ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MP P C Mohan: ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೀರ್ತಿ ತನ್ನಿ: ವಿದ್ಯಾರ್ಥಿಗಳಿಗೆ ಸಂಸದ ಪಿ.ಸಿ.ಮೋಹನ್ ಕಿವಿಮಾತು

ಸುಮಾರು 124 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬಲಿಜ ಸಮುದಾಯದ ಗಣ್ಯರನ್ನು ಗುರುತಿಸಿ ಸನ್ಮಾನಿಸಲಾಗಿರುವುದು ಅತ್ಯಂತ ಶ್ಲಾಘನೀಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಆರ್ಥಿಕವಾಗಿ ಹಿಂದುಳಿ ದಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು

ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೀರ್ತಿ ತನ್ನಿ

-

Profile
Ashok Nayak Jun 28, 2026 6:03 PM

ಗೌರಿಬಿದನೂರು : ಸಮುದಾಯದ ಮಕ್ಕಳು ಉನ್ನತ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬೆಳೆದು, ತಾವು ಓದಿದ ಶಾಲೆ, ಗುರುಗಳು, ಪೋಷಕರು ಹಾಗೂ ಸಮುದಾಯಕ್ಕೆ ಕೀರ್ತಿ ತರಬೇಕು ಎಂದು ಸಂಸದ ಪಿ.ಸಿ.ಮೋಹನ್(MP P C Mohan)ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಡಾ.ಹೆಚ್.ಎನ್. ಕಲಾಭವನದಲ್ಲಿ ಶ್ರೀ ಯೋಗಿನಾರೇಯಣ ತಾಲೂಕು ಬಲಿಜ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರ ಸನ್ಮಾನ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸುಮಾರು 124 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬಲಿಜ ಸಮುದಾಯದ ಗಣ್ಯರನ್ನು ಗುರುತಿಸಿ ಸನ್ಮಾನಿಸಲಾಗಿರುವುದು ಅತ್ಯಂತ ಶ್ಲಾಘನೀಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಆರ್ಥಿಕವಾಗಿ ಹಿಂದುಳಿ ದಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಆರ್ಥಿಕ ನೆರವು ನೀಡುವು ದಾಗಿ ಭರವಸೆ ನೀಡಿದರು.

ಇದನ್ನೂ ಓದಿ: Chikkaballapur News: ಜಿಲ್ಲಾಧಿಕಾರಿ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರ ದಿಡೀರ್ ಪ್ರತಿಭಟನೆ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹ

ಬಲಿಜ ಸಮುದಾಯದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮುದಾಯಕ್ಕೆ ಪ್ರವರ್ಗ-2ಎ ಮೀಸಲಾತಿ ಕಲ್ಪಿಸಿದ್ದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ ದೊರಕಿದೆ ಎಂದು ಹೇಳಿದರು.

ಅದೇ ರೀತಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸದ್ಗುರು ಕೈವಾರ ತಾತಯ್ಯ ನವರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಘೋಷಿಸಿ, ಮೊದಲ ಆಚರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಸುವ ಮೂಲಕ ಸಮುದಾಯಕ್ಕೆ ಗೌರವ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಸಮುದಾಯದ ಮುಖಂಡ ಕೆ.ಎಸ್. ಅನಂತ ರಾಜು, ಕಳೆದ ಇಪ್ಪತ್ತು ವರ್ಷಗಳಿಂದ ಕರ್ನಾಟಕ ರಾಜ್ಯ ಬಲಿಜ ಮಹಾಸಭಾ ಅಧ್ಯಕ್ಷರೂ ಆಗಿರುವ ಸಂಸದ ಪಿ.ಸಿ.ಮೋಹನ್ ಅವರು ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಆರ್ಥಿಕ ನೆರವು ನೀಡುವುದರ ಜೊತೆಗೆ ಸಮುದಾಯದ ಸಂಘಟನೆಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ ಎಂದು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಯೋಗಿನಾರೇಯಣ ತಾಲೂಕು ಬಲಿಜ ಸಂಘದ ಅಧ್ಯಕ್ಷ ಕಂಬಕ್ಕ ವೆಂಕಟೇಶ್, ವಿಜ್ಞಾನಿ ಮೊದಗಲ ನರಸಿಂಹಲು, ಡಾ. ನಟರಾಜ್ ಶೆಟ್ಟಿ, ಕೋಲಾ ಆನಂದ್, ಡಿ.ವಿ. ರಾಮಲಿಂಗಪ್ಪ, ನಗರಸಭೆಯ ಮಾಜಿ ಅಧ್ಯಕ್ಷೆ ರೂಪಾ ಅನಂತರಾಜು ಹಾಗೂ ಬಲಿಜ ಸಮುದಾ ಯದ ಮುಖಂಡರಾದ ಶ್ರೀನಿವಾಸ್, ವಕೀಲ ವೆಂಕಟೇಶ್, ರಾಂಬಾಬು, ನಾರಾಯಣಸ್ವಾಮಿ, ಕೋಟೆ ಭಾಸ್ಕರ್, ನಾಗರಾಜ್, ಅಶೋಕ್, ವೆಂಕಟಾದ್ರಿ, ಪ್ರದೀಪ್, ರಮೇಶ್ ಬಾಬು, ರಘು, ಜೈರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.