ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bagepally News: ಬಡ ಕುಟುಂಬಗಳಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಅವಕಾಶ

ಗ್ರಾಮೀಣ ಭಾಗದ ಬಡ ಕುಟುಂಬಗಳಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳನ್ನು 2025-26 ನೇ ಸಾಲಿನಲ್ಲಿ ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಈ ಕಾರ್ಯಾಗಾರವು ಹಾಸ್ಟೆಲ್ ವಿದ್ಯಾರ್ಥಿ ಗಳಿಗೆ ಉಚಿತವಾಗಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿರುವುದು ಅತ್ಯಂತ ಸ್ವಾಗತಾರ್ಹ.

ವಿದ್ಯಾರ್ಥಿಗಳಿಗೆ ಉಚಿತ ಮಾರ್ಗದರ್ಶನ, ತರಬೇತಿ ಸ್ವಾಗತಾರ್ಹ

-

Ashok Nayak
Ashok Nayak Jan 17, 2026 11:41 PM

ಬಾಗೇಪಲ್ಲಿ: ಗ್ರಾಮೀಣ ಭಾಗದ ಬಡ ಕುಟುಂಬಗಳಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾ ತ್ಮಕ ಪರೀಕ್ಷೆಗಳ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳನ್ನು 2025-26 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಈ ಕಾರ್ಯಾಗಾರವು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿರುವುದು ಅತ್ಯಂತ ಸ್ವಾಗ ತಾರ್ಹ. ನೀವು ಇದರ ಸದುಪಯೋಗ ಪಡೆದುಕೊಂಡು, ನಿಮ್ಮ ಕನಸುಗಳ ಕಡೆಗೆ ಹೆಜ್ಜೆ ಹಾಕಿ” ಎಂದು ಬಾಗೇಪಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತಾರ್ಣಾಧಿಕಾರಿಗಳಾದ ಆರ್.ಶಿವಪ್ಪ ವಿದ್ಯಾರ್ಥಿಗಳನ್ನು ಕರೆ ನೀಡಿದರು.

ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ನಂತರದ ಹಾಸ್ಟೆಲ್ ವಿಧ್ಯಾರ್ಥಿ ನಿಲಯದಲ್ಲಿ ಮೂರು ತಿಂಗಳ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗ ದರ್ಶನ ತರಬೇತಿ ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಗ್ರಾಮೀಣ ಭಾಗದ ಬಡ ಹಾಸ್ಟೆಲ್ ವಿದ್ಯಾರ್ಥಿಗಳ ಬೆಳವಣಿಗೆಗೆ ಬೆಂಬಲ ನೀಡುವ ಉದ್ದೇಶದಿಂದ ಭವಿಷ್ಯದ ಸ್ಪರ್ಧಾ ತ್ಮಕ ಪರೀಕ್ಷೆಗಳ ತಯಾರಿಗೆ  ಹಮ್ಮಿಕೊಂಡಿದ್ದ ಉಚಿತ ಕಾರ್ಯಾಗಾರವನ್ನು ಉದ್ಘಾಟನೆ ಮಾಡ ಮಾತನಾಡಿದರು.

ಇಂದಿನಿಂದ ಆರಂಭಗೊಂಡು ಮೂರು ಕಾಲ ಕಾರ್ಯಾರವು ನಡೆದಿದ್ದು, ಹಾಸ್ಟೆಲ್ ವಿದ್ಯಾರ್ಥಿ ಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಅವರು ಹೇಳಿದರು.

ಇದನ್ನೂ ಓದಿ: Bagepally News: ನಿವೃತ್ತ ಯೋಧರಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ಪರಿಕರಗಳ ವಿತರಣೆ

“ಇಂತಹ ಕಾರ್ಯಾಗಾರಗಳು ಗ್ರಾಮೀಣ ಭಾಗದ ಬಡ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದಾರಿದೀಪವಾಗಿ ಮಾರ್ಗದರ್ಶನ ನೀಡುತ್ತವೆ. ಇದು ಅವರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು  ನಮ್ಮ ಇಲಾಖೆ ಕಲ್ಪಿಸುತ್ತದೆ ಎಂದು ಅವರು ಹೇಳಿದರು.

ಪಿಎಸ್ಐ, ಕೆಎಎಸ್, ಐಎಎಸ್, ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಕರ ನೇಮಕಾತಿ, ಟಿಇಟಿ, ಬ್ಯಾಂಕಿಂಗ್, ಆರ್ಆರ್ಬಿ, ಗ್ರಾಮ ಆಡಳಿತಾಧಿಕಾರಿ, ಪಿಡಿಒ, ಪಿಯು ಮತ್ತು ಡಿಗ್ರಿ ಕಾಲೇಜು ಉಪನ್ಯಾಸಕರು, ಎಲ್ಐಸಿ, ಹಾಸ್ಟೆಲ್ ವಾರ್ಡನ್, ಎಸ್ಎಸ್ಸಿ, ವಿಟಿಯು ಪಿಜಿ ಸಿಇಟಿ ಮತ್ತು ಎಂಎಟಿ ತರಬೇತಿ ನೀಡಲಾಗುತ್ತಿದೆ. ನುರಿತ ಉಪನ್ಯಾಸಕರು, ಸಂಪನ್ಮೂಲ ವ್ಯಕ್ತಿಗಳ ರಿಂದ ಅಭ್ಯರ್ಥಿಗಳನ್ನು ತರಬೇತುಗೊಳಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮುನಿರತ್ನಮ್ಮ,ಮಾತನಾಡಿ
ಪ್ರತಿ ದಿನ ಪತ್ರಿಕೆಗಳನ್ನು ಓದುವುದರ ಜತೆಗೆ ಟಿಪ್ಪಣಿ ಮಾಡುವುದು. ಅಂಕಿ- ಅಂಶಗಳು, ಘಟನೆ ಗಳು, ಸುದ್ದಿಗಳು, ಸಂಪಾದಕೀಯ, ಓದುಗರ ಅಂಕಣ, ಲೇಖನಗಳು, ಪುರವಣಿ ಲೇಖನಗಳು ಇತ್ಯಾದಿ. ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುತ್ತವೆ. ಇದೇ ರೀತಿ ನಿರಂತರ ಓದುವುದರಿಂದ ಪ್ರಚಲಿತ ವಿಷಯದ ಪ್ರಶ್ನೆಗಳಿಗೆ ಉತ್ತರಿಸುವುದು ಸುಲಭ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳ ತರಬೇತಿದಾರ ಶ್ರೀನಿವಾಸ್ ಹಾಗೂ ಜಿ.ವಿ.ಚಂದ್ರಶೇಖರ್ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಯಾವುದೇ ಅಭ್ಯರ್ಥಿ, ಸಾಮಾನ್ಯ ಜ್ಞಾನ ಪತ್ರಿಕೆಗೆ ಪರಿಣಾಮಕಾರಿಯಾಗಿ ಸಿದ್ಧವಾಗಲು ದಿನಪತ್ರಿಕೆಗಳ ಓದು ಕಡ್ಡಾಯ. ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ಓದುವವರ ಸಿದ್ಧತೆಗೆ ಒಂದು ನಿರ್ದಿಷ್ಟ ಕ್ರಮವಿದ್ದರೇ ಮಾತ್ರ ಯಶಸ್ಸು ಸಾಧ್ಯ. ಸ್ಪರ್ಧಾತ್ಮಕ ಪರೀಕ್ಷೆ ತಯಾರಿಕೆ ಇಲಾಖೆವತಿ ಯಿಂದ ಉತ್ತಮವಾದ ಸಂಪನ್ಮೂಲ ವ್ಯಕ್ತಿಯನ್ನು ಕರೆಸಿ ಈ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತರಬೇತಿಯನ್ನು ನೀಡುತ್ತಿದ್ದಾರೆ ಇದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮೇಲ್ವಿ ಚಾರಕರಾದ ಎಸ್. ವೆಂಕಟೇಶ್, ಬಿ. ಎಸ್. ಕವಿತ, ರತ್ನಮಾಲ, ಎಂ.ಸಿ. ನರಸಿಂಹಪ್ಪ, ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು ಹಾಜರಿದ್ದರು.