ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Kabaddi Player protest: ಜಿಲ್ಲಾಡಳಿತ ಭವನದ ಎದುರು ಬಾಲಕಿಯರ ಪ್ರತಿಭಟನೆ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಕಬಡ್ಡಿಯಲ್ಲಿ ವಿಜೇತರಾಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದ ಬಾಲಕಿಯರಿಗೆ ಸೆ.30ರಂದು ಶಿವಮೊಗ್ಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಮಾಹಿತಿ ನೀಡಲಾಗಿತ್ತು ಎನ್ನಲಾಗಿದೆ. ಆದರೆ ಸ್ಪರ್ಧೆ ಸೆ.29ರಂದೇ ನಡೆದಿರುವುದು ಬಳಿಕ ತಿಳಿದುಬಂದಿದ್ದು, ಬಾಲಕಿಯರಿಗೆ ವಿಭಾಗೀಯ ಮಟ್ಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸುವ ಅವಕಾಶವೇ ಕೈತಪ್ಪಿದೆ ಎಂದು ಪೋಷಕರು ಆರೋಪಿಸಿದರು.

ಚಿಕ್ಕಬಳ್ಳಾಪುರ: ಜಿಲ್ಲಾಮಟ್ಟದ ದಸರಾ(Dasara) ಕ್ರೀಡಾಕೂಟದಲ್ಲಿ ಗೆದ್ದು ವಿಭಾಗೀಯ ಮಟ್ಟಕ್ಕೆ ಆಯ್ಕೆ ಯಾಗಿದ್ದರೂ, ಸ್ಪರ್ಧೆಯ ದಿನಾಂಕದ ಕುರಿತು ತಪ್ಪು ಮಾಹಿತಿ ನೀಡಿದ್ದರಿಂದ ಅವಕಾಶ ಕಳೆದು ಕೊಂಡ ಕಬಡ್ಡಿ ಬಾಲಕಿಯರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕ್ರೀಡಾಪಟುಗಳಿಗೆ ಸರಿಯಾದ ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: Pro Kabaddi: ಟೈಟಾನ್ಸ್‌ಗೆ ಶರಣಾದ ಬುಲ್ಸ್​; 2ನೇ ಎಲಿಮಿನೇಟರ್‌ನಲ್ಲಿ ಪಾಟ್ನಾ ಸವಾಲು

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಕಬಡ್ಡಿಯಲ್ಲಿ ವಿಜೇತರಾಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದ ಬಾಲಕಿಯರಿಗೆ ಸೆ.30ರಂದು ಶಿವಮೊಗ್ಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಮಾಹಿತಿ ನೀಡಲಾಗಿತ್ತು ಎನ್ನಲಾಗಿದೆ. ಆದರೆ ಸ್ಪರ್ಧೆ ಸೆ.29ರಂದೇ ನಡೆದಿರುವುದು ಬಳಿಕ ತಿಳಿದುಬಂದಿದ್ದು, ಬಾಲಕಿಯರಿಗೆ ವಿಭಾಗೀಯ ಮಟ್ಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸುವ ಅವಕಾಶವೇ ಕೈತಪ್ಪಿದೆ ಎಂದು ಪೋಷಕರು ಆರೋಪಿಸಿದರು.

Kabaddi

ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ಕ್ರೀಡಾಪಟುಗಳು, ಜಿಲ್ಲಾಮಟ್ಟದಲ್ಲಿ ಗೆದ್ದು ಮುಂದಿನ ಹಂತಕ್ಕೆ ಅರ್ಹತೆ ಪಡೆದಿದ್ದರೂ ಇಲಾಖೆಯ ನಿರ್ಲಕ್ಷ್ಯದಿಂದ ಸ್ಪರ್ಧೆಗೆ ತೆರಳಲು ಸಾಧ್ಯವಾಗಲಿಲ್ಲ. ತಪ್ಪು ದಿನಾಂಕದ ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕ್ರೀಡಾಪಟುಗಳ ತಪ್ಪಲ್ಲದ ಕಾರಣಕ್ಕೆ ಅವರ ಭವಿಷ್ಯದ ಅವಕಾಶಗಳನ್ನು ಕಸಿದುಕೊಳ್ಳಬಾರದು ಎಂದು ಒತ್ತಾಯಿಸಿದರು.

ಮುಂಚಿತವಾಗಿ ಸರಿಯಾದ ಮಾಹಿತಿ ನೀಡಿದ್ದರೆ ಪ್ರಯಾಣ ಹಾಗೂ ಸ್ಪರ್ಧೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬಹುದಿತ್ತು. ಆದರೆ ಸ್ಪರ್ಧೆಯ ದಿನಾಂಕವೇ ತಪ್ಪಾಗಿ ತಿಳಿಸಿರುವುದು ಇಲಾಖೆಯ ಕಾರ್ಯವೈಖರಿ ಕುರಿತು ಪ್ರಶ್ನೆ ಮೂಡಿಸಿದೆ ಎಂದು ಪೋಷಕರು ಹೇಳಿದರು. ಈ ಕುರಿತು ಮೇಲಾಧಿ ಕಾರಿಗಳು ಸಮಗ್ರ ತನಿಖೆ ನಡೆಸಿ, ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನೊಂದ ಕಬಡ್ಡಿ ಕ್ರೀಡಾಪಟುಗಳಾದ ನವಿತ, ಶಾಲಿನಿ, ವರ್ಷಿತಾ, ಲಕ್ಷ್ಮಿ, ಇಂದೂ, ತನುಶ್ರೀ, ಯಕ್ಷಿತ, ನಿಹಾರಿಕಾ, ನಾದಶ್ರೀ, ಹರ್ಷಿತ, ಪ್ರಣತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.