ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಜೀವ ಉಳಿಸುವ ಮಹತ್ಕಾರ್ಯಕ್ಕೆ ಕೈಜೋಡಿಸಿದ 4237 ರಕ್ತದಾನಿಗಳಿಗೆ ಕೋಟಿ ನಮನ: ಕೆ.ವಿ. ನವೀನ್ ಕಿರಣ್

ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸ್ವಯಂಪ್ರೇರಿತ ರಕ್ತದಾನದ ಪಾತ್ರ ಅತ್ಯಂತ ಮಹತ್ವ ದ್ದಾಗಿದೆ. ಹಾಲು, ರೇಷ್ಮೆ ಮತ್ತು ಹೂವಿನ ಉತ್ಪಾದನೆಯಲ್ಲಿ ಹೆಸರು ಮಾಡಿರುವ ಚಿಕ್ಕಬಳ್ಳಾಪುರ ಜಿಲ್ಲೆ, ಇದೀಗ ರಕ್ತದಾನದ ಕ್ಷೇತ್ರದಲ್ಲಿಯೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಜಿಲ್ಲೆಯ ಪ್ರತಿಯೊಬ್ಬ ನಾಗರಿಕನಿಗೂ ಹೆಮ್ಮೆಯ ಸಂಗತಿಯಾಗಿದೆ

ಜೀವ ಉಳಿಸುವ ಅತ್ಯಂತ ಶ್ರೇಷ್ಠ ಸೇವೆಯಾದ ಸ್ವಯಂಪ್ರೇರಿತ ರಕ್ತದಾನದಲ್ಲಿ ಭಾಗವಹಿಸಿ ಮಾನವೀಯತೆಯ ಸಂದೇಶ ಸಾರಿದ ಪ್ರತಿಯೊಬ್ಬ ರಕ್ತದಾನಿಗೂ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ತಿಳಿಸಿದರು.

ಚಿಕ್ಕಬಳ್ಳಾಪುರ: ಜೀವ ಉಳಿಸುವ ಅತ್ಯಂತ ಶ್ರೇಷ್ಠ ಸೇವೆಯಾದ ಸ್ವಯಂಪ್ರೇರಿತ ರಕ್ತದಾನದಲ್ಲಿ ಭಾಗವಹಿಸಿ ಮಾನವೀಯತೆಯ ಸಂದೇಶ ಸಾರಿದ ಪ್ರತಿಯೊಬ್ಬ ರಕ್ತದಾನಿಗೂ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.23ರಂದು ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ 30ನೇ ದತ್ತಿ ದಿನಾಚರಣೆ ಹಾಗೂ ಸಿ.ವಿ. ವೆಂಕಟರಾಯಪ್ಪ ಅವರ 111ನೇ ಜನ್ಮದಿನದ ಅಂಗವಾಗಿ ಸಿವಿವಿ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಸಮಾಜದ ವಿವಿಧ ವರ್ಗಗಳಿಂದ ದೊರೆತ ಅಭೂತಪೂರ್ವ ಸ್ಪಂದನೆಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.

"ಕಳೆದ ಮೂರು ದಶಕಗಳಿಂದ ನಿರಂತರವಾಗಿ ಈ ರಕ್ತದಾನ ಶಿಬಿರ ಆಯೋಜಿಸಿಕೊಂಡು ಬರುತ್ತಿದ್ದೇವೆ. ವರ್ಷದಿಂದ ವರ್ಷಕ್ಕೆ ರಕ್ತದಾನಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಮಾಜದಲ್ಲಿ ಮಾನವೀಯ ಮೌಲ್ಯಗಳು ಇನ್ನಷ್ಟು ಗಟ್ಟಿಯಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಇದು ನಮ್ಮ ಸಂಸ್ಥೆಯ ಸಾಧನೆಯಷ್ಟೇ ಅಲ್ಲ, ಜಿಲ್ಲೆಯ ಜನತೆಯ ಸೇವಾ ಮನೋಭಾವದ ಪ್ರತೀಕವಾಗಿದೆ" ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ದೊಡ್ಡ ಮನೆಯ ನಂದಾದೀಪ ಚೆನ್ನಮ್ಮ, ಅವರ ಆದರ್ಶಗಳು ಜೆಡಿಎಸ್‌ಗೆ ದಾರಿದೀಪ: ಮುಕ್ತ ಮುನಿಯಪ್ಪ

"ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸ್ವಯಂಪ್ರೇರಿತ ರಕ್ತದಾನದ ಪಾತ್ರ ಅತ್ಯಂತ ಮಹತ್ವ ದ್ದಾಗಿದೆ. ಹಾಲು, ರೇಷ್ಮೆ ಮತ್ತು ಹೂವಿನ ಉತ್ಪಾದನೆಯಲ್ಲಿ ಹೆಸರು ಮಾಡಿರುವ ಚಿಕ್ಕಬಳ್ಳಾಪುರ ಜಿಲ್ಲೆ, ಇದೀಗ ರಕ್ತದಾನದ ಕ್ಷೇತ್ರದಲ್ಲಿಯೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಜಿಲ್ಲೆಯ ಪ್ರತಿಯೊಬ್ಬ ನಾಗರಿಕನಿಗೂ ಹೆಮ್ಮೆಯ ಸಂಗತಿಯಾಗಿದೆ" ಎಂದರು.

ಒಂದೇ ದಿನ ನಡೆದ ಶಿಬಿರದಲ್ಲಿ 4237 ಯೂನಿಟ್ ರಕ್ತ ಸಂಗ್ರಹವಾಗಿರುವುದು ಅನೇಕ ಜೀವಗಳನ್ನು ಉಳಿಸಲು ನೆರವಾಗಲಿದ್ದು, ಈ ಸಾಧನೆ ಯಾವುದೇ ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯಿಂದ ಸಾಧ್ಯ ವಾದುದಲ್ಲ. ಸಾವಿರಾರು ರಕ್ತದಾನಿಗಳು, ನೂರಾರು ಸ್ವಯಂಸೇವಕರು, ವಿವಿಧ ರಕ್ತನಿಧಿ ಕೇಂದ್ರ ಗಳು, ವೈದ್ಯರು, ಸಿಬ್ಬಂದಿ ಹಾಗೂ ಜನರ ಸಹಕಾರದಿಂದಲೇ ಈ ಮಹತ್ಕಾರ್ಯ ಯಶಸ್ವಿಯಾಗಿದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

"ನಮ್ಮ ಸಂಸ್ಥೆಯ ಮೇಲೆ ಜಿಲ್ಲೆಯ ಜನರು ಇಟ್ಟಿರುವ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವನ್ನು ಸದಾ ಗೌರವದಿಂದ ಉಳಿಸಿಕೊಳ್ಳುವ ಪ್ರಯತ್ನವನ್ನು ಮುಂದುವರಿಸುತ್ತೇವೆ. ಈ ಯಶಸ್ಸಿನಲ್ಲಿ ಪಾಲುದಾರರಾದ ಪ್ರತಿಯೊಬ್ಬ ರಕ್ತದಾನಿ, ನಮ್ಮ ಸಿಬ್ಬಂದಿ, ಸ್ವಯಂಸೇವಕರು, ರಕ್ತನಿಧಿ ಕೇಂದ್ರಗಳ ವೈದ್ಯರು ಮತ್ತು ಸಿಬ್ಬಂದಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ವಿಶೇಷವಾಗಿ ಜಿಲ್ಲೆಯ ಜನತೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ" ಎಂದು ತಿಳಿಸಿದರು.

25cbpm3u ok

2024ರಲ್ಲಿ ದೆಹಲಿಯಲ್ಲಿ ನಡೆದ ಶಿಬಿರದಲ್ಲಿ 2960 ಯೂನಿಟ್ ಹಾಗೂ 2025ರಲ್ಲಿ ಚಿಂತಾಮಣಿ ಯಲ್ಲಿ ನಡೆದ ಶಿಬಿರದಲ್ಲಿ 3246 ಯೂನಿಟ್ ರಕ್ತ ಸಂಗ್ರಹವಾಗಿದ್ದು, ಈ ಬಾರಿ 4237 ಯೂನಿಟ್ ರಕ್ತ ಸಂಗ್ರಹಿಸುವ ಮೂಲಕ ಹೊಸ ಮೈಲಿಗಲ್ಲು ನಿರ್ಮಿಸಲಾಗಿದೆ ಎಂದು ಹೇಳಿದರು.

ಶಿಬಿರದಲ್ಲಿ 4800ಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆಗೆ ಒಳಪಟ್ಟಿದ್ದು, ಅವರಲ್ಲಿ 4237 ಮಂದಿ ಅರ್ಹರೆಂದು ಗುರುತಿಸಿ ರಕ್ತದಾನ ಮಾಡಿದರು. ರಕ್ತದಾನಿಗಳಿಗಾಗಿ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನೂ ಮಾಡಲಾಗಿತ್ತು ಎಂದು ಮಾಹಿತಿ ನೀಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಜಯರಾಮ್ ಮಾತನಾಡಿ, "ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಲಾದ ಈ ಬೃಹತ್ ರಕ್ತದಾನ ಶಿಬಿರದಲ್ಲಿ 4237 ಯೂನಿಟ್ ರಕ್ತ ಸಂಗ್ರಹವಾಗಿರುವುದು ಅತ್ಯಂತ ಶ್ಲಾಘನೀಯ ಸಾಧನೆ. ಈ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಕರ್ನಾಟಕ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿರುವುದು ಜಿಲ್ಲೆಯ ಹೆಮ್ಮೆಯ ವಿಷಯವಾಗಿದೆ. ಈ ಕಾರ್ಯಕ್ಕೆ ಸಂಸ್ಥೆಯ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಹಾಗೂ ಅವರ ತಂಡ ಅಭಿನಂದನಾರ್ಹರು. ಜಿಲ್ಲೆಯ ಇತರೆ ಸಂಘ-ಸಂಸ್ಥೆಗಳೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸ್ವಯಂಪ್ರೇರಿತ ರಕ್ತದಾನದ ಬಗ್ಗೆ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬೇಕು" ಎಂದು ಮನವಿ ಮಾಡಿದರು.

ಈ ವೇಳೆ ಉದ್ಯಮಿ ಮಹೇಶ್, ಅನುಆನಂದ್, ಮತ್ತಿತರರು ಇದ್ದರು.