ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gauribidanur News: 65 ಲಕ್ಷ ವೆಚ್ಚದ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಭೂಮಿಪೂಜೆ

ಗ್ರಾಮೀಣ ಪ್ರದೇಶದ ಜನತೆಗೆ ನಗರ ಮಟ್ಟದ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಅವರ ಗ್ರಾಮ ದಲ್ಲಿಯೇ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. ಅದರ ಭಾಗವಾಗಿಯೇ ಜೀಲಾ ಕುಂಟೆ ಗ್ರಾಮದಲ್ಲಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರ ನಿರ್ಮಾಣವಾಗುತ್ತಿದೆ

ಗೌರಿಬಿದನೂರು: ತಾಲ್ಲೂಕಿನ ಮುದಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀಲಾಕುಂಟೆ ಗ್ರಾಮದಲ್ಲಿ ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಅನುದಾನದಡಿ, ಸುಮಾರು 765 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆಯುಷ್ಠಾನ್ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ಗೆ ಲೋಕಸಭಾ ಸದಸ್ಯ ಡಾ.ಕೆ.ಸುಧಾಕರ್(MP Dr K Sudhakar) ಹಾಗೂ ಶಾಸಕ ಪುಟ್ಟಸ್ವಾಮಿ ಗೌಡ(MLA Puttaswamy Gowda) ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್, ಗ್ರಾಮೀಣ ಪ್ರದೇಶದ ಜನತೆಗೆ ನಗರ ಮಟ್ಟದ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಅವರ ಗ್ರಾಮದಲ್ಲಿಯೇ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. ಅದರ ಭಾಗವಾಗಿಯೇ ಜೀಲಾ ಕುಂಟೆ ಗ್ರಾಮದಲ್ಲಿ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಆಯುಷ್ಮಾನ್(Ayushmann) ಆರೋಗ್ಯ ಕೇಂದ್ರ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Chikkaballapur News: 1800 ಶಾಲೆ-ಕಾಲೇಜುಗಳಿಗೆ ವಿಸ್ತರಣೆ; 35 ಸಾವಿರಕ್ಕೂ ಹೆಚ್ಚು ಸಸಿ ನೆಡುವ ಗುರಿ

ನೂತನ ಆರೋಗ್ಯ ಕೇಂದ್ರದಲ್ಲಿ ಹೊರರೋಗಿಗಳ ಚಿಕಿತ್ಸಾ ವಿಭಾಗ, ಔಷಧ ವಿತರಣೆ, ತಾಯಿ-ಮಗು ಆರೋಗ್ಯ ಸೇವೆಗಳು, ಪ್ರಾಥಮಿಕ ತುರ್ತು ಚಿಕಿತ್ಸೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯ ಗಳನ್ನು ಕಲ್ಪಿಸಲಾಗುವುದು. ಆರೋಗ್ಯ ಸಿಬ್ಬಂದಿ ಮತ್ತು ವೈದ್ಯರು ಸ್ಥಳದಲ್ಲೇ ವಾಸ್ತವ್ಯ ಮಾಡಲು ಅನುಕೂಲವಾಗುವಂತೆ ವಸತಿ ವ್ಯವಸ್ಥೆಯನ್ನೂ ಕಟ್ಟಡದಲ್ಲಿ ಕಲ್ಪಿಸಲಾಗುತ್ತಿದೆ. ಇದರಿಂದ ದಿನದ 24 ಗಂಟೆಯೂ ಜನರಿಗೆ ಆರೋಗ್ಯ ಸೇವೆ ಲಭ್ಯವಾಗಲಿದ್ದು, ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಶಾಸಕ ಪುಟ್ಟಸ್ವಾಮಿ ಗೌಡ ಮಾತನಾಡಿ, ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಆರೋಗ್ಯ, ಶಿಕ್ಷಣ, ರಸ್ತೆ ಹಾಗೂ ಕುಡಿಯುವ ನೀರಿನಂತಹ ಮೂಲ ಸೌಲಭ್ಯ ಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಜೀಲಾಕುಂಟೆ ಗ್ರಾಮದಲ್ಲಿ ನಿರ್ಮಾಣ ವಾಗುತ್ತಿರುವ ಆರೋಗ್ಯ ಕೇಂದ್ರ ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಲಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಮನ್ವಯದೊಂದಿಗೆ ಗ್ರಾಮೀಣ ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಕಾರ್ಯ ಮುಂದುವರಿಯಲಿದೆ.

ಈ ಆರೋಗ್ಯ ಕೇಂದ್ರ ಕಾರ್ಯಾರಂಭಗೊಂಡ ಬಳಿಕ ಸಣ್ಣಪುಟ್ಟ ಚಿಕಿತ್ಸೆಗಳಿಗಾಗಿ ಸಾರ್ವಜನಿಕರು ನಗರದ ಸಾರ್ವಜನಿಕ ಆಸ್ಪತ್ರೆಗೆ ಬರುವ ಅಗತ್ಯ ಕಡಿಮೆಯಾಗಲಿದ್ದು, ಇದರಿಂದ ಸಮಯ ಹಾಗೂ ವೆಚ್ಚ ಎರಡೂ ಉಳಿತಾಯವಾಗಲಿದೆ ಎಂದು ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಶಾಸಕರ ಬೆಂಬಲಿಗರು, ಕೆ, ಎಚ್ ಪಿ, ಹಾಗು ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು, ಹಾಗೂ ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.