ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮಡಿಯಾಲ ನಾರಾಯಣ ಭಟ್ ಜನ್ಮ ಶತಾಬ್ದಿ ಸ್ಮರಣಾರ್ಥ ಉನ್ನತ ಶಿಕ್ಷಣ ಕೇಂದ್ರ ಸ್ಥಾಪನೆ; ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಎಐ ಶಿಕ್ಷಣ

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಡಿಯಾಲದಲ್ಲಿ 'ಮಡಿಯಾಲ ನಾರಾಯಣ ಭಟ್ ಉನ್ನತ ಶಿಕ್ಷಣ ಕೇಂದ್ರ' ಸ್ಥಾಪನೆಗೆ ಚಾಲನೆ ನೀಡಲಾಗುವುದು.

ಚಿಕ್ಕಬಳ್ಳಾಪುರ: ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಉನ್ನತ ಶಿಕ್ಷಣವನ್ನು ಉಚಿತವಾಗಿ ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಯಾಗಿ, ಮಡಿಯಾಲ ನಾರಾಯಣ ಭಟ್ ಅವರ ಜನ್ಮ ಶತಾಬ್ದಿ ಸ್ಮರಣಾರ್ಥ ಅವರ ಹುಟ್ಟೂರಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಯಂತ್ರ ಕಲಿಕೆ (ಮಷಿನ್ ಲರ್ನಿಂಗ್) ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತಿದೆ. ನವೆಂಬರ್ 30ರಂದು ಕೇಂದ್ರದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದರು.

ಇದನ್ನೂ ಓದಿ: Chikkaballapur News: ರಾಜಕಾರಣಿಗಳಲ್ಲಿ ನಾಲ್ಕೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ತರಬಲ್ಲೆ: ಸದ್ಗುರು

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಡಿಯಾಲದಲ್ಲಿ 'ಮಡಿಯಾಲ ನಾರಾಯಣ ಭಟ್ ಉನ್ನತ ಶಿಕ್ಷಣ ಕೇಂದ್ರ' ಸ್ಥಾಪನೆಗೆ ಚಾಲನೆ ನೀಡಲಾಗುವುದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಜಾಗತಿಕ ಮಟ್ಟದ ತಂತ್ರಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಅವಕಾಶಗಳು ದೊರೆಯಬೇಕು ಎಂಬ ಆಶಯದೊಂದಿಗೆ ಈ ಯೋಜನೆ ರೂಪಿಸಲಾಗಿದೆ ಎಂದರು.

ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆಯಂತಹ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋ ಧನೆ, ನಾವೀನ್ಯತೆ ಹಾಗೂ ಹೊಸ ಆವಿಷ್ಕಾರಗಳಿಗೆ ಕೇಂದ್ರವು ವೇದಿಕೆಯಾಗಲಿದೆ. ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಅವಕಾಶ ಕಲ್ಪಿಸುವ ಮೂಲಕ ತಂತ್ರಜ್ಞಾನ ಶಿಕ್ಷಣ ವನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ವಿವರಿಸಿದರು.

ಮೌಲ್ಯಾಧಾರಿತ ಶಿಕ್ಷಣದ ಮೂಲಕ ಸಮಾಜದಲ್ಲಿ ಹೊಸ ಬದಲಾವಣೆಗೆ ಮುನ್ನುಡಿ ಬರೆದ ಮಡಿಯಾಲ ನಾರಾಯಣ ಭಟ್ ಅವರ ಶೈಕ್ಷಣಿಕ ಸೇವೆ, ಆದರ್ಶ ಮತ್ತು ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜತೆಗೆ, ಅವರ ಜನ್ಮ ಶತಾಬ್ದಿಯನ್ನು ಅರ್ಥಪೂರ್ಣ ಸಮಾಜಮುಖಿ ಕಾರ್ಯದ ಮೂಲಕ ಆಚರಿಸುವ ಉದ್ದೇಶದಿಂದ ಈ ಉನ್ನತ ಶಿಕ್ಷಣ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಸದ್ಗುರು ಮಧುಸೂದನ ಸಾಯಿ ತಿಳಿಸಿದರು.