Chikkaballapur News: ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ: ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್00
ಕಳೆದ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಕೂಡ ಹಲವಡೆ ಕಡೆ ಚೆನ್ನಾಗಿ ಮಳೆ ಆಗಿದ್ದರೂ ಚಿಂತಾಮಣಿ ಮತ್ತು ಶಿಡ್ಲಘಟ್ಟ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿತ್ತು. ಇದೇ ಕಾರಣವಾಗಿ ಈ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ವ್ಯತ್ಯಯ ಆಗಲಿದೆ ಎಂದರು

ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ: ಬೇಸಿಗೆ ಪ್ರಾರಂಭವಾಗಿರುವುದರಿಂದ ಚಿಂತಾಮಣಿ ಸೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಲಿದೆ. ತಾಲೂಕು ಆಡಳಿತ ಈ ಕೂಡಲೇ ಮುನ್ನೆ ಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಿ ಎಂದು ಉನ್ನತ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಚಿಂತಾಮಣಿ ತಾಲ್ಲೂಕಿ ನಲ್ಲಿ ಶನಿವಾರ ಪ್ರವಾಸ ಕೈಗೊಂಡಿದ್ದ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.
ಇದನ್ನೂ ಓದಿ: Chikkaballapur News: ವರದಹಳ್ಳಿಯಲ್ಲಿ ಸಾವನ್ನಪಿದ ಕೋಳಿಗಳಲ್ಲಿ ಹಕ್ಕಿಜ್ವರದ ಸೋಂಕು ಪತ್ತೆಯಾಗಿ ದೃಢ
ಕಳೆದ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ.ಜಿಲ್ಲೆಯಲ್ಲಿ ಕೂಡ ಹಲವಡೆ ಕಡೆ ಚೆನ್ನಾಗಿ ಮಳೆ ಆಗಿದ್ದರೂ ಚಿಂತಾಮಣಿ ಮತ್ತು ಶಿಡ್ಲಘಟ್ಟ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿತ್ತು.ಇದೇ ಕಾರಣವಾಗಿ ಈ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ವ್ಯತ್ಯಯ ಆಗಲಿದೆ ಎಂದರು.
ನೀರಿನ ಸಮಸ್ಯೆ ತಲೆದೋರುವ ಗ್ರಾಮಗಳನ್ನು ವಾರ್ಡ್ಗಳನ್ನು ತುರ್ತಾಗಿ ಗುರ್ತಿಸಬೇಕು. ನೀರಿಗೆ ತೀವ್ರತರವಾದ ಸಮಸ್ಯೆಯಿರುವ ಭಾಗದಲ್ಲಿ ಕೊಳವೆ ಬಾವಿಗಳನ್ನು ಕೊರೆದು ನೀರು ಪೂರೈಸಲು ಅಧಿಕಾರಿಗಳು ತುರ್ತು ಕ್ರಮ ವಹಿಸಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಅನುದಾನದ ಕೊರತೆ ಹಾಗೂ ಅನುಮತಿಯ ಸಮಸ್ಯೆಗಳಿದ್ದಲ್ಲಿ ನನಗೆ ತಿಳಿಸಬೇಕು. ಇಲ್ಲವಾದಲ್ಲಿ ಕೊಳವೆ ಬಾವಿಗಳನ್ನು ಕೊರೆಯಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸುದರ್ಶನ್, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಆನಂದ್, ಸ್ಥಳೀಯ ಜನ ಪ್ರತಿನಿಧಿಗಳು, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.