ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Onake Obavva Jayanti: ನ.11ರಂದು ಒನಕೆ ಓಬವ್ವ ಜಯಂತಿ ಅದ್ಧೂರಿ ಆಚರಣೆ: ಜಿಲ್ಲಾಧಿಕಾರಿ ಜಿ.ಪ್ರಭು

ಜಯಂತಿ ಅಂಗವಾಗಿ ಒನಕೆ ಓಬವ್ವ ಅವರ ಬದುಕು, ಹೋರಾಟ ಹಾಗೂ ಅಪ್ರತಿಮ ಸಾಹಸಗಾಥೆ ಕುರಿತು ಉಪನ್ಯಾಸ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು

ನ.11ರಂದು ಒನಕೆ ಓಬವ್ವ ಜಯಂತಿ ಅದ್ಧೂರಿ ಆಚರಣೆ

-

Profile
Ashok Nayak Nov 5, 2026 8:26 PM

ಚಿಕ್ಕಬಳ್ಳಾಪುರ: ವೀರವನಿತೆ ಒನಕೆ ಓಬವ್ವ ಅವರ ಜಯಂತಿಯನ್ನು ನ.11ರಂದು ನಗರದ ಜಿಲ್ಲಾ ಕನ್ನಡ ಭವನದಲ್ಲಿ ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಒನಕೆ ಓಬವ್ವ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಯಂತಿ ಅಂಗವಾಗಿ ಒನಕೆ ಓಬವ್ವ ಅವರ ಬದುಕು, ಹೋರಾಟ ಹಾಗೂ ಅಪ್ರತಿಮ ಸಾಹಸಗಾಥೆ ಕುರಿತು ಉಪನ್ಯಾಸ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸ ಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Chikkaballapur News: ಬಡವರ ಬದುಕಿಗೆ ಆಸರೆಯಾಗಲು 501 ಜೋಡಿ ಸಾಮೂಹಿಕ ವಿವಾಹ ಆಯೋಜನೆ

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಿಂದ ಜಿಲ್ಲಾ ಕನ್ನಡ ಭವನದವರೆಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಮೆರವಣಿಗೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವುದರ ಜತೆಗೆ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಹಾಗೂ ಭದ್ರತೆಗೆ ಆದ್ಯತೆ ನೀಡಬೇಕು ಎಂದರು.

5cbpm1 obavva DC Meeting- (8) ok

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಗಳ ಮುದ್ರಣ ಮತ್ತು ವಿತರಣೆ, ವೇದಿಕೆ ಕಾರ್ಯಕ್ರಮದ ನಿರ್ವಹಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಸೇರಿದಂತೆ ಎಲ್ಲ ಸಿದ್ಧತಾ ಕಾರ್ಯಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಂಚಿಕೆ ಮಾಡಿ, ನಿಗದಿತ ಸಮಯದಲ್ಲಿ ಪೂರ್ಣ ಗೊಳಿಸಬೇಕು. ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶೋಭಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಹಾಗೂ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಿ ದ್ದರು.