ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Dr.M.C.Sudhakar: ಫೆ.23ರಂದು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಾರ್ವಜನಿಕ ಸಭೆ: ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮೂರು ಜಿಲ್ಲೆಗಳನ್ನು ಒಳಗೊಂಡ ಬೃಹತ್ ಸಾರ್ವಜನಿಕ ಸಭೆಯಾಗಿದೆ.ಮೂರು ಜಿಲ್ಲೆಗಳ ಎಲ್ಲ ತಾಲ್ಲೂಕುಗಳಿಂದ ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುತ್ತಾರೆ. ಕೇಂದ್ರ ಸರ್ಕಾರವು ಇಡೀ ದೇಶದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸು ತ್ತಿದೆ.

ಚಿಂತಾಮಣಿ: ನರೇಗಾ ಉದ್ಯೋಗ ಖಾತ್ರಿ ಯೋಜನೆ(MGNREGA) ರದ್ದುಗೊಳಿಸಿ ಸ್ಪಷ್ಟತೆ ಇಲ್ಲದ ಜಿ ವಿಬಿರಾಮ್ ಜಿ ಕಾಯ್ದೆ( VBG RAM G ಮಸೂದೆ, 2025)ಯನ್ನು ಜಾರಿ ಗೊಳಿಸಲು ಹೊರಟಿರುವುದನ್ನು ಖಂಡಿಸಿ ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಫೆ.23 ರಂದು ಚಿಕ್ಕಬಳ್ಳಾಪುರದ ಬೈಪಾಸ್ ರಸ್ತೆಯ ಅಗಲಗುರ್ಕಿ ಬಳಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ (Dr.M.C.Sudhakar) ತಿಳಿಸಿದರು.

ನಗರದ ಅಂಜನಿ ನಿವಾಸದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ದರು.

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮೂರು ಜಿಲ್ಲೆಗಳನ್ನು ಒಳಗೊಂಡ ಬೃಹತ್ ಸಾರ್ವಜನಿಕ ಸಭೆಯಾಗಿದೆ.ಮೂರು ಜಿಲ್ಲೆಗಳ ಎಲ್ಲ ತಾಲ್ಲೂಕುಗಳಿಂದ ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸುತ್ತಾರೆ. ಕೇಂದ್ರ ಸರ್ಕಾರವು ಇಡೀ ದೇಶದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸು ತ್ತಿದೆ. 2002 ರಲ್ಲಿದ್ದ ಮತದಾರರ ಪಟ್ಟಿಯ ಮ್ಯಾಪಿಂಗ್ ಮಡಲಿದ್ದು ಹೊಸದಾಗಿ ಸೇರ್ಪಡೆ ಯಾಗಿದ್ದವರನ್ನು ತೆಗೆದುಹಾಕಲಾಗುತ್ತಿದೆ. 

ಇದನ್ನೂ ಓದಿ: Dr. M.C. Sudhakar: 2027ರ ಹೊತ್ತಿಗೆ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಯಲಿದೆ : ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್

ಹಿಂದಿನ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದ ಬೂತ್ ಹಂತದ ಏಜೆಂಟರು ಎಚ್ಚೆತ್ತುಕೊಳ್ಳಬೇಕು.ಅರ್ಹ ಮತದಾರರನ್ನು ಕೈಬಿಡದಂತೆ ಜಾಗೃತಿ ವಹಿಸಬೇಕು ಎಂದು ಸೂಚಿಸಿದರು.

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ ಸ್ಪಷ್ಟತೆ ಇಲ್ಲದ ವಿಬಿ ರಾಮ್ ಜಿ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದರ ಜನವಿರೋಧಿ ನೀತಿಗಳ ಕುರಿತು ಜನ ಜಾಗೃತಿ ಮೂಡಿಸಬೇಕಾಗಿದೆ. ಅನುದಾನವನ್ನು ಕಡಿತಗೊಳಿಸಲಾಗಿದೆ. ವಿವಿಧ ನಿರ್ಭಂಧಗಳನ್ನು ಹೇರಲಾಗಿದೆ. ರಾಜ್ಯ ಸರ್ಕಾರಗಳ ಮೇಲೆ ಹೊರೆ ಹಾಕುತ್ತಿದ್ದಾರೆ. 

ಮನ್ರೇಗಾ ದಲ್ಲಿ ರಾಜ್ಯ ಸರ್ಕಾರದ ಪಾಲಿ ಶೇ.10, ಕೇಂದ್ರದ್ದು ಶೇ.90 ರಷ್ಟಿತ್ತು. ರಾಜ್ಯ ಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ರಾಜ್ಯಗಳ ಪಾಲು ಶೇ.40 ಕ್ಕೆ ಎರಿಕೆ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಆರ್ಥಿಕ ಹೊರೆ ಎದುರಿಸಬೇಕಾಗುತ್ತದೆ ಎಂದರು.

ಕ್ಷೇತ್ರದ ಕಾಂಗ್ರೆಸ್ ನ ಎಲ್ಲಾ ಮುಖಂಡರು,ಕಾರ್ಯಕರ್ತರು ಭಾಗವಹಿಸಿದ್ದರು.