N.H. Shivashankara Reddy: ಗಾಂಧೀಜಿ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು: ಶಿವಶಂಕರರೆಡ್ಡಿ
ಅಸಹಕಾರ ಚಳುವಳಿ, ದಂಡಿ ಯಾತ್ರೆ ಹಾಗೂ ಕ್ವಿಟ್ ಇಂಡಿಯಾ ಚಳುವಳಿಗಳ ಮೂಲಕ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ತ್ಯಾಗ ಮತ್ತು ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಅವರ ಆದರ್ಶಗಳನ್ನು ಸ್ಮರಿಸುವುದಷ್ಟೇ ಅಲ್ಲದೆ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
-
ಗೌರಿಬಿದನೂರು: ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ ಹಾಗೂ ತ್ಯಾಗದ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು, ಅವರು ಕಂಡ ಕನಸಿನ ಭಾರತ ನಿರ್ಮಾಣಕ್ಕೆ ಕಾರ್ಯಪ್ರವೃತ್ತರಾಗಬೇಕು ಎಂದು ಮಾಜಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ( N. H. Shivashankara Reddy) ಹೇಳಿದರು.
ನಗರದ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತ ನಾಡಿದ ಅವರು, ಮೋಹನದಾಸ್ ಕರಮಚಂದ್ ಗಾಂಧಿ(Mohandas karamchand Gandhi) ಅವರು 1869ರ ಅಕ್ಟೋಬರ್ 2ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದರು. ದಕ್ಷಿಣ ಆಫ್ರಿಕಾದಲ್ಲಿನ ವರ್ಣಭೇದ ನೀತಿಯ ವಿರುದ್ಧದ ಹೋರಾಟದಿಂದ ಜಾಗೃತರಾದ ಅವರು, ಸತ್ಯ ಮತ್ತು ಅಹಿಂಸೆಯನ್ನು ಜೀವನದ ಮೂಲಮಂತ್ರವನ್ನಾಗಿಸಿಕೊಂಡು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು ಎಂದರು.
ಇದನ್ನೂ ಓದಿ: N.H. Shivashankara Reddy: ಗ್ರಾಮೀಣ ಭಾಗದ ಸಾವಿರಾರು ಮಕ್ಕಳ ಬದುಕಿಗೆ ಸರ್ಕಾರಿ ಶಾಲೆಗಳು ಭದ್ರ ಬುನಾದಿ
ಅಸಹಕಾರ ಚಳುವಳಿ, ದಂಡಿ ಯಾತ್ರೆ ಹಾಗೂ ಕ್ವಿಟ್ ಇಂಡಿಯಾ ಚಳುವಳಿಗಳ ಮೂಲಕ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ತ್ಯಾಗ ಮತ್ತು ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಅವರ ಆದರ್ಶಗಳನ್ನು ಸ್ಮರಿಸುವುದಷ್ಟೇ ಅಲ್ಲದೆ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ವಿದುರಾಶ್ವತ್ಥದಲ್ಲಿ ವೀರಮರಣ ಹೊಂದಿದ ಸ್ವಾತಂತ್ರ್ಯ ಹೋರಾಟ ಗಾರರನ್ನು ಸ್ಮರಿಸಿ ವೀರಸೌಧಕ್ಕೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ತಾಲೂಕಿನಾದ್ಯಂತ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ದ್ವಿಚಕ್ರ ವಾಹನಗಳಲ್ಲಿ ಸಂಚರಿಸಿ ಗಾಂಧಿ ಜಯಂತಿ ಆಚರಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.