ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

N.H. Shivashankara Reddy: ಗ್ರಾಮೀಣ ಭಾಗದ ಸಾವಿರಾರು ಮಕ್ಕಳ ಬದುಕಿಗೆ ಸರ್ಕಾರಿ ಶಾಲೆಗಳು ಭದ್ರ ಬುನಾದಿ

ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಅನೇಕ ಗಣ್ಯರು ಸರ್ಕಾರಿ ಶಾಲೆಗಳಲ್ಲಿಯೇ ವಿದ್ಯಾ ಭ್ಯಾಸ ಮಾಡಿದ್ದಾರೆ. ಗ್ರಾಮೀಣ ಭಾಗದ ಸಾವಿರಾರು ಮಕ್ಕಳ ಬದುಕಿಗೆ ಸರ್ಕಾರಿ ಶಾಲೆಗಳು ಭದ್ರ ಬುನಾದಿ ಹಾಕಿವೆ. ದಾನಿಗಳು ನೀಡುತ್ತಿರುವ ನೆರವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಗೌರಿಬಿದನೂರು: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ಉದ್ದೇಶದಿಂದ ಹೊಂಗಿರಣ ಜನಸೇವಾ ಟ್ರಸ್ಟ್ ಹಾಗೂ ಲಯನ್ಸ್ ಸಂಸ್ಥೆ ನೀಡುತ್ತಿರುವ ನೋಟ್ ಪುಸ್ತಕ, ಶಾಲಾ ಬ್ಯಾಗ್ ಹಾಗೂ ಕಲಿಕಾ ಪರಿಕರಗಳು ಮಕ್ಕಳ ಭವಿಷ್ಯ ರೂಪಿಸಲು ನೆರವಾಗಲಿವೆ ಎಂದು ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ(N.H. Shivashankara Reddy) ಹೇಳಿದರು.

ತಾಲ್ಲೂಕಿನ ಎಚ್.ನಾಗಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹೊಂಗಿರಣ ಜನಸೇವಾ ಟ್ರಸ್ಟ್ ಮತ್ತು ಲಯನ್ಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಉಚಿತ ನೋಟ್ ಪುಸ್ತಕ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಅನೇಕ ಗಣ್ಯರು ಸರ್ಕಾರಿ ಶಾಲೆಗಳಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದಾರೆ. ಗ್ರಾಮೀಣ ಭಾಗದ ಸಾವಿರಾರು ಮಕ್ಕಳ ಬದುಕಿಗೆ ಸರ್ಕಾರಿ ಶಾಲೆಗಳು ಭದ್ರ ಬುನಾದಿ ಹಾಕಿವೆ. ದಾನಿಗಳು ನೀಡುತ್ತಿರುವ ನೆರವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: N H Shivashankar Reddy : ಡಾ.ಹೆಚ್.ಎನ್ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಜಿ ಶಾಸಕ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ನೇಮಕ

ಹೊಂಗಿರಣ ಜನಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ವಿ. ಲಕ್ಷ್ಮಿಸಾಗರ್ ಮಾತನಾಡಿ, ತಾವು ಕೂಡ ಸರ್ಕಾರಿ ಶಾಲೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದಿದ್ದು, ಪೋಷಕರ ತ್ಯಾಗದಿಂದ ಸಮಾಜದಲ್ಲಿ ನೆಲೆ ಕಂಡುಕೊಳ್ಳಲು ಸಾಧ್ಯವಾಗಿದೆ. ಇದೇ ಕಾರಣದಿಂದ ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಟ್ರಸ್ಟ್ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಿ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳಲಿದೆ ಎಂದು ತಿಳಿಸಿದರು.

ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎ.ಎಸ್. ಜಗನ್ನಾಥ್ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಮತ್ತು ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಶಿಕ್ಷಕರು ಅವರ ಸಹಕಾರದೊಂದಿಗೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರಿ ಶಾಲೆಗಳ ಬಲವರ್ಧನೆಯಿಂದಲೇ ಪ್ರಜಾಪ್ರಭುತ್ವದ ಮೌಲ್ಯಗಳು ಇನ್ನಷ್ಟು ಗಟ್ಟಿಯಾಗಲಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಡಾ.ಕೆ.ಪಿ.ನಾರಾಯಣಪ್ಪ, ನಿವೃತ್ತ ಬೆಸ್ಕಾಂ ಅಧಿಕಾರಿ ಜೀಲಾಕುಂಟೆ ಗಂಗಾಧರಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಎನ್.ನಾಗರಾಜ್, ಲಯನ್ಸ್ ಸಂಸ್ಥೆಯ ಸದಸ್ಯ ಜಿ.ಎನ್.ಸೂರಜ್, ಸಿಆರ್‌ಪಿ ಕೆ.ಪುಷ್ಪಲತಾ, ಮುಖ್ಯ ಶಿಕ್ಷಕ ಟಿ.ಜಯರಾಮಯ್ಯ, ಶಿಕ್ಷಕರಾದ ಟಿ. ಲಕ್ಷ್ಮಿದೇವಮ್ಮ, ಎ.ಪುಷ್ಪಲತಾ, ಕೆ.ವಿ.ಹೇಮಲತಾ, ಹಿರಿಯ ವಿದ್ಯಾರ್ಥಿಗಳಾದ ದರ್ಶನ, ಶಿಲ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.