ಬಿಗ್​ಬಾಸ್ ಬಿಹಾರ ರಿಸಲ್ಟ್​ ಫೋಟೋ ಗ್ಯಾಲರಿ ಫ್ಯಾಷನ್​ ವಿಶ್ವವಾಣಿ ಪ್ರಾಪರ್ಟಿ ವಿದೇಶ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chintamani News: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ಕವರ್ ಗಳ ಜಪ್ತಿ ಮಾಡಿದ ಗ್ರಾಮ ಪಂಚಾಯಿತಿ

ಪ್ಲಾಸ್ಟಿಕ್ ಕವರ್‌ಗಳ ಬಳಕೆಯಾಗುತ್ತಿದ್ದು ಅಂಗಡಿಗಳ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಜಿ ಅನ್ಸರ್ ಖಾನ್ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಸುಮಾರು 15 ಕೆಜಿಯಷ್ಟು ಪ್ಲಾಸ್ಟಿಕ್ ಕವರ್‌ಗಳನ್ನು ಜಪ್ತಿ ಮಾಡಿಕೊಂಡು ಅಂಗಡಿ ಮಾಲೀಕರಿಗೆ ಖಡಕ್ ವಾರ್ನಿಂಗ್ ನೀಡಿ ಬಂದಿದ್ದಾರೆ.

ಪ್ಲಾಸ್ಟಿಕ್ ಕವರ್ ಗಳ ಜಪ್ತಿ ಮಾಡಿದ ಗ್ರಾಮ ಪಂಚಾಯಿತಿ

ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ಕವರ್‌ಗಳನ್ನು ಜಪ್ತಿ ಮಾಡಿದ ಗ್ರಾಮ ಪಂಚಾಯಿತಿ ಅಧಿಕಾರಿಗಳ ಚಿತ್ರ.. -

Ashok Nayak
Ashok Nayak Nov 13, 2025 11:49 PM

ಚಿಂತಾಮಣಿ : ತಾಲ್ಲೂಕಿನ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಕೇಂದ್ರ ಹಾಗೂ ಪುಣ್ಯಕ್ಷೇತ್ರವಾಗಿರುವ ಮುರುಗಮಲ್ಲ ದರ್ಗಾ ಆವರಣದಲ್ಲಿ ಅಕ್ರಮವಾಗಿ ಪ್ಲಾಸ್ಟಿಕ್ ಕವರ್‌ಗಳ ಬಳಕೆಯಾಗುತ್ತಿದ್ದು ಅಂಗಡಿಗಳ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಜಿ ಅನ್ಸರ್ ಖಾನ್ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಸುಮಾರು 15 ಕೆಜಿಯಷ್ಟು ಪ್ಲಾಸ್ಟಿಕ್ ಕವರ್‌ಗಳನ್ನು ಜಪ್ತಿ ಮಾಡಿಕೊಂಡು ಅಂಗಡಿ ಮಾಲೀಕರಿಗೆ ಖಡಕ್ ವಾರ್ನಿಂಗ್ ನೀಡಿ ಬಂದಿದ್ದಾರೆ.

ಇದನ್ನೂ ಓದಿ: Children's Day 2025 Wishes: ಮಕ್ಕಳ ದಿನಾಚರಣೆ 2025; ಮುದ್ದು ಮಗುವಿಗೆ ಶುಭ ಕೋರಲು ಇಲ್ಲಿದೆ ಶುಭ ಸಂದೇಶಗಳು

ಈ ವೇಳೆ ಮಾತನಾಡಿದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹಾಜಿ ಅನ್ಸರ್ ಖಾನ್ ಪ್ಲಾಸ್ಟಿಕ್ ಕವರ್ ಗಳು ಮಾರಾಟ ಹಾಗೂ ಅದರ ಬಳಕೆ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸ ಲಾಗಿದ್ದರು. ಕೆಲ ಅಂಗಡಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಹಾಗೂ ಬಳಿಕೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ತಕ್ಷಣವೇ ದಾಳಿ ನಡೆಸಿ ಜಪ್ತಿ ಮಾಡಿಕೊಳ್ಳಲಾಗಿದೆ.

ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೆ ಪ್ಲಾಸ್ಟಿಕ್ ಕವರ್ ಗಳನ್ನು ಬಳಸಬಾರದು.ಕದ್ದು ಮುಚ್ಚಿ ಪ್ಲಾಸ್ಟಿಕ್ ಕವರ್ ಗಳನ್ನು ಮಾರಾಟ ಮಾಡಿದರೆ ಮುಂದಿನ ದಿನಗಳಲ್ಲಿ ದಂಡ ವಿಧಿಸಿ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.