಿರಿಪ್ರದಕ್ಷಿಣೆಯಲ್ಲಿ ಕೈವಾರ ಕ್ಷೇತ್ರದ ಧರ್ಮಾಧಿ ಕಾರಿಗಳಾದ ಡಾ|| ಎಂ.ಆರ್.ಜಯರಾಮ್ ರವರು ಭಾಗವಹಿಸಿದ್ದರು. ಅವರೊಂದಿಗೆ ಹಲವಾರು ಭಕ್ತರು ಗಿರಿಪ್ರದಕ್ಷಿಣೆ ಮಾಡಿದರು.