Grama Panchayat Election: ಡಿ.ಪಾಳ್ಯ ಗ್ರಾ.ಪಂ,ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ
ಇತ್ತೀಚಿಗೆ ಡಿ.ಪಾಳ್ಯ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಅವಿ ಶ್ವಾಯ ನಿರ್ಣಯವನ್ನು ಮಂಡಿಸುವ ಮೂಲಕ ಪದಚ್ಯುತಿಗೊಳಿಸಲಾಗಿತ್ತು.ಈ ಮೂಲಕ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ಚುನಾ ವಣೆಯನ್ನು ನಿಗದಿಪಡಿಸಲಾಗಿತ್ತು
Source : Chikkaballapur Reporter
ಗೌರಿಬಿದನೂರು: ತಾಲೂಕಿನ ಡಿ.ಪಾಳ್ಯ ಗ್ರಾಮ ಪಂಚಾಯತಿಯಲ್ಲಿ ತೆರವಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಂಗರಾಜು ಹಾಗೂ ಉಪಾಧ್ಯಕ್ಷರಾಗಿ ರಂಗನಾಥಗೌಡ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ಡಿ.ಪಾಳ್ಯ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಯ ನಿರ್ಣಯವನ್ನು ಮಂಡಿಸುವ ಮೂಲಕ ಪದಚ್ಯುತಿಗೊಳಿಸಲಾಗಿತ್ತು.ಈ ಮೂಲಕ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ಚುನಾವಣೆಯನ್ನು ನಿಗದಿಪಡಿಸಲಾಗಿತ್ತು.
ಸಾಮಾನ್ಯ ಸ್ಥಾನಕ ಮೀಸಲಾಗಿದ್ದ ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ,ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಗಂಗರಾಜು ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರಂಗನಾಥ ಗೌಡ ನಾಮಪತ್ರಗಳನ್ನು ಸಲ್ಲಿಸಿದ್ದರು.ಇವರನ್ನು ಹೊರತುಪಡಿಸಿ ಇನ್ಯಾರು ನಾಮಪತ್ರ ಗಳನ್ನು ಸಲ್ಲಿಸದ ಕಾರಣ ಚುನಾವಣಾಧಿಕಾರಿ ಮೋಹನ್ ಅವರು ಗಂಗರಾಜು ಅಧ್ಯಕ್ಷ ರಾಗಿ, ರಂಗನಾಥಗೌಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ಫಲಿತಾಂಶ ಹೊರಬೀಳುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರ ಮಿಸಿದರು.ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡುತ್ತಾ,ಜನರಿಗೆ ಮೂಲಸೌಲಭ್ಯಗಳನ್ನು ಒದಗಿಸಲು ಮೊದಲ ಆದ್ಯತೆ ನೀಡಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಕೇಶವರೆಡ್ಡಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ವೇದಲವೇಣಿ ವೇಣು,ಅಶ್ವತ್ಥನಾರಾಯಣ ಗೌಡ,ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಅರುಂಧತಿ ಮುಖಂಡರಾದ ಖಾದರ್ ಸುಬಾನ್ ಖಾನ್,ವೆಂಕಟರಮಣಪ್ಪ,ರಮೇಶ್ ನಾಯ್ಕ್,ಶ್ರೀನಿವಾಸ್,ಮೋಹನ್,ಮಂಜುನಾಥ್, ನಾಗರಾಜ್ ಹಾಗೂ ಇನ್ನಿತರರು ಉಪಸ್ಥಿತ ರಿದ್ದರು.