ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gauribidanur News: ತೀರ್ಥ ಶಾಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಕರೆಯಂತೆ ಆ.9ರಿಂದ 17ರವರೆಗೆ ಹರ್ ಘರ್ ತಿರಂಗಾ ಅಭಿಯಾನ ನಡೆಯುತ್ತಿದೆ. ಇದರ ಅಂಗವಾಗಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ತ್ರಿವರ್ಣ ಧ್ವಜದ ವೈಭವ ವನ್ನು ಎತ್ತಿ ಹಿಡಿಯುವುದರ ಜತೆಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಭಕ್ತಿ ಹೆಚ್ಚಿಸುವುದು ಉದ್ದೇಶವಾಗಿದೆ

ಗೌರಿಬಿದನೂರು: ಪಟ್ಟಣದ ಮುನೇಶ್ವರ ಬಡಾವಣೆಯ ತೀರ್ಥ ಶಾಲೆಯಲ್ಲಿ ಸೋಮವಾರ ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷ ಪ್ರೊ. ಕೆ.ವಿ. ಪ್ರಕಾಶ್ ಮಾತನಾಡಿ, ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಕರೆಯಂತೆ ಆ.9ರಿಂದ 17ರವರೆಗೆ ಹರ್ ಘರ್ ತಿರಂಗಾ ಅಭಿಯಾನ ನಡೆಯುತ್ತಿದೆ. ಇದರ ಅಂಗವಾಗಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ತ್ರಿವರ್ಣ ಧ್ವಜದ ವೈಭವ ವನ್ನು ಎತ್ತಿ ಹಿಡಿಯುವುದರ ಜತೆಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಭಕ್ತಿ ಹೆಚ್ಚಿಸುವುದು ಉದ್ದೇಶವಾಗಿದೆ ಎಂದರು.

ಇದನ್ನೂ ಓದಿ: Gauribidanur News: ಗುರುಪೂರ್ಣಿಮೆಯ ಅಂಗವಾಗಿ ಆಚಾರ್ಯ ಶಾಲೆಯಲ್ಲಿ ಅರ್ಥಪೂರ್ಣ ಅಕ್ಷರಾಭ್ಯಾಸ, ಗುರುವಂದನೆ

ಪ್ರತಿಯೊಬ್ಬರೂ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ ದೇಶಪ್ರೇಮ ಮೆರೆಯಬೇಕು. ರಾಷ್ಟ್ರಧ್ವಜವು ಭಾರತೀಯರ ಸಾಮೂಹಿಕ ಹೆಮ್ಮೆ, ಏಕತೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಪ್ರತೀಕವಾಗಿದೆ ಎಂದು ಹೇಳಿದರು.

ಮುಖ್ಯ ಶಿಕ್ಷಕಿ ಎಂ. ಶೋಭಾ ಮಾತನಾಡಿ, ಅಭಿಯಾನವು ಪ್ರತಿಯೊಬ್ಬರಲ್ಲೂ ದೇಶಭಕ್ತಿಯ ಪ್ರಜ್ಞೆ ಮೂಡಿಸುವ ಜತೆಗೆ ರಾಷ್ಟ್ರಧ್ವಜದ ಮಹತ್ವದ ಕುರಿತು ಅರಿವು ಮೂಡಿಸುತ್ತಿದೆ ಎಂದರು.

ಶಾಲಾ ಸಿಬ್ಬಂದಿಯವರಾದ ಭಾರ್ಗವಿ, ಸುಜಾತ, ಚಂದ್ರಮ್ಮ, ತಿಮ್ಮಕ್ಕ, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.