ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Shidlaghatta News: ಎಸ್'ಎಸ್'ಎಲ್'ಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ

ನಗರದ ಮಾರಮ್ಮ ವೃತ್ತದಲ್ಲಿರುವ ಮರಗೆಲಸ ಕಚೇರಿಯಲ್ಲಿ ತಾಲೂಕು ಮರಗೆಲಸ ಕಾರ್ಮಿಕ ಸಂಘ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಸಾಧನೆ ಸಮಾಜಕ್ಕೆ ಹೆಮ್ಮೆ ತರಿಸುವಂತ ದ್ದಾಗಿದೆ

ಶಿಡ್ಲಘಟ್ಟ: ಎಸ್‌ಎಸ್‌ಎಲ್‌ಸಿ ಪರೀಕ್ಷೆ(SSLC Examination)ಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿಯರ ಸಾಧನೆ ಶ್ಲಾಘನೀಯವಾಗಿದೆ ಎಂದು ತಾಲೂಕು ಮರಗೆಲಸ ಕಾರ್ಮಿಕ ಸಂಘದ ಅಧ್ಯಕ್ಷ ಪ್ರದೀಪ್ (ದೀಪು) ಅಭಿಪ್ರಾಯಪಟ್ಟರು.

ನಗರದ ಮಾರಮ್ಮ ವೃತ್ತದಲ್ಲಿರುವ ಮರಗೆಲಸ ಕಚೇರಿಯಲ್ಲಿ ತಾಲೂಕು ಮರಗೆಲಸ ಕಾರ್ಮಿಕ ಸಂಘ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಸಾಧನೆ ಸಮಾಜಕ್ಕೆ ಹೆಮ್ಮೆ ತರಿಸುವಂತ ದ್ದಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Shidlaghatta News: ಮಹನೀಯರ ಮಾರ್ಗದಲ್ಲಿ ಸಾಗಿದರೆ ಸಮಾಜ ಅಭಿವೃದ್ಧಿ

ಇಂತಹ ಸಾಧನೆಗಳು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ. ಶಿಕ್ಷಣವೇ ಭವಿಷ್ಯವನ್ನು ರೂಪಿಸುವ ಪ್ರಮುಖ ಅಸ್ತ್ರವಾಗಿದ್ದು, ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು ಹಾಗೂ ದೃಢ ಸಂಕಲ್ಪದೊಂದಿಗೆ ಮುಂದುವರಿದರೆ ಇನ್ನಷ್ಟು ಉನ್ನತ ಸ್ಥಾನಗಳನ್ನು ತಲುಪಬಹುದು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಕಮಿಟಿ ಸಂಸ್ಥಾಪಕ ಅಧ್ಯಕ್ಷ ಸಿಎಂ ಬೈರೇಗೌಡ, ಸನಾತನ ಜನಸೇನಾ ಸೇವಾದಳ ಅಧ್ಯಕ್ಷ ಬುಜ್ಜಿ ನಾಯಕ್, ದಿನೇಶ್ ಬಾಬು, ರಾಧಾಕೃಷ್ಣ, ಚೆಲುವರಾಜ್, ನರೇಶ್, ಪ್ರಮೋದ್ ರೆಡ್ಡಿ, ದೇವಪ್ಪ, ಮಧುಲತಾ, ಶಂಶೇರ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.