ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Shidlaghatta News: ಹೆಲ್ಮೆಟ್ ಜೀವ ರಕ್ಷಣೆ ಸಾಧ್ಯವಾಗುತ್ತದೆ

18 ವರ್ಷದೊಳಗಿನ ಮಕ್ಕಳು ವಾಹನ ಚಲಾಯಿಸುವುದು ಹಾಗೂ ವಿಮೆ ಇಲ್ಲದೆ ವಾಹನ ಚಾಲನೆ, ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಮಾಡುವುದರಿಂದ ರಸ್ತೆ ಅಪಘಾತ ಸಂಭವಿಸಿ ಜನರು ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಾರೆ. ಅತಿವೇಗವಾಗಿ ವಾಹನ ಚಲಾಯಿಸುವುದು, ವಾಹನ ಚಾಲನೆಯಲ್ಲಿ ನಿರ್ಲಕ್ಷ್ಯ, ಮದ್ಯಪಾನ ಅಥವಾ ಅಮಲು ಪದಾರ್ಥಗಳನ್ನು ಸೇವಿಸಿ ಚಾಲನೆ ಮಾಡುವುದು ಕೂಡ ಅಪಘಾತಗಳು ಸಂಭವಿಸಲು ಪ್ರಮುಖ ಕಾರಣಗಳಾಗಿವೆ.

Shidlaghatta News: ಹೆಲ್ಮೆಟ್ ಜೀವ ರಕ್ಷಣೆ ಸಾಧ್ಯವಾಗುತ್ತದೆ

ಶಿಡ್ಲಘಟ್ಟ ನಗರದ ಪೊಲೀಸ್ ಠಾಣೆ ಮುಂಭಾಗ ಆಯೋಜಿಸಿದ್ದ ಪೊಲೀಸ್ ಇಲಾಖೆ ಹಾಗೂ ಕಾನೂನು ಸೇವಾ ಇಲಾಖೆ ವತಿಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. -

Ashok Nayak
Ashok Nayak Jan 6, 2026 10:19 PM

ಶಿಡ್ಲಘಟ್ಟ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವುದರಿಂದ ಅಪಘಾತದ ಸಂದರ್ಭ ಜೀವ ರಕ್ಷಣೆ ಸಾಧ್ಯವಾಗುತ್ತದೆ ಎಂದು ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಷಾ(Civil Judge Mohammad Roshan Shah) ಹೇಳಿದರು.

ನಗರದ ಪೊಲೀಸ್ ಠಾಣೆ ಮುಂಭಾಗ ಆಯೋಜಿಸಿದ್ದ ಪೊಲೀಸ್ ಇಲಾಖೆ ಹಾಗೂ ಕಾನೂನು ಸೇವಾ ಇಲಾಖೆ ವತಿಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು ಪ್ರತಿಯೊಂದು ಮನೆಯಲ್ಲಿ ಕಾರು ಅಥವಾ ದ್ವಿಚಕ್ರ ವಾಹನ ಇರುತ್ತದೆ ನಿಮ್ಮ ಅಮೂಲ್ಯ ಜೀವನವನ್ನು ಉಳಿಸಿಕೊಳ್ಳಿ, ಒಂದೇ ತಲೆ ಒಂದೇ ಜೀವ ಒಂದು ಹೆಲ್ಮೆಟ್ ಎಂದರು.

ಹೆಲ್ಮೆಟ್ ಇಲ್ಲದೆ ಸಂಚರಿಸುವ ವಾಹನಗಳನ್ನು ಪೊಲೀಸರು ಹಿಡಿದಾಗ ಯಾರೂ ಬಂದು ಬಿಡಿಸಬಹುದು ಅದರೆ ಹೆಲ್ಮೆಟ್ ಇಲ್ಲದೆ ನಿಮ್ಮ ಜೀವ ಹೋದರೆ ಯಾರು ಬಂದು ಜೀವ ಕೊಡಲು ಸಾಧ್ಯ? ಎಂದು ಪ್ರಶ್ನಿಸಿದ ಅವರು ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಬಳಿಸಿದಾಗ ಅಪಘಾತದಲ್ಲಿ ಪ್ರಾಣ ರಕ್ಷಿಸಿಕೊಳ್ಳಲು ಬಹುತೇಕ ಸಾಧ್ಯವಾಗಲಿದೆ ಹಾಗಾಗಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಕಾನೂನು ಪರಿಪಾಲನೆಗೆ ಸಹಕಾರ ನೀಡುವ ಮೂಲಕ ಕೈ ಜೋಡಿಸುವಂತಾಗ ಬೇಕೆಂದು ಮನವಿ ಮಾಡಿದರು.

Shidlaghatta News: ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ

ಸಿಪಿಐ ಆನಂದ್ ಕುಮಾರ್ ಮಾತನಾಡಿ,18 ವರ್ಷದೊಳಗಿನ ಮಕ್ಕಳು ವಾಹನ ಚಲಾಯಿಸುವುದು ಹಾಗೂ ವಿಮೆ ಇಲ್ಲದೆ ವಾಹನ ಚಾಲನೆ, ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಮಾಡುವುದರಿಂದ ರಸ್ತೆ ಅಪಘಾತ ಸಂಭವಿಸಿ ಜನರು ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಾರೆ. ಅತಿವೇಗವಾಗಿ ವಾಹನ ಚಲಾಯಿಸುವುದು, ವಾಹನ ಚಾಲನೆಯಲ್ಲಿ ನಿರ್ಲಕ್ಷ್ಯ, ಮದ್ಯಪಾನ ಅಥವಾ ಅಮಲು ಪದಾರ್ಥಗಳನ್ನು ಸೇವಿಸಿ ಚಾಲನೆ ಮಾಡುವುದು ಕೂಡ ಅಪಘಾತಗಳು ಸಂಭವಿಸಲು ಪ್ರಮುಖ ಕಾರಣಗಳಾಗಿವೆ. ಆದಕಾರಣ ಶಾಲಾ– ಕಾಲೇಜುಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ರಸ್ತೆ ನಿಯಮಗಳ ಕುರಿತು ತಿಳಿವಳಿಕೆ ನೀಡಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸುಕನ್ಯಾ, ಹೆಚ್ಚುವರಿ ನ್ಯಾಯಾ ಧೀಶರಾದ ರಂಜಿತಾ, ಹಾಗೂ ಮಹಮದ್ ಖಾಜಾ, ಸರ್ಕಾರಿ ಅಭಿಯಂತರರು ರೂಪ, ವಕೀಲರ ಅಧ್ಯಕ್ಷ ನಾರಾಯಣಸ್ವಾಮಿ, ಭಾಸ್ಕರ್, ಮುನಿಶ್ಯಾಮೇಗೌಡ, ಪಿಎಸ್ಐ ಸತೀಶ್, ಪಿಎಸ್ಐ ವೇಣುಗೋಪಾಲ ಮತ್ತಿತರರು ಹಾಜರಿದ್ದರು.