Bagepally News: ಡಿ.12 ರಿಂದ ಹೆಲ್ಮೆಟ್ ಕಡ್ಡಾಯ
ಮುಖ್ಯ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅವರ ನೇತೃತ್ವದಲ್ಲಿ ದ್ವಿಚಕ್ರ ವಾಹನಗಳನ್ನು ತಡೆದು ಹೆಲ್ಮೆಟ್ ಧರಿಸದೆ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ತಮ್ಮ ಪ್ರಾಣ ಹಾನಿ ತಪ್ಪಿಸುವ ಸಲುವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನವನ್ನು ಚಾಲನೆ ಮಾಡಬೇಕು
-
ಬಾಗೇಪಲ್ಲಿ: ವಾಹನ ಸವಾರರ ಸುರಕ್ಷತೆ ಮತ್ತು ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಚಿಕ್ಕ ಬಳ್ಳಾಪುರ ಜಿಲ್ಲೆಯಲ್ಲಿ ಡಿ. 12 ರಿಂದ ಹೆಲ್ಮೆಟ್ ಕಡ್ಡಾಯ ಮಾಡಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸ್ ಆದೇಶದ ಮೇರೆಗೆ ಹಿನ್ನೆಲೆಯಲ್ಲಿ ಬಾಗೇಪಲ್ಲಿ ತಾಲ್ಲೂಕು ಕಛೇರಿಯ ಮುಂದೆ ಮೊದಲ ದಿನ ಹೆಲ್ಮೆಟ್ ಧರಿಸಿದೇ ಬಂದ ದ್ವಿಚಕ್ರ ವಾಹನ ಸವಾರಿಗೆ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಬಿಸಿ ಮುಟ್ಟಿಸಿದರು.
ತದನಂತರ ಮಾತನಾಡಿ, ಡಿ.12 ರಿಂದ ತಾಲ್ಲೂಕಿನಾದ್ಯಂತ ದ್ವಿಚಕ್ರ ವಾಹನ ಸವಾರರು ಕಡ್ಡಾಯ ವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತೆ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಹೇಳಿದರು.
ಮುಖ್ಯ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅವರ ನೇತೃತ್ವದಲ್ಲಿ ದ್ವಿಚಕ್ರವಾಹನಗಳನ್ನು ತಡೆದು ಹೆಲ್ಮೆಟ್ ಧರಿಸದೆ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ತಮ್ಮ ಪ್ರಾಣ ಹಾನಿ ತಪ್ಪಿಸುವ ಸಲುವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನವನ್ನು ಚಾಲನೆ ಮಾಡಬೇಕು.
ಇದನ್ನೂ ಓದಿ: Bagepally News: ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಲಿ : ಹಿರಿಯ ವಕೀಲ ಎ.ಜಿ.ಸುಧಾಕರ್
ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ತಂದು ತೋರಿಸಿ ತಮ್ಮ ವಾಹನದ ದಾಖಲಾತಿಗಳನ್ನು ತೋರಿಸುವ ಮೂಲಕ ತಮ್ಮ ದ್ವಿಚಕ್ರ ವಾಹನಗಳನ್ನು ತೆಗೆದುಕೊಂಡು ಹೋಗಬಹುದಾಗಿದೆ ಎಂದು ಹೇಳಿದರು.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವುದರಿಂದ ನಿಮ್ಮ ಅಮೂಲ್ಯ ಜೀವ ಉಳಿಯುತ್ತದೆ,
ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಇರುವುದರಿಂದ ಸಾಕಷ್ಟು ಅವಘಡಗಳು ಸಂಭವಿಸು ತ್ತಿದೆ. ನಿಮ್ಮನ್ನು ನಂಬಿ ನಿಮ್ಮ ಕುಟುಂಬ ಇರುತ್ತದೆ. ಅಪಘಾತವಾದರೆ ಮೊದಲು ತಲೆಗೆ ಏಟು ಬೀಳುತ್ತದೆ. ತಲೆಯನ್ನು ರಕ್ಷಣೆ ಮಾಡಿಕೊಳ್ಳಲು ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದರು.
ಅಪಘಾತಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿ ಪೊಲೀಸ್ ಇಲಾಖೆ ಮಹತ್ವದ ಮತ್ತು ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದರು.
ಮೊದಲ ದಿನವಾದ ಕಾರಣ ಯಾವುದೇ ಸವಾರರಿಗೆ ದಂಡ ವಿಧಿಸಲಿಲ್ಲ. ಬದಲಾಗಿ ದಂಡ ಪಾವತಿ ಮಾಡಬೇಕಿದ್ದ ಹಣದಲ್ಲೇ ಹೆಲ್ಮೆಟ್ ಖರೀದಿಸಿ ತರಬೇಕೆಂಬುದು ಕಡ್ಡಾಯವಾಗಿತ್ತು. ಆಮೇಲೆಷ್ಟೇ ವಾಹನ ಬಿಟ್ಟು ಕಳಿಸುತ್ತಿದ್ದರು.
ಈ ಸಂದರ್ಭದಲ್ಲಿ ಎ.ಎಸ್.ಐ.ಆನಂದ್,ಶ್ರೀನಿವಾಸ್, ಪೋಲಿಸ್ ಮಧುಸೂದನ್, ಹೋಂ ಗಾರ್ಡ್ ಕೃಷ್ಣಪ್ಪ ಮತ್ತಿತರರು ಇದ್ದರು.