ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹೂವಿನ ಕರಗ ಮಹೋತ್ಸವ ಭಕ್ತಿ ಸಂಭ್ರಮ: ಗಣ್ಯರಿಂದ ದೇವಿ ದರ್ಶನ

ನಗರದ ಮುತ್ತೂರು ಬೀದಿಯಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಕರಗತಮ್ಮ ದೇವಿ ದೇವಸ್ಥಾನ ದಲ್ಲಿ 66ನೇ ವರ್ಷದ ಹೂವಿನ ಕರಗ ಮಹೋತ್ಸವವನ್ನು ಭಕ್ತಿಭಾವ ದಿಂದ ಹಾಗೂ ಅದ್ದೂರಿ ಯಾಗಿ ಆಚರಿಸಲಾಯಿತು. ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು, ಅಲಂಕಾರ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಭಕ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು ತಮ್ಮ ಭಕ್ತಿಯನ್ನು ಅರ್ಪಿಸಿದರು.

ಶಿಡ್ಲಘಟ್ಟ: ನಗರದ ಮುತ್ತೂರು ಬೀದಿಯಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಕರಗತಮ್ಮ ದೇವಿ ದೇವಸ್ಥಾನದಲ್ಲಿ 66ನೇ ವರ್ಷದ ಹೂವಿನ ಕರಗ ಮಹೋತ್ಸವವನ್ನು ಭಕ್ತಿಭಾವ ದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.

ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು, ಅಲಂಕಾರ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಭಕ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು ತಮ್ಮ ಭಕ್ತಿಯನ್ನು ಅರ್ಪಿಸಿದರು.

ಇದನ್ನೂ ಓದಿ: Bengaluru Karaga: ಇಂದು ಐತಿಹಾಸಿಕ ಹೂವಿನ ಕರಗ ಮೆರವಣಿಗೆ, ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

ಈ ಸಂದರ್ಭದಲ್ಲಿ ಸಮಾಜ ಸೇವಕ ರಾಜೀವ್ ಗೌಡ, ಬಿಜೆಪಿ ಮುಖಂಡ ಸೀಕಲ್ ರಾಮ ಚಂದ್ರಗೌಡ, ಡಾ.ನಾರಾಯಣರಾವ್, ರಾಜಣ್ಣ ಸೇರಿದಂತೆ ಹಲವು ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.

ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಿಪಿಐ ಆನಂದ್ ಅವರ ನೇತೃತ್ವದಲ್ಲಿ ಪಿಎಸ್ಐ ವೇಣುಗೋಪಾಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದ್ದರು.