ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Gauribidanur News: ಕೆಎಚ್ಪಿ ಬಣಕ್ಕೆ ಗ್ರಾ.ಪಂ ಅಧ್ಯಕ್ಷ ಕುಮಾರ್ ಸೇರ್ಪಡೆ

ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗಿ ಗ್ರಾಮ ಪಂಚಾಯತಿಯ ಉತ್ತಮ ನಿರ್ವಹಣೆ ಎಲ್ಲಾ ಸದಸ್ಯರೊಂದಿಗೆ ಉತ್ತಮ ಬಾಂಧವ್ಯ ಮೂಲಕ "ಯುವಕರನ್ನು ಸೆಳೆದು ಪಕ್ಷ ಸಂಘಟನೆ ಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಇದ್ದಕ್ಕಿದ್ದಂತೆ ಬೆಂಬಲಿಗರೊಂದಿಗೆ ಶಾಸಕರ ಬಣ ಸೇರಿ ಅಚ್ಚರಿ ಮೂಡಿಸಿದ್ದಾರೆ.

ಕೆಎಚ್ಪಿ ಬಣಕ್ಕೆ ಗ್ರಾ.ಪಂ ಅಧ್ಯಕ್ಷ ಕುಮಾರ್ ಸೇರ್ಪಡೆ

-

Ashok Nayak
Ashok Nayak Jan 17, 2026 10:07 PM

ಗೌರಿಬಿದನೂರು: ತಾಲೂಕಿನ ಹುದಗೂರು ಗ್ರಾಮ ಪಂಚಾಯತಿಯ ಅಧ್ಯಕ್ಷ ಕುಮಾರ್ ಕಾಂಗ್ರೆಸ್ ಪಕ್ಷ ತೊರೆದು ತಮ್ಮ ಬೆಂಬಲಿಗರೊಂದಿಗೆ ಶಾಸಕರ ಗೃಹ ಕಚೇರಿಯಲ್ಲಿ ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ(MLA K.H. Puttaswamy Gowda) ಬಣಕ್ಕೆ ಸೇರ್ಪಡೆಯಾಗಿದ್ದಾರೆ.

ತಾಲೂಕಿನ ಗ್ರಾಮ ಪಂಚಾಯತಿಗಳ ಪೈಕಿ ಅತ್ಯಂತ ಯುವ  ಅಧ್ಯಕ್ಷ ಉತ್ಸಾಹಿ  ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಕುಮಾರ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

17cbpm6k Gau

ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗಿ ಗ್ರಾಮ ಪಂಚಾಯತಿಯ ಉತ್ತಮ ನಿರ್ವಹಣೆ ಎಲ್ಲಾ ಸದಸ್ಯರೊಂದಿಗೆ ಉತ್ತಮ ಬಾಂಧವ್ಯ ಮೂಲಕ "ಯುವಕರನ್ನು ಸೆಳೆದು ಪಕ್ಷ ಸಂಘಟನೆ ಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಇದ್ದಕ್ಕಿದ್ದಂತೆ ಬೆಂಬಲಿಗರೊಂದಿಗೆ ಶಾಸಕರ ಬಣ ಸೇರಿ ಅಚ್ಚರಿ ಮೂಡಿಸಿದ್ದಾರೆ. ಶೀಘ್ರದಲ್ಲೇ ಜಿಪಂ, ತಾಪಂ, ನಗರಸಭೆ ಸೇರಿ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ ಸಾಧ್ಯತೆಯಿದೆ. ಹೀಗಿರುವಾಗ ಪಕ್ಷದ ಯುವ ನಾಯಕ `ಬೆಂಬಲಿಗರೊಂದಿಗೆ ಪಕ್ಷಾಂತರವಾಗಿರುವುದು ಕಾಂಗ್ರೆಸ್ ಪಾಲಿಗೆ ಅದರಲ್ಲೂ ಮಾಜಿ ಸಚಿವ ಶಿವಶಂಕರರೆಡ್ಡಿ ಅವರಿಗೆ ನುಂಗಲಾರದ ತುತ್ತಾಗಿದೆ.

ಇದನ್ನೂ ಓದಿ: Gauribidanur News: 6.5 ಕೋಟಿ ರೂ. ವಿಶೇಷ ಅನುದಾನದಲ್ಲಿ ನಿರ್ಮಾಣ: ನಿಷ್ಕ್ರಿಯವಾಗಿರುವ ಸುಸಜ್ಜಿತ ನೂತನ ಕಟ್ಟಡ

ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ ಶಾಸಕರ ಬಣ ಸೇರಿ ಮಾತನಾಡಿ, ದ ಹುದಗೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕುಮಾರ್ ಶಾಸಕ ಪುಟ್ಟಸ್ವಾಮಿ ಗೌಡರು ಯುವಕ ರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿದ್ದಾರೆ, ತಾಲೂಕಿನ ಅಭಿವೃದ್ಧಿಗೆ ತಮ್ಮದೇ ಆದ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರುತ್ತಿದ್ದಾರೆ. ಎಲ್ಲ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರೊಂದಿಗೆ ನಡೆದರೆ ರಾಜಕೀಯ ಜೀವನ, ಯುವಕರಿಗೆ ಪ್ರಾತಿನಿಧ್ಯ ದೊರೆಯುತ್ತದೆ ಎಂದರು.

ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರು ಮಾತನಾಡಿ, ತಾಲೂಕಿನಲ್ಲಿ ಯುವಕರಿಗೆ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಸ್ಥಾನ ದೊರೆತಾಗ ಸಾರ್ವಜನಿಕರ ಸೇವೆಗೆ ಶಕ್ತಿ ಬರುತ್ತದೆ. ಯುವ ಪಡೆಗಳು ರಾಜಕೀಯದಲ್ಲಿ ಸಕ್ರಿಯವಾಗಿ ಅಭಿವೃದ್ಧಿ ಮಾಡುವ ಕೈಗಳಿಗೆ ಬೆಂಬಲವಾಗಿರಬೇಕು. ಸ್ಥಳೀಯ ಚುನಾವಣೆಗಳಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು. ಪ್ರತಿಯೊಬ್ಬರೂ ಸಂಘಟನೆಯ ಕೆಲಸ ಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು..

ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರಾಮರೆಡ್ಡಿ, ಕೋಚಿಮುಲ್  ಮಾಜಿ ಅಧ್ಯಕ್ಷ ಜೆ. ಕಾಂತರಾಜು, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಕೃಷ್ಣಪ್ಪ, ಮುಖಂಡರಾದ ಕೆ.ನಂಜುಂಡಪ್ಪ, ನಾರಾಯಣ ಸ್ವಾಮಿ, ಗಂಗಾಧರಪ್ಪ ಸೇರಿದಂತೆ ಇನ್ನಿತರ ಮುಖಂಡರು ಹಾಜರಿದ್ದರು.