ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

B S Suresh: ಕನ್ನಡ ಬಾವುಟಕ್ಕೆ ನಾಡಧ್ವಜದ ಅಧಿಕೃತ ಮಾನ್ಯತೆ ಸರ್ಕಾರದ ನಿಲುವು ಸ್ಪಷ್ಟ : ಕನ್ನಡ ರಾಜ್ಯೋತ್ಸವದಲ್ಲಿ ಸಚಿವ ಬಿ.ಎಸ್.ಸುರೇಶ ಘೋಷಣೆ

ಕನ್ನಡ ಭಾಷೆಯು ಮಾತೃಭಾಷೆಯಷ್ಟೇ ಅಲ್ಲದೆ ನಮ್ಮ ನಡೆ-ನುಡಿ, ಆಚಾರ-ವಿಚಾರ, ಸಂಸ್ಕೃತಿ, ಅಭಿಮಾನ ಹಾಗೂ ಅಸ್ಮಿತೆಯ ಪ್ರತೀಕವಾಗಿದೆ. ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ಹೆಮ್ಮೆಯ ಸಂಗತಿ. ದಾಸರು, ದಾರ್ಶನಿಕರು, ವಚನಕಾರರು, ಸಾಹಿತಿಗಳು ಹಾಗೂ ವಿದ್ವಾಂಸರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಕನ್ನಡಿಗರ ಹೃದಯದಲ್ಲಿ ಈಗಾಗಲೇ ಪ್ರತಿಷ್ಠಾಪನೆಗೊಂಡಿರುವ ಕನ್ನಡ ಬಾವುಟಕ್ಕೆ ನಾಡಧ್ವಜದ ಸ್ಥಾನಮಾನ ನೀಡಿ ಅಧಿಕೃತ ಮಾನ್ಯತೆ ಕೊಡಿಸುವಲ್ಲಿ ರಾಜ್ಯ ಸರ್ಕಾರದ ನಿಲುವು ಸ್ಪಷ್ಟವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಾರಿಗೆ ಸಚಿವ ಬಿ.ಎಸ್.ಸುರೇಶ(B S Suresh) ತಿಳಿಸಿದರು.

ನಗರದ ಸರ್.ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ(71st Kannada rajyotsava) ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕನ್ನಡ ಭಾಷೆಯು ಮಾತೃಭಾಷೆಯಷ್ಟೇ ಅಲ್ಲದೆ ನಮ್ಮ ನಡೆ-ನುಡಿ, ಆಚಾರ-ವಿಚಾರ, ಸಂಸ್ಕೃತಿ, ಅಭಿಮಾನ ಹಾಗೂ ಅಸ್ಮಿತೆಯ ಪ್ರತೀಕವಾಗಿದೆ. ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ಹೆಮ್ಮೆಯ ಸಂಗತಿ. ದಾಸರು, ದಾರ್ಶನಿಕರು, ವಚನಕಾರರು, ಸಾಹಿತಿಗಳು ಹಾಗೂ ವಿದ್ವಾಂಸರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕನ್ನಡವನ್ನು ಮಾತೃಭಾಷೆಯಾಗಿ ಹೊಂದಿರುವುದು ನಮ್ಮೆಲ್ಲರ ಸೌಭಾಗ್ಯ ಎಂದರು.

ಇದನ್ನೂ ಓದಿ: Chinthamani News: ಶಿಕ್ಷಣ, ಆರ್ಥಿಕತೆ, ರಾಜಕೀಯ ಕ್ಷೇತ್ರಗಳಲ್ಲಿ ಸಮುದಾಯಕ್ಕೆ ನ್ಯಾಯಯುತ ಸ್ಥಾನಮಾನ ಕಲ್ಪಿಸುವ ಗುರಿ: ವಕೀಲ ಮುನೇಗೌಡ

ರಾಜ್ಯದ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದ ಅವರು, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 3,318.37 ಕೋಟಿ ವೆಚ್ಚ ಮಾಡಲಾಗಿದೆ. ಕಂದಾಯ ಗ್ರಾಮ ವಿಶೇಷ ಅಭಿಯಾನದಡಿ ನಿವೇಶನರಹಿತರಿಗೆ 24,112 ನಿವೇಶನ ಹಂಚಿಕೆ ಪ್ರಗತಿಯಲ್ಲಿದೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಎತ್ತಿನಹೊಳೆ ಯೋಜನೆಯಡಿ 5093 ಟಿಎಂಸಿ ನೀರಿನ ಹಂಚಿಕೆಗೆ ಸಂಬಂಧಿಸಿದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಬರ ನಿರ್ವಹಣೆಯಡಿ 1.53 ಲಕ್ಷ ರೈತರನ್ನು ಬೆಳೆ ವಿಮೆ ಯೋಜನೆಗೆ ನೋಂದಾಯಿಸಲಾಗಿದ್ದು, ಬಿತ್ತನೆ ವೈಫಲ್ಯ ಎದುರಿಸಿದ 1.3 ಲಕ್ಷ ರೈತರಿಗೆ 140.44 ಕೋಟಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಲಿನ ದರ ಪ್ರತಿ ಲೀಟರ್‌ಗೆ 8 ಹೆಚ್ಚಿಸಲಾಗಿದ್ದು, ಇದರಲ್ಲಿ ೭ ನೇರವಾಗಿ ರೈತರಿಗೆ ತಲುಪುತ್ತಿದೆ ಎಂದರು.

ಶಿಡ್ಲಘಟ್ಟದಲ್ಲಿ 200 ಕೋಟಿ ವೆಚ್ಚದ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ, ಚಿಕ್ಕಬಳ್ಳಾಪುರದಲ್ಲಿ 14,150 ಕೋಟಿ ವೆಚ್ಚದ ಅಂತರರಾಷ್ಟ್ರೀಯ ಹೈಟೆಕ್ ಹೂವಿನ ಮಾರುಕಟ್ಟೆ ಹಾಗೂ ನಂದಿಬೆಟ್ಟ ದಲ್ಲಿ 94 ಕೋಟಿ ವೆಚ್ಚದ ರೋಪ್ ವೇ ಯೋಜನೆಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ವಿವರಿಸಿದರು.

1cbpm3ea ಒಕ

ಸಾರಿಗೆ ಇಲಾಖೆಯ ಶಕ್ತಿ ಯೋಜನೆ(Shakti Scheme)ಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ 10,07,756 ಉಚಿತ ಬಸ್ ಪಾಸ್ ವಿತರಿಸಲಾಗಿದೆ. ಸಾರಿಗೆ ವ್ಯವಸ್ಥೆ ಆಧುನೀಕರಣಕ್ಕಾಗಿ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ(Kannada Rajyotsava awardee) ಸಮಾಜ ಸೇವಕ ಕೃಷ್ಣಗೌಡ ಹಾಗೂ ಇಂಜಿನಿಯರಿಂಗ್ ಕ್ಷೇತ್ರದ ಡಾ.ಕೆ.ಎನ್. ವೆಂಕಟಕೃಷ್ಣರಾವ್ ಅವರನ್ನು ಅಭಿನಂದಿಸಲಾಯಿತು. ಇದೇ ಮೊದಲ ಬಾರಿಗೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 71 ಸಾಧಕರನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಹಾಗೂ ಸಾಮೂಹಿಕ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ಕಾರ್ಯಕ್ರಮದ ಬಳಿಕ ಸಚಿವರು ಗ್ರಾಮೀಣ ಜನರ ಸಮಸ್ಯೆ, ಕೃಷಿ ಪದ್ಧತಿ ಮತ್ತು ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ನೇರವಾಗಿ ಅರಿಯುವ ಉದ್ದೇಶದ ಗ್ರಾಮಾನುಭವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದಲ್ಲಿ ಚಾಲನೆ ನೀಡಿದರು.

ನಂತರ ಜಿಲ್ಲಾ ಕ್ರೀಡಾಂಗಣದ ಒಳಾಂಗಣದಲ್ಲಿ 40 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಸಿಂಥೆಟಿಕ್ ಬ್ಯಾಡ್ಮಿಂಟನ್ ಅಂಕಣವನ್ನು ಉದ್ಘಾಟಿಸಿ, ಜಿಲ್ಲಾಧಿಕಾರಿ ಜಿ.ಪ್ರಭು, ಜಿಪಂ ಸಿಇಒ ಡಾ.ನವೀನ್ ಭಟ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರೊಂದಿಗೆ ಬ್ಯಾಡ್ಮಿಂಟನ್ ಕೆಲ ಕಾಲ ಆಟ ಆಡುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡಿದರು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.