Ganeshotsava: ಸಡಗರ, ಸಂಭ್ರಮದಿಂದ ಗಣೇಶೋತ್ಸವ ಆಚರಣೆ
ಶ್ರೀವಿನಾಯಕ ಗೆಳೆಯರ ಬಳಗವು ತನ್ನ 2 ನೇ ವರ್ಷದ ಗಣೇಶ ಹಬ್ಬದ ಆಚರಣೆ ಅಂಗವಾಗಿ ಬಡಾವಣೆಯ ಕ್ಲಬ್ ಹೌಸ್ ನಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಿ ಐದು ದಿನಗಳ ಕಾಲ ವಿವಿಧ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಅಲ್ಲದೆ ಪ್ರತಿ ದಿನ ಪೂಜೆ ಕೈಂಕರ್ಯಗಳನ್ನು ಕೈಗೊಂಡು ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಿತು.

-

ಚಿಕ್ಕಬಳ್ಳಾಪುರ : ನಗರ ಹೊರವಲಯದ ಸಿಟ್ರಸ್ ಮೆಡೋಸ್ ಬಡಾವಣೆಯಲ್ಲಿ ಗಣೇಶೋತ್ಸವ ವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಶ್ರೀವಿನಾಯಕ ಗೆಳೆಯರ ಬಳಗವು ತನ್ನ 2 ನೇ ವರ್ಷದ ಗಣೇಶ ಹಬ್ಬದ ಆಚರಣೆ ಅಂಗವಾಗಿ ಬಡಾವಣೆಯ ಕ್ಲಬ್ ಹೌಸ್ ನಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಿ ಐದು ದಿನಗಳ ಕಾಲ ವಿವಿಧ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಅಲ್ಲದೆ ಪ್ರತಿ ದಿನ ಪೂಜೆ ಕೈಂಕರ್ಯಗಳನ್ನು ಕೈಗೊಂಡು ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಿತು.
ಇದನ್ನೂ ಓದಿ: Ganesh Chaturthi 2025: ಬಾಂಬೆ ಟೈಮ್ಸ್ ಗಣೇಶ ಮಹೋತ್ಸವಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಬಾಲಿವುಡ್ ಸೆಲೆಬ್ರಿಟಿಗಳು
10 ವರ್ಷದೊಳಗಿನ ಮಕ್ಕಳಿಗೆ ಪ್ಯಾನ್ಸಿ ಡ್ರೆಸ್, ಸಂಗೀತ, ಟ್ಯಾಲೆಂಟ್ ಶೋ ಗಳನ್ನು ಮತ್ತು ಮಹಿಳೆ ಯರಿಗೆ ರಂಗೋಲಿ, ಲೆಮೆನ್ ಅಂಡ್ ಸ್ಪೂನ್ ರೇಸ್, ಹಾಡು, ನೃತ್ಯ ಮತ್ತಿತರ ಸ್ಪರ್ಧೆಗಳನ್ನು ಏರ್ಪಡಿಸಿತ್ತು.
ಪುಟಾಣಿ ಮಕ್ಕಳಿಂದ ಹಿಡಿದು ಎಲ್ಲಾ ವಯಸ್ಸಿನವರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಖುಷಿ ಪಟ್ಟರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳಿಂದ ಬಹುಮಾನಗಳನ್ನು ವಿತರಿಸಲಾಯಿತು.
ಗಣೇಶ ವಿಸರ್ಜನೆಯ ದಿನ ಭಾನುವಾರದಂದು ಗಣೇಶ ಮೂರ್ತಿಯನ್ನು ಬಡಾವಣೆಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಮಕ್ಜಳು, ಮಹಿಳೆಯರು, ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.