ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Khadi clothing: ಸರಕಾರಿ ನೌಕರರು ತಿಂಗಳಲ್ಲಿ ಒಂದು ದಿನ ಖಾದಿ ಧರಿಸುವುದು ಕಡ್ಡಾಯ : ಜಿಲ್ಲಾಧಿಕಾರಿ ಜಿ.ಪ್ರಭು

ಕರ್ನಾಟಕ ಸರ್ಕಾರವು ತನ್ನ ನೌಕರರಿಗೆ ತಿಂಗಳಲ್ಲಿ ಒಂದು ದಿನ ಖಾದಿ ಉಡುಪು ಧರಿಸುವು ದನ್ನು ಕಡ್ಡಾಯಗೊಳಿಸಿದೆ. ಪ್ರತಿ ತಿಂಗಳ ಮೊದಲ ಶನಿವಾರ ಮತ್ತು ರಾಷ್ಟ್ರೀಯ ಹಬ್ಬ ಗಳಂದು ಖಾದಿ ಬಟ್ಟೆಗಳನ್ನು ಧರಿಸಬೇಕು. ಇದು ಸ್ವದೇಶಿ ಉತ್ಪನ್ನಗಳ ಬಗ್ಗೆ ಗೌರವ, ರಾಷ್ಟ್ರೀಯ ಭಾವನೆ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಉತ್ತೇಜಿಸುವ ಗುರಿ ಹೊಂದಿದೆ.

ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರವು ತನ್ನ ನೌಕರರಿಗೆ ತಿಂಗಳಲ್ಲಿ ಒಂದು ದಿನ ಖಾದಿ ಉಡುಪು(Khadi clothing) ಧರಿಸುವುದನ್ನು ಕಡ್ಡಾಯಗೊಳಿಸಿದ್ದು ಪ್ರತಿ ತಿಂಗಳ ಮೊದಲ ಶನಿವಾರ ಮತ್ತು ರಾಷ್ಟ್ರೀಯ ಹಬ್ಬಗಳಂದು ಖಾದಿ ಬಟ್ಟೆಗಳನ್ನು ಧರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರ ಹೊರವಲಯ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ತಾತ್ಕಾಲಿಕ ಖಾದಿ ಪ್ರದರ್ಶನದ ಮಳಿಗೆಯನ್ನು ಜಿಲ್ಲಾಧಿಕಾರಿ ಜಿ.ಪ್ರಭು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದಂತೆ ಖಾದಿ ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ  ಖಾದಿ ಬಟ್ಟೆಗಳನ್ನು ಧರಿಸಲು ಪ್ರೇರಣೆ ನೀಡುವ ನಿಟ್ಟಿನಲ್ಲಿ  ಜಿಲ್ಲಾಡಳಿತ ಭವನದಲ್ಲಿ ತಾತ್ಕಾಲಿಕ ಖಾದಿ ಮಳಿಗೆಯನ್ನು ಉದ್ಘಾಟಿಸಲಾಗಿದೆ ಎಂದರು.

ಇದನ್ನೂ ಓದಿ: Chikkaballapur News: 10 ಸಾವಿರ ಮಂದಿಗೆ ಉಚಿತ ಸೂರು ಕಲ್ಪಿಸುವ ಸಂಕಲ್ಪಕ್ಕೆ ಚಾಲನೆ ನೀಡಿದ ಸಮಾಜ ಸೇವಕ ಸಿ.ಎಂ. ಬೈರೇಗೌಡ

ಕರ್ನಾಟಕ ಸರ್ಕಾರವು ತನ್ನ ನೌಕರರಿಗೆ ತಿಂಗಳಲ್ಲಿ ಒಂದು ದಿನ ಖಾದಿ ಉಡುಪು ಧರಿಸುವು ದನ್ನು ಕಡ್ಡಾಯಗೊಳಿಸಿದೆ. ಪ್ರತಿ ತಿಂಗಳ ಮೊದಲ ಶನಿವಾರ ಮತ್ತು ರಾಷ್ಟ್ರೀಯ ಹಬ್ಬ ಗಳಂದು ಖಾದಿ ಬಟ್ಟೆಗಳನ್ನು ಧರಿಸಬೇಕು. ಇದು ಸ್ವದೇಶಿ ಉತ್ಪನ್ನಗಳ ಬಗ್ಗೆ ಗೌರವ, ರಾಷ್ಟ್ರೀಯ ಭಾವನೆ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಉತ್ತೇಜಿಸುವ ಗುರಿ ಹೊಂದಿದೆ.

ಖಾದಿ ನೇಕಾರರಿಗೆ ಇದು ಜೀವನೋಪಾಯ ಒದಗಿಸುತ್ತದೆ ಈ ಹಿನ್ನೆಲೆಯಲ್ಲಿ ಮಾರ್ಚ್ ಮೊದಲನೇ ಶನಿವಾರ ಚಿಕ್ಕಬಳ್ಳಾಪುರ ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತದಿಂದ ಖಾದಿ ಉತ್ಸವ ಆಚರಣೆ ಮಾಡಲಾಗುತ್ತಿದ್ದು, ಅಂದು ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ಖಾದಿ ಉಡುಗೆಗಳನ್ನು  ಧರಿಸಿ ಉತ್ಸವದಲ್ಲಿ ಭಾಗವಹಿಸಲು  ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ  ನಿರ್ವಹಣಾಧಿಕಾರಿ ಡಾ ವೈ ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಡಾ. ಭಾಸ್ಕರ್, ಚಿಂತಾಮಣಿಯ TNR ಸಿಲ್ಕ್ ಇಂಡಸ್ಟ್ರೀಸ್ ನ ಕಾರ್ಯದರ್ಶಿ ಶ್ರೀನಿವಾಸ್, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ಕೆ ನರೇಶ್, ಜಿಲ್ಲಾ ವಾರ್ತಾಧಿಕಾರಿ ಎಂ ಜುಂಜಣ್ಣ, ವಾರ್ತಾ ಸಹಾಯಕ ಮಂಜುನಾಥ್ ಇದ್ದರು.