ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chalavadi Narayanaswamy: ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ; ದೇವೇಗೌಡರ ಬಗ್ಗೆ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಚಿಕ್ಕಬಳ್ಳಾಪುರ ಜಿಲ್ಲೆಯ ಮಾವು ಬೆಳೆಗಾರರು ಬೆಳೆ ನಷ್ಟ, ಬೆಲೆ ಕುಸಿತ ಹಾಗೂ ಮಾರುಕಟ್ಟೆ ಸಮಸ್ಯೆ ಗಳಿಂದ ಸಂಕಷ್ಟದಲ್ಲಿದ್ದಾರೆ. ರೈತರು ತಮ್ಮ ಉತ್ಪನ್ನಕ್ಕೆ ನ್ಯಾಯಯುತ ಬೆಲೆ ಸಿಗದೆ ಆತಂಕದಲ್ಲಿದ್ದರೂ ಸರ್ಕಾರ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಬದಲು ಕಾಂಗ್ರೆಸ್ ಸರ್ಕಾರ ರಾಜಕೀಯ ಪ್ರಚಾರದಲ್ಲೇ ತೊಡಗಿಕೊಂಡಿದೆ.

ಶಿಡ್ಲಘಟ್ಟ : ರಾಜ್ಯದಲ್ಲಿ ರೈತರು, ವಿಶೇಷವಾಗಿ ಮಾವು ಬೆಳೆಗಾರರು ತೀವ್ರ ಸಂಕಷ್ಟ ಅನುಭವಿಸು ತ್ತಿದ್ದರೂ ಕಾಂಗ್ರೆಸ್ ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy) ಆರೋಪಿಸಿದರು.

ಶಿಡ್ಲಘಟ್ಟ ನಗರದ ಬಿಜೆಪಿ ಕಚೇರಿ ಸೇವಾ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಮಾವು ಬೆಳೆಗಾರರು ಬೆಳೆ ನಷ್ಟ, ಬೆಲೆ ಕುಸಿತ ಹಾಗೂ ಮಾರುಕಟ್ಟೆ ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ರೈತರು ತಮ್ಮ ಉತ್ಪನ್ನಕ್ಕೆ ನ್ಯಾಯಯುತ ಬೆಲೆ ಸಿಗದೆ ಆತಂಕ ದಲ್ಲಿದ್ದರೂ ಸರ್ಕಾರ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಬದಲು ಕಾಂಗ್ರೆಸ್ ಸರ್ಕಾರ ರಾಜಕೀಯ ಪ್ರಚಾರದಲ್ಲೇ ತೊಡಗಿಕೊಂಡಿದೆ" ಎಂದು ಟೀಕಿಸಿದರು.

ಇದನ್ನೂ ಓದಿ: Shidlaghatta News: ದೇಶದ ಅಭಿವೃದ್ಧಿಗೆ ಮೋದಿ ಕೊಡುಗೆ ಸ್ಮರಣೀಯ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅಭಿಮತ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು(Former Prime Minister H D Devegowda) ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿರುವ ಹಿರಿಯ ರಾಜಕಾರಣಿ. ಅವರಿಗೆ ರಾಜಕಾರಣದ ಬಗ್ಗೆ ಯಾರೂ ಪಾಠ ಹೇಳಬೇಕಾದ ಅಗತ್ಯವಿಲ್ಲ. ಅವರು ಯಾವುದೇ ಅವಕಾಶಕ್ಕಾಗಿ ಅಥವಾ ಹುದ್ದೆ ಗಾಗಿ ಯಾರ ಬಳಿಯೂ ಕೇಳಿಕೊಂಡಿಲ್ಲ. ಅವರ ಅನುಭವ ಮತ್ತು ವ್ಯಕ್ತಿತ್ವದ ಬಗ್ಗೆ ರಾಜ್ಯದ ಜನರಿಗೆ ಚೆನ್ನಾಗಿ ಗೊತ್ತಿದೆ" ಎಂದರು.

"ಇಂದು ದೇವೇಗೌಡರಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ನಾಯಕರು ಅನುಕಂಪದ ಮಾತು ಗಳನ್ನು ಆಡುತ್ತಿದ್ದಾರೆ. ಆದರೆ ಹಿಂದಿನಿಂದ ರಾಜಕೀಯ ಕುತಂತ್ರ ನಡೆಸಿ, ಮುಂದೆ ಬಂದು ಸಹಾನು ಭೂತಿ ತೋರಿಸುವುದು ಕಾಂಗ್ರೆಸ್‌ನ ದ್ವಂದ್ವ ರಾಜಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ(Former Chief Minister H D Kumaraswamy) ಅವರ ಸರ್ಕಾರದ ಅವಧಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳನ್ನು ಜನರು ಮರೆತಿಲ್ಲ. ಆಗ ಒಂದು ರೀತಿಯಲ್ಲಿ ನಡೆದು ಕೊಂಡವರು ಇಂದು ಮತ್ತೊಂದು ರೀತಿಯಲ್ಲಿ ಮಾತನಾಡುತ್ತಿರುವುದು ಕೇವಲ ರಾಜಕೀಯ ನಾಟಕ" ಎಂದು ಆರೋಪಿಸಿದರು.

ಈ ವೇಳೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡರ ಕಾರ್ಯವೈಖರಿ ಮೆಚ್ಚಿದ ಛಲವಾದಿ ನಾರಾಯಣಸ್ವಾಮಿ, "ರಾಮಚಂದ್ರ ಗೌಡರು ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಜೊತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ರೈತರು, ಯುವಕರು ಹಾಗೂ ಎಲ್ಲ ವರ್ಗದ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು, ಕ್ಷೇತ್ರದಲ್ಲಿ ಬಿಜೆಪಿಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ವನ್ನು ಇನ್ನಷ್ಟು ಗಳಿಸಿ ಪಕ್ಷದ ಬೆಳವಣಿಗೆಗೆ ಶ್ರಮಿಸಲಿದ್ದಾರೆ ಎಂಬ ನಂಬಿಕೆ ಇದೆ" ಎಂದು ಹೇಳಿದರು.

"ದೇವೇಗೌಡರಂತಹ ಹಿರಿಯ ನಾಯಕರ ಬಗ್ಗೆ ಗೌರವ ಇದ್ದರೆ ಅದನ್ನು ಮಾತಿನಲ್ಲಲ್ಲ, ಕೃತಿಯಲ್ಲಿ ತೋರಿಸಬೇಕು. ಕಾಂಗ್ರೆಸ್ ನಾಯಕರು ಜನರ ಗಮನವನ್ನು ಬೇರೆಡೆ ಸೆಳೆಯಲು ಇಂತಹ ವಿಚಾರ ಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ ಜನರು ಸತ್ಯ ಏನೆಂಬುದನ್ನು ಅರ್ಥಮಾಡಿಕೊಂಡಿದ್ದಾರೆ" ಎಂದು ಹೇಳಿದರು.

ಈ ಸಂದರ್ಭದಲ್ಲಿ ಸೀಕಲ್ ಆನಂದಗೌಡ, ಸುರೇಂದ್ರಗೌಡ, ಮುರಳಿ, ಆಂಜನೇಯ ರೆಡ್ಡಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

image

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳಿಂದ ರೈತರು, ಯುವಕರು ಹಾಗೂ ಸಾಮಾನ್ಯ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಿಡ್ಲಘಟ್ಟ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕೆಲಸವನ್ನು ಪಕ್ಷ ನಿರಂತರವಾಗಿ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಜನರ ಆಶೀರ್ವಾದದೊಂದಿಗೆ ಬಿಜೆಪಿ ಇನ್ನಷ್ಟು ಬಲಿಷ್ಠವಾಗಲಿದೆ" ಎಂದು ಹೇಳಿದರು.

- ಸೀಕಲ್ ರಾಮಚಂದ್ರಗೌಡ ಬಿಜೆಪಿ ಜಿಲ್ಲಾಧ್ಯಕ್ಷ