Chikkaballapur News: ಆಗಸ್ಟ್ 15ಕ್ಕೆ ಭವ್ಯ ಸಿದ್ಧತೆ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಕಟ್ಟುನಿಟ್ಟಿನ ಸೂಚನೆ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 15ರಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಮುಖ್ಯ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.
-
ಚಿಕ್ಕಬಳ್ಳಾಪುರ: ಸ್ವಾತಂತ್ರ‍್ಯ ದಿನಾಚರಣೆಯನ್ನು ಈ ಬಾರಿ ಕೇವಲ ಔಪಚಾರಿಕ ಕಾರ್ಯಕ್ರಮ ವಾಗಿ ಅಲ್ಲದೆ, ಜನರಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಚೇತನ ಮೂಡಿಸುವ ಹಬ್ಬದ ಸಂಭ್ರಮ ದೊಂದಿಗೆ ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಎಲ್ಲಾ ಸಿದ್ಧತೆಗಳನ್ನು ಸಮಯಕ್ಕೆ ಪೂರ್ಣ ಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 15ರಂದು ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಮುಖ್ಯ ಕಾರ್ಯಕ್ರಮವನ್ನು ವಿಜೃಂಭಣೆ ಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: Chikkaballapur News: 'ಬೇಡ ಬ್ರೋ–ರೈಸ್ ಕರ್ನಾಟಕ' ಜಾಗೃತಿ ಜಾಥಾ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯ ಕರೆ
ಧ್ವಜಾರೋಹಣ, ಗೌರವ ವಂದನೆ, ಪೊಲೀಸ್ ಕವಾಯತು, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಸಂಜೆ ಕನ್ನಡಭವನದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು. ಗೈರು ಹಾಜರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ನೆರಳು, ವೈದ್ಯಕೀಯ ನೆರವು ಸೇರಿದಂತೆ ಎಲ್ಲಾ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಿದರು. ವೇದಿಕೆ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ, ಆಹ್ವಾನ ಪತ್ರಿಕೆ, ಸ್ವಚ್ಛತೆ, ದೀಪಾಲಂಕಾರ ಸೇರಿದಂತೆ ಎಲ್ಲ ಜವಾಬ್ದಾರಿಗಳನ್ನು ಸಂಬಂಧಿತ ಇಲಾಖೆಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.