ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬರಗಾಲದ ನಡುವೆ ಫೈನಾನ್ಸ್ ಕಂಪನಿಗಳ ದೌರ್ಜನ್ಯ: ಕಠಿಣ ಕ್ರಮದ ಭರವಸೆ ನೀಡಿದ ಚಿಂತಾಮಣಿ ಡಿವೈಎಸ್‌ಪಿ

ನಮ್ಮ ಭಾಗದಲ್ಲಿ ಭೀಕರ ಬರವಿದ್ದು, ಕೊಳವೆ ಬಾವಿಗಳಲ್ಲಿ ನೀರು ಆರೋಗುತ್ತಿದೆ. ಕೆಲಸ-ಕೂಲಿ ಇಲ್ಲದೆ ರೈತರು ಹಾಗೂ ಸಾರ್ವಜನಿಕರು ಕಷ್ಟದಲ್ಲಿದ್ದಾರೆ.ಇಂತಹ ಪರಿಸ್ಥಿತಿಯಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಬ್ಯಾಂಕ್‌ಗಳ ಸಿಬ್ಬಂದಿ ರೈತರ ಮನೆಗಳಿಗೆ ತೆರಳಿ ಸಾಲ ಮರು ಪಾವತಿಸುವಂತೆ ಕಿರುಕುಳ ನೀಡುತ್ತಿದ್ದಾರೆ.

ರೈತರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಿರಿ: ರೈತ ಸಂಘ ಆಗ್ರಹ

-

Profile
Ashok Nayak Sep 28, 2026 8:42 PM

ಚಿಂತಾಮಣಿ: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ ಡಿವೈಎಸ್ಪಿ ಅವರಿಗೆ ಗೌರವಪೂರ್ವಕವಾಗಿ ಸನ್ಮಾನಿಸಿ, ರೈತರ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷರಾದ ಜೆ.ವಿ. ರಘುನಾಥ್ ರೆಡ್ಡಿ ಅವರು ನಮ್ಮ ಭಾಗದಲ್ಲಿ ಭೀಕರ ಬರವಿದ್ದು, ಕೊಳವೆ ಬಾವಿಗಳಲ್ಲಿ ನೀರು ಆರೋಗುತ್ತಿದೆ.ಕೆಲಸ-ಕೂಲಿ ಇಲ್ಲದೆ ರೈತರು ಹಾಗೂ ಸಾರ್ವಜನಿಕರು ಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಬ್ಯಾಂಕ್‌ಗಳ ಸಿಬ್ಬಂದಿ ರೈತರ ಮನೆಗಳಿಗೆ ತೆರಳಿ ಸಾಲ ಮರು ಪಾವತಿಸು ವಂತೆ ಕಿರುಕುಳ ನೀಡುತ್ತಿದ್ದಾರೆ. ಹಲ್ಲೆ ಹಾಗೂ ಬೆದರಿಕೆ ಹಾಕುವ ಮೂಲಕ ರೈತರನ್ನು ಮಾನಸಿಕ ವಾಗಿ ಹಿಂಸಿಸುತ್ತಿದ್ದಾರೆ," ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Chikkaballapur News: ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಖಂಡಿಸಿ ಮನವಿ

ಬ್ಯಾಂಕ್ ಹಾಗೂ ಫೈನಾನ್ಸ್ ಕಂಪನಿಗಳ ಇಂತಹ ದೌರ್ಜನ್ಯ ತಡೆಯಲು ಸೂಕ್ತ ಕ್ರಮ ಕೈಗೊಳ್ಳ ಬೇಕು ಹಾಗೂ ರೈತರ ಹಿತ ಕಾಯಬೇಕು,ಎಂದು ಡಿ ವೈ ಎಸ್ ಪಿ ಅವರಿಗೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಡಿ ವೈ ಎಸ್ ಪಿ ಅವರು,ರೈತರ ಸಮಸ್ಯೆಗಳನ್ನು ಆಲಿಸಿ ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖ ಮುಖಂಡರಾದ ಶ್ರೀರಾಮ ರೆಡ್ಡಿ,ಪಿ ವಿ ಸೀತಾರಾಮ ರೆಡ್ಡಿ,ಅಶ್ವಥ್ ಗೌಡ,ಜಿ ಆರ್ ರಾಮಚಂದ್ರಪ್ಪ,ಮುನಿಪ್ಪ,ಹಾಗೂ ಸ್ಥಳೀಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.