ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅ.23ರಂದು ಅರ್ಹ ಪದವೀಧರ, ಶಿಕ್ಷಕ ಮತದಾರರಿಗೆ ಮಾತ್ರ ರಜೆ

ಭಾರತ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ ಹಾಗೂ ರಾಜ್ಯ ಸರ್ಕಾರದ ಅಧಿಸೂಚನೆ ಯನ್ವಯ ಅ.23ರ ಶುಕ್ರವಾರ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಯಾ ಮತಕ್ಷೇತ್ರಗಳ ವ್ಯಾಪ್ತಿಯ ಅರ್ಹ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ರಜೆ ನೀಡಲು ನಿರ್ಧರಿಸಲಾಗಿದೆ.

ಅ.23ರಂದು ಅರ್ಹ ಪದವೀಧರ, ಶಿಕ್ಷಕ ಮತದಾರರಿಗೆ ಮಾತ್ರ ರಜೆ

-

Profile
Ashok Nayak Oct 19, 2026 11:59 PM

ಚಿಕ್ಕಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ ದಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯ ಹಿನ್ನೆಲೆಯಲ್ಲಿ, ಅ.23ರಂದು ಮತದಾನ ಮಾಡಲು ಅನುಕೂಲವಾಗುವಂತೆ ಆಯಾ ಕ್ಷೇತ್ರಗಳ ಅರ್ಹ ಪದವೀಧರ ಮತ್ತು ಶಿಕ್ಷಕ ಮತದಾರರಿಗೆ ಮಾತ್ರ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

ಭಾರತ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ ಹಾಗೂ ರಾಜ್ಯ ಸರ್ಕಾರದ ಅಧಿಸೂಚನೆ ಯನ್ವಯ ಅ.23ರ ಶುಕ್ರವಾರ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಯಾ ಮತಕ್ಷೇತ್ರಗಳ ವ್ಯಾಪ್ತಿಯ ಅರ್ಹ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ರಜೆ ನೀಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Dasara Holidays 2026: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ಈ ಬಾರಿ 19 ದಿನ ದಸರಾ ರಜೆ!

ಈ ವಿಶೇಷ ಸಾಂದರ್ಭಿಕ ರಜೆ ಪಡೆಯಲು ಸಂಬಂಧಪಟ್ಟ ಮತದಾರರು ರಜೆ ಮಂಜೂರು ಮಾಡುವ ಅಧಿಕಾರ ಹೊಂದಿರುವ ಪ್ರಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ಸೌಲಭ್ಯವು ಸಂಬಂಧಪಟ್ಟ ಮತಕ್ಷೇತ್ರಗಳ ಅರ್ಹ ಪದವೀಧರ ಹಾಗೂ ಶಿಕ್ಷಕ ಮತದಾರರಿಗೆ ಮಾತ್ರ ಅನ್ವಯಿಸಲಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ.