Nikhil Kumaraswamy: ಜನಾಕ್ರೋಶಕ್ಕೆ ಹೆದರಿ ಜಿ.ಪಂ ತಾ.ಪಂ ಚುನಾವಣೆ ಮುಂದೂಡಿಕೆ: ನಿಖಿಲ್ ಕುಮಾರಸ್ವಾಮಿ
ಕಳೆದ ಎರಡು ವರ್ಷಗಳಿಂದ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಇದರಿಂದಾಗಿ ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡಲು ಆಗುತ್ತಿಲ್ಲ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರೇ ಬಹಿರಂಗ ವಾಗಿ ಹೇಳುತ್ತಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎರಡು ವರ್ಷದ ಅಧಿಕಾರದ ಅವಧಿಯಲ್ಲಿ ಸಾಲು, ಸಾಲು ಹಗರಣಗಳು ನಡೆದಿವೆ, ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದ್ದಾರೆ.


ಗೌರಿಬಿದನೂರು: ರಾಜ್ಯದಲ್ಲಿ ಉಂಟಾಗಿರುವ ಜನಾಕ್ರೋಶ ಎದುರಿಸಲಾಗದೆ ಕಾಂಗ್ರೆಸ್ ಸರ್ಕಾರ ಜಿ,ಪಂ ಹಾಗೂ ತಾ.ಪಂ ಚುನಾವಣೆಗಳನ್ನು ಮುಂದೂಡುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.
ಅವರು ನಗರದ ನದಿದಡದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಕಲ್ಯಾಣಮಂಟಪದಲ್ಲಿ, ಏರ್ಪಡಿಸಲಾಗಿದ್ದ, ಜೆಡಿಎಸ್ ಪಕ್ಷದ ಡಿಜಿಟಲ್ ಸದಸ್ಯತ್ವದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: Chikkaballapur (Chinthamani) News: ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ
ಕಳೆದ ಎರಡು ವರ್ಷಗಳಿಂದ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಇದರಿಂದಾಗಿ ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡಲು ಆಗುತ್ತಿಲ್ಲ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರೇ ಬಹಿರಂಗ ವಾಗಿ ಹೇಳುತ್ತಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎರಡು ವರ್ಷದ ಅಧಿಕಾರದ ಅವಧಿ ಯಲ್ಲಿ ಸಾಲು, ಸಾಲು ಹಗರಣಗಳು ನಡೆದಿವೆ, ಜನರ ತೆರಿಗೆ ಹಣವನ್ನು ಲೂಟಿ ಮಾಡು ತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ತಳಸಮುದಾಯದವರ ಕಲ್ಯಾಣಕ್ಕಾಗಿ ಮೀಸಲಿಟ್ಟ ನೂರಾರು ಕೋಟಿ ರೂಪಾಯಿಗಳನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಆಕ್ರೋಶ ವನ್ನು ವ್ಯಕ್ತಪಡಿಸಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ನೇತೃತ್ವದ ಎನ್ಡಿಎ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಮತ್ತೊಮ್ಮೆ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದ ಅವರು ಇದಕ್ಕಾಗಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರತಿ ಮಟಗಟ್ಟೆಯಲ್ಲೂ ಪಕ್ಷದ ಸದಸ್ಯತ್ವದ ಅಭಿಯಾನವನ್ನು ಯಶಸ್ವಿಗೊಳಿಸ ಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜೆಡಿಎಸ್ ಪಕ್ಷದ ಮುಖಂಡ ಸಿಆರ್ ನರಸಿಂಹಮೂರ್ತಿ ಮಾತನಾಡಿ, ರಾಜ್ಯದಲ್ಲಿ ಇಂದು ರೈತರ ಸಂಕಷ್ಟವನ್ನು ಕೇಳುವವರೆ ಇಲ್ಲದ ಪರಿಸ್ಥಿತಿ ಎದುರಾಗಿದೆ. ಎಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಸಂಧರ್ಭದಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದರು,ರಾಜ್ಯದಲ್ಲಿ ಸರಾಯಿ ಮತ್ತು ಲಾಟರಿಯನ್ನು ನಿಷೇಧಿಸಿದರು. ಇತ್ತೀಚಿಗೆ ರಾಜ್ಯದಲ್ಲಿ ಮಾವಿನ ಬೆಲೆ ತೀವ್ರವಾಗಿ ಕುಸಿದ ಪರಿಣಾಮ ಬೀದಿಗೆ ಬಿದ್ದಿದ್ದ ರೈತರ ಪರವಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡ ಪರಿಣಾಮ ಕೇಂದ್ರ ಸರ್ಕಾರ ರೈತರು ಬೆಳೆದ ಮಾವಿನ ಬೆಳೆಗೆ ಬೆಂಬಲ ಬೆಲೆಯನ್ನು ಘೋಷಿಸಿದೆ ಎಂದ ಅವರು ತಾಲೂಕಿನಲ್ಲಿ ಪಕ್ಷದ ಸದಸ್ಯತ್ವದ ಅಭಿಯಾನ ವನ್ನು ದಾಖಲೆ ಪ್ರಮಾಣದಲ್ಲಿ ಮಾಡಬೇಕೆಂದು ಕಾರ್ಯಕರ್ತರಿಗೆ ತಿಳಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಚೌಡರೆಡ್ಡಿ,ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರೋಷನ್ ಅಬ್ಬಾಸ್,ಜಿಲ್ಲಾ ಅಧ್ಯಕ್ಷ ಮುನಿಯಪ್ಪ, ತಾಲೂಕು ಅಧ್ಯಕ್ಷ ಮಂಜುನಾಥ್ ರೆಡ್ಡಿ, ಕಾರ್ಯಾಧ್ಯಕ್ಷ ನಟರಾಜ್,ಖಜಾಂಚಿ ಕೋಟೆ ಭಾಸ್ಕರ್, ಚಿನ್ನಪ್ಪರೆಡ್ಡಿ, ಮಂಜುನಾಥ ರೆಡ್ಡಿ, ಪ್ರಭಾಕರ್, ಚೇತನ್, ರೈಲ್ವೆ ಬೇಗ್, ರಾಘವೇಂದ್ರ, ಸೋಮಶೇಖರ್ ಗೌಡ, ಶಾಂತರಾಜ್, ಗೋಟಕ ನಾಪುರದ ಮುರುಳೀಧರ್, ನಂಜುಂಡಪ್ಪ, ಶ್ರೀನಿವಾಸರೆಡ್ಡಿ, ರಮೇಶ್ ಹಾಗೂ ಇನ್ನಿತರರು ಭಾಗವಹಿಸಿದ್ದರು.