Per capital Income: ಜನತೆಯ ತಲಾದಾಯ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆಗಳು ಮುನ್ನುಡಿ ಬರೆದಿವೆ : ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿಕೆ
ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕಾರಣದಿಂದಾಗಿ ದೇಶದಲ್ಲಿ ಕರ್ನಾ ಟಕ ರಾಜ್ಯ ತಲಾದಾಯದಲ್ಲಿ ಮೊದಲನೇ ಸ್ಥಾನದಲಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರ ಹಿಸಿ ಕೊಡುವ ರಾಜ್ಯ ಯಾವುದಾದರೂ ಇದ್ದರೆ ಅದು ಕರ್ನಾಟಕ ರಾಜ್ಯವಾಗಿದೆ. ಈ ಎಲ್ಲಾ ಸಾಧನೆಗೆ ಪಂಚ ಗ್ಯಾರಂಟಿ ಯೋಜನೆಗಳಿಂದಾಗುತ್ತಿರುವ ಆರ್ಥಿಕ ಸಂಚಾರವೇ ಕಾರಣ ಎಂದು ಬಣ್ಣಿಸಿದರು

ದೇಶದಲ್ಲಿಯೇ ಅತಿ ಹೆಚ್ಚಿನ ತಲಾದಾಯ ಕರ್ನಾಟಕದಲ್ಲಿ ಹೆಚ್ಚಳವಾಗಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ತಿಳಿಸಿದರು. -

ಚಿಕ್ಕಬಳ್ಳಾಪುರ : ದೇಶದಲ್ಲಿಯೇ ಅತಿ ಹೆಚ್ಚಿನ ತಲಾದಾಯ ಕರ್ನಾಟಕದಲ್ಲಿ ಹೆಚ್ಚಳವಾಗಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ತಿಳಿಸಿದರು.
ನಗರ ಹೊರವಲಯ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ "ಗ್ಯಾರಂಟಿ ಯೋಜನೆ" ಕುರಿತ ರಾಜ್ಯ ಮಟ್ಟದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕಾರಣದಿಂದಾಗಿ ದೇಶದಲ್ಲಿ ಕರ್ನಾಟಕ ರಾಜ್ಯ ತಲಾದಾಯದಲ್ಲಿ ಮೊದಲನೇ ಸ್ಥಾನದಲಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹಿಸಿ ಕೊಡುವ ರಾಜ್ಯ ಯಾವುದಾದರೂ ಇದ್ದರೆ ಅದು ಕರ್ನಾಟಕ ರಾಜ್ಯವಾಗಿದೆ. ಈ ಎಲ್ಲಾ ಸಾಧನೆಗೆ ಪಂಚ ಗ್ಯಾರಂಟಿ ಯೋಜನೆಗಳಿಂದಾಗುತ್ತಿರುವ ಆರ್ಥಿಕ ಸಂಚಾರವೇ ಕಾರಣ ಎಂದು ಬಣ್ಣಿಸಿದರು.
ಇದನ್ನೂ ಓದಿ: Vishwavani Editorial: ಬರುವುದಕ್ಕೆ ಮುಖವೆಲ್ಲಿದೆ?!
ಗ್ಯಾರೆಂಟಿಗಳು ಜನರಲ್ಲಿ ಆರ್ಥಿಕ ಚೈತನ್ಯ ಹೆಚ್ಚಿಸಿ ಉತ್ತಮ ಬದುಕಿಗೆ ಕಾರಣವಾಗುವ ಮೂಲಕ ಮಹಿಳಾ ಸಬಲೀಕರಣದಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ.ಉದ್ಯೋಗ ಸೃಷ್ಟಿಯ ಮೂಲಲವೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶದ ಗಮನ ಸೆಳೆಯುತ್ತಿವೆ.ವಿಶೇಷವಾಗಿ ಮಹಿಳೆ ಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಒದಗಿಸಿ ಕೊಟ್ಟಿರುವ ಶಕ್ತಿ ಯೋಜನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಈವರೆಗೂ ಮಹಿಳೆಯರು ೫೩೭.೪೪ ಕೋಟಿ ಪ್ರಯಾಣದ ಟ್ರಿಪ್‌ಗಳನ್ನು ಪೂರೈಸಿದ್ದಾರೆ. ಇದು ಗೋಲ್ಡನ್ ಬುಕ್ ಆಫ್ ರೆಕಾಡ್ಸ್ ಬುಕ್ ನಲ್ಲಿ ದಾಖಲಾಗಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿ ರಾಜ್ಯ ಸರ್ಕಾರದ ಘನತೆ ಯನ್ನು ಹೆಚ್ಚಿಸಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ೨೦೨೩ ರಲ್ಲಿ ಆರಂಭವಾದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮುಂದು ವರೆದಿರುವುದು ಯೋಜನೆಗಳಲ್ಲಿನ ಅಂತಃಶಕ್ತಿ ಮತ್ತು ಬಡವರು, ಮಧ್ಯಮ ವರ್ಗದ ಜನರ ಕುರಿತು ಇರುವ ಸರ್ಕಾರಕ್ಕಿರುವ ಕಾಳಜಿ ಕಳಕಳಿಗೆ ಹಿಡಿದ ಕನ್ನಡಿಯಾಗಿವೆ. ಚುನಾವಣೆ ಸಂದರ್ಭದಲ್ಲಿ ಜನತೆಗೆ ಗ್ಯಾರೆಂಟಿಗಳ ಬಗ್ಗೆ ಖಾತರಿ ಮಾಡಿದ್ದ ಈಗಿನ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತಂದ ಕೀರ್ತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರಕಾರಕ್ಕಿದೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ದೇಶದಲ್ಲೆ ಮಾದರಿಯಾಗಿ ಹಾಗೂ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಈವರೆಗೆ ೯೭.೭೭ ಸಾವಿರ ಕೋಟಿ ಹಣವನ್ನು ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ತಲುಪಿಸಿದ್ದರಿಂದ ತಲಾದಾಯ ಹೆಚ್ಚಳವಾಗಲು ಕಾರಣವಾಗಿದೆ. ಈ ಯೋಜನೆಗಳು ರಾಜ್ಯವಷ್ಟೇ ಅಲ್ಲದೆ ದೇಶದ ಜನರ ಮನ್ನಣೆಗಳಿಸಿವೆ. ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿ ೧.೨೪ ಕೋಟಿ ಫಲಾನುಭವಿಗಳಿಗೆ ೫೦,೦೦೫.೮೧ ಕೋಟಿ ಹಣವನ್ನು ರಾಜ್ಯ ಖಜಾನೆಯಿಂದ ನೇರವಾಗಿ ಜಮೆ ಮಾಡಲಾಗಿದೆ. ಗೃಹಜೋತಿ ಯೋಜನೆಯಡಿ ೧.೬೪ ಕೋಟಿ ಫಲಾನುಭವಿಗಳನ್ನು ನೋಂದಣಿ ಮಾಡಿ ೨೦೦ ಯೂನಿಟ್ ಉಚಿತ ವಿದ್ಯುತ್ ನೀಡುವ ಮೂಲಕ ೧೮,೧೩೯.೬೬ ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಹಸಿವು ಮುಕ್ತ ರಾಜ್ಯ ಮಾಡಬೇಕೆಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿತು,ಈ ಯೋಜನೆಯಡಿ ೭೨.೦೨ ಕೋಟಿ ಕುಟುಂಬಗಳಿಗೆ ೧೧,೮೨೧.೧೭ ಕೋಟಿ ವೆಚ್ಚದ ಪಡಿತರ ನೀಡಲಾಗಿದೆ. ಶಕ್ತಿ ಯೋಜನೆಯಡಿ ೫೩೭.೪೪ ಕೋಟಿ ಉಚಿತ ಬಸ್ ಟಿಕೆಟ್ ಪಡೆದು ರಾಜ್ಯದ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ಈ ವರೆಗೆ ೧೩,೭೧೪.೬೫ ಕೋಟಿ ಹಣವನ್ನು ಭರಿಸಿದೆ. ಯುವನಿಧಿ ಯೋಜನೆಯಡಿ ೨.೫೫ಲಕ್ಷ ಉದ್ಯೋಗಾಕಾಂಕ್ಷಿಗಳಿಗೆ ೬೨೨.೯೬ ಕೋಟಿ ಉದ್ಯೋಗ ಉದ್ಯೋಗ ಭತ್ಯೆಯನ್ನು ನೀಡಿ ಪ್ರೋತ್ಸಾಹ ನೀಡಿದೆ. ಈ ಎಲ್ಲಾ ಯೋಜನೆಗಳ ಫಲಶೃತಿಯೇ ತಲಾದಾಯ ಹೆಚ್ಚಳವಾಗಲಿಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಮಾತನಾಡಿ, ನುಡಿದಂತೆ ನಡೆದ ರಾಜ್ಯ ಸರ್ಕಾರ ವಿರೋಧ ಪಕ್ಷಗಳ ತಪ್ಪು ಸಂದೇಶ ಮತ್ತು ಟೀಕೆಗಳ ನಡುವೆಯೂ ಪರಿಣಾಮಕಾರಿಯಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸಾರ್ಥಕತೆಯನ್ನು ಮೆರೆದಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ, ಭ್ರಷ್ಟಾಚಾರ ಇಲ್ಲದೆ ಯಾವುದಾದರು ಯೋಜನೆಗಳು ದೇಶದಲ್ಲಿ ಸರಿಯಾಗಿ ಬಡವರು, ಮಧ್ಯಮ ವರ್ಗದವರಿಗೆ ತಲುಪಿವೆ ಎಂದರೆ ಅವು ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಮಾತ್ರವಾಗಿವೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆ ಗ್ಯಾರೆಂಟಿ ಯೋಜನೆಗಳ ಜಾರಿಯಲ್ಲಿ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ. ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ೫೬.೯೩ ಲಕ್ಷ ಫಲಾನುಭವಿಗಳನ್ನು ನೋಂದಣಿ ಮಾಡಿ ೧೧೩೮.೬೪ ಕೋಟಿ ವೆಚ್ಚ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ೩.೨೨ ಲಕ್ಷ ಜನರನ್ನು ನೋಂದಣಿ ಮಾಡಿ ೨೯೨.೨೩ ಕೋಟಿ ರಿಯಾಯ್ತಿ ನೀಡಲಾಗಿದೆ. ಶಕ್ತಿ ಯೋಜನೆಯಡಿ ೭.೭೭ ಕೋಟಿ ಉಚಿತ ಟಿಕೆಟ್ ಪಡೆದು ಜಿಲ್ಲೆಯ ಮಹಿಳೆಯರು ಪ್ರಯಾಣ ಮಾಡಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ೧.೫೬ ಲಕ್ಷ ಕುಟುಂಬಗಳಿಗೆ ೨೬೫.೨೯ ಕೋಟಿ ವೆಚ್ಚದ ಪಡಿತರ ವಿತರಣೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ೩೬೪೧ ಅಭ್ಯರ್ಥಿಗಳನ್ನು ನೋಂದಾಯಿಸಿ ಉದ್ಯೋಗ ಭತ್ಯೆಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಗೃಹಲಕ್ಷ್ಮಿಯೋಜನೆಯಡಿ ಶೇ. ೯೯ ರಷ್ಟು, ಗೃಹ ಜ್ಯೋತಿ ಯೋಜನೆಯಡಿ ಶೇ. ೯೭ ರಷ್ಟು, ಅನ್ನಭಾಗ್ಯ ಯೋಜನೆಯಡಿ ಶೇ. ೧೦೦ ರಷ್ಟು ಹಾಗೂ ಶಕ್ತಿ ಯೋಜನೆಯಡಿ ಶೇ. ೧೦೦ ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಹೇಳಿದರು.
ನಮ್ಮ ಸರಕಾರ ಕೇವಲ ಗ್ಯಾರಂಟಿ ಯೋಜನೆಗಳನ್ನಷ್ಟೆ ಅಲ್ಲದೆ ಅಭಿವೃದ್ಧಿ ಕಾರ್ಯಗಳಿಗೂ ಹಣವನ್ನು ವೆಚ್ಚ ಮಾಡಿ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ವರ್ಷ ೪ ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಂದಿನ ತಿಂಗಳಲ್ಲಿ ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯ ಆಗಲಿದೆ. ಜಿಲ್ಲಾ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಟ್ಟದ ಹೂವಿನ ಮಾರುಕಟ್ಟೆ ನಿರ್ಮಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಸೂರಜ್ ಹೆಗಡೆ ಮಾತನಾಡಿ, ಗ್ಯಾರಂಟಿ ಯೋಜನೆ ಗಳು ನಿಜವಾಗಿಯೂ ರಾಜ್ಯದ ಜನರಿಗೆ, ಮಹಿಳೆಯರಿಗೆ ಅನುಕೂಲವಾಗಿದ್ದರೆ ಅದರ ಬಹಿರಂಗ ವಾಗಿ, ಮುಕ್ತವಾಗಿ ಹೇಳಿಕೊಳ್ಳಿ ಆಗ ಇಂತಹ ಮಹೋನ್ನತ ಯೋಜನೆಗಳು ಯಾವುದೇ ತೊಡಕಿಲ್ಲದೆ ಮುಂದುವರಿಯಲು ಅನುಕೂಲವಾಗುತ್ತದೆ. ಸರ್ಕಾರಕ್ಕೆ ಸ್ಪೂರ್ತಿ ದೊರೆಯುತ್ತದೆ ಎಂದು ಫಲಾನುಭವಿಗಳಲ್ಲಿ ಮನವಿ ಮಾಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ಮಾತನಾಡಿ, ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಇತರ ರಾಜ್ಯಗಳು ಕರ್ನಾಟಕದ ಈ ಯೋಜನೆ ಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ವಿರೋಧಿಸುತ್ತಿದ್ದವರು ಸಹ ಒಪ್ಪಿಕೊಂಡಿರುವಂತಹ ಯೋಜನೆಗಳು ಯಾವುದಾದರೂ ದೇಶದಲ್ಲಿ ಇದ್ದರೆ ಅವು ಪಂಚ ಗ್ಯಾರಂಟಿ ಯೋಜನೆಗಳು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಗಣ್ಯರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು. ನಂತರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳು ತೆರೆದಿದ್ದ ಜಾಗೃತಿ ಮಳಿಗೆಗಳಿಗೆ ಚಾಲನೆ ನೀಡಿದರು.
ಶಕ್ತಿ ಯೋಜನೆಯಡಿ ನಿರ್ಮಿಸಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಗಳ ವಿವಿಧ ಮಾದರಿಗಳ ಪ್ರಾತ್ಯಕ್ಷಿಕೆಗಳು ಗಮನ ಸೆಳೆದವು. ನಾಟಕ ತಂಡಗಳ ಗೌರಿಬಿದನೂರು ಗೌತಮ ಬುದ್ದ ಸಾಮಾಜಿಕ ಮತ್ತು ಸಾಂಸ್ಕೃ ತಿಕ ತಂಡ, ಬೆಂಗಳೂರು ಸುರಭಿ ತಂಡದ ಮೂಲಕ ಗ್ಯಾರಂಟಿ ಯೋಜನೆಗಳ ಕುರಿತು ನಾಟಕವನ್ನು ಪ್ರದರ್ಶಿಸಲಾಯಿತು.
ವೇದಿಕೆ ಕಾರ್ಯಕ್ರಮದಲ್ಲಿ ಮುಖವೀಣೆ ಅಂಜಿನಪ್ಪ ಅವರಿಂದ ಮುಖವೀಣೆ ವಾದನ, ಮಹೇಶ್ ಸಂಗಡಿಗರಿAದ ನಾಡಗೀತೆ, ದಿಕ್ಸೂಚಿ ನಾಟ್ಯಾಲಯದಿಂದ ನೃತ್ಯ, ಮುನಿರೆಡ್ಡಿ ಮತ್ತು ತಂಡಿದAದ ಗ್ಯಾರಂಟಿ ಯೋಜನೆಯ ಪ್ರಚಾರ ಗೀತೆಗೆ ಮಾಡಿದ ನೃತ್ಯವು ಜನರ ಆಕರ್ಷಣೆ ಗಳಿಸಿ ಚಪ್ಪಾಳೆ ಗಳಿಸಿತು. ಶಕ್ತಿ ಬಿಂದು ಪ್ರದರ್ಶನ ಮೂಲಕ ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಒಟ್ಟಾರೆ ಜಿಲ್ಲಾಡಳಿತ ಭವನ ಇಂದು ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಂದ ಕಿಕ್ಕಿರಿದಿತ್ತು. ಮಹಿಳಾ ಫಲಾನುಭವಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು.
ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಪಾಟೀಲ್ , ದಿನೇಶ್ ಗೊಳಿ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್ ಮಂಜುಳಾ , ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹ ಣಾಧಿಕಾರಿ ಡಾ.ವೈ. ನವೀನ್ ಭಟ್,ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್,ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರೆಂಟಿ ಯೋಜನೆ ಗಳ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಮತ್ತಿತರರು ಹಾಜರಿದ್ದರು.